Tuesday, January 26, 2021

ಪಚ್ಚನಾಡಿ ಭೂಕುಸಿತ ಪ್ರಕರಣ- ರಾಜ್ಯ ಸರಕಾರದಿಂದ 14 ಕೋಟಿ ಬಿಡುಗಡೆ..!

ಪಚ್ಚನಾಡಿ ಭೂಕುಸಿತ ಪ್ರಕರಣ- ರಾಜ್ಯ ಸರಕಾರದಿಂದ 14 ಕೋಟಿ ಬಿಡುಗಡೆ..!

ಮಂಗಳೂರು : ಭಾರಿ ಮಳೆಯಿಂದಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಹಾಗೂ ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಭೂ ಕುಸಿತ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ ಭರತ್ ಶೆಟ್ಟಿಯವರ ಅವಿರತ ಶ್ರಮದ ಫಲವಾಗಿ ರಾಜ್ಯ ಸರಕಾರ 14 ಕೋಟಿ ಬಿಡುಗಡೆಗೊಳಿಸಿದೆ.

ಭೂ ಕುಸಿತ ಉಂಟಾಗಿರುವ ಪಚ್ಚನಾಡಿ, ಕುಡುಪು ಪ್ರದೇಶಗಳಿಗೆ ರಾಜ್ಯ ಸರಕಾರದ ನಗರಾಭಿವೃದ್ಧಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡುಗಡೆಗೊಳಿಸಲಾಗಿದೆ. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಪಚ್ಚನಾಡಿ, ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಉಂಟಾದ ಭೂ ಕುಸಿತದಿಂದ ಹಾನಿಗೊಳಗಾಗಿರುವ ಸಂತೃಪ್ತರಿಗೆ ಅಂದಾಜು 20 ಕೋಟಿ ಪರಿಹಾರ ಪಾವತಿಸುವಂತೆ ಸರಕಾರಕ್ಕೆ ವಿಶೇಷ ಮನವಿಯನ್ನು ಸಂಸದರು ಹಾಗೂ ಶಾಸಕರುಗಳು ವಿಶೇಷ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಎಸ್.ಎಫ್.ಸಿ 2019-20ನೇ ಸಾಲಿನ ವಿಶೇಷ ಅನುದಾನದಿಂದ 14 ಕೋಟಿ ಬಿಡುಗಡೆಗೊಳಿಸಿದೆ.

ಈ ಹಿಂದೆಯೇ ರಾಜ್ಯ ಸರಕಾರವು 8 ಕೋಟಿ ಅನುದಾನ ಬಿಡುಗಡೆಗೊಳಿಸಿತ್ತು. ಅದರ ಮುಂದಿನ ಹಂತವಾಗಿ 14 ಕೋಟಿ ಅನುದಾನವನ್ನು ಈಗ ಬಿಡುಗಡೆಗೊಳಿಸಿದೆ. ಅದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳು, ನಗರಾಭಿವೃದ್ಧಿ ಸಚಿವರು,ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿಯವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.