ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 5 ಲಕ್ಷ ರೂಪಾಯಿಯನ್ನು ಮಂಗಳೂರು ಶಾಸಕ ಕಾಮತ್ ಅವರು ವಿತರಿಸಿದರು.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಬೆಂಗ್ರೆ ಗ್ರಾಮದ ಮೀನುಗಾರ ಹೈದರಾಲಿ ಎಂಬವರ ಕುಟುಂಬಕ್ಕೆ ಸರಕಾರದ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಮಂಜೂರಾಗಿದ್ದು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಮುನೀಬ್ ಬೆಂಗ್ರೆ, ಸ್ಥಳೀಯ ಮುಖಂಡರಾದ ಸಲೀಂ ಬೆಂಗ್ರೆ, ಗಂಗಾಧರ್ ಸಾಲ್ಯಾನ್, ಮಸೀದಿಯ ಅಧ್ಯಕ್ಷರು, ತಹಶಿಲ್ದಾರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.