Connect with us

DAKSHINA KANNADA

ಆರ್‌ಎಸ್‌ಎಸ್‌, ಬಜರಂಗದಳ ಶಾಂತಿ ಕದಡಲು ಪ್ರೋಚೋದನೆ ನೀಡ್ತಾ ಇದೆ- ಸಚಿವ ಗುಂಡೂರಾವ್

Published

on

ಮಂಗಳೂರು: ಕಾನೂನು ಯಾರೇ ಕೈಗೆತ್ತಿಕೊಂಡರೂ ನಾವು ಸಹಿಸೋದಿಲ್ಲ ಅಂತಹವರ ವಿರುದ್ಧ ನಿರ್ಧ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಪಣಂಬೂರಿನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು ಮೊನ್ನೆಯೂ ಮೂರು ಜನರ ಬಂಧನ ಆಗಿದೆ. ಇಂತಹ ಘಟನೆಯಿಂದಾಗಿ ಜಿಲ್ಲೆಗೆ ಹೊರಗಿನ ಜನ ಬರಲು ಭಯ ಪಡ್ತಾರೆ. ಈ ಕಳಂಕದಿಂದ ಹೊರಬರಬೇಕಾದ್ರೆ ಸುರಕ್ಷಿತವಾದ ವಾತಾವರಣ ಸೃಷ್ಟಿ ಮಾಡಬೇಕು ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್‌ ಬಜರಂಗದಳ ಇಲ್ಲಿ ಶಾಂತಿ ಕದಡಲು ಪ್ರೋಚೋದನೆ ನೀಡ್ತಾ ಇದೆ. ಅವರು ಹೇಳಿದ್ದೇ ನಡೆಯಬೇಕು ಅಂತ ಅವರು ಅಂದುಕೊಂಡಿದ್ದಾರೆ. ಹೀಗಾಗಿ ಹಿಂದೂ ಹಿಂದುತ್ವ ಎಂದೆಲ್ಲಾ ಮಾತಾಡ್ತಾ ಇದ್ದಾರೆ. ಇತ್ತೀಚೆಗೆ ಕೊಡಗಿನಿಲ್ಲಿ ಒಬ್ಬ ಹಿಂದೂ ಚಾಕು ಇರಿದ ಕಾರಣ ಮುಸ್ಲಿಂ ವ್ಯಕ್ತಿ ಮೃತ ಪಟ್ಟಿದ್ದ. ಆದ್ರೆ ಅಲ್ಲಿ ಅದೊಂದು ದೊಡ್ಡ ಗಲಾಟೆಗೆ ಕಾರಣವಾಗಿಲ್ಲ. ಅದೇ ಅಲ್ಲಿ ಹಿಂದು ತೀರಿ ಹೋಗಿದ್ದರೆ ಇವರು ಇಡೀ ಊರಿಗೇ ಬೆಂಕಿ ಹಚ್ಚುತ್ತಿದ್ದರು. ಅ್ಯಾಂಟಿ ಕಮ್ಯುನಲ್ ವಿಂಗ್ ಫೆಲ್ಯೂರ್ ಆಗಿಲ್ಲ ಅವರು ಅವರದೇ ಆದ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಸಹೋದರತ್ವ ಹಾಗೂ ಕೋಮು ಸೌಹಾರ್ಧತೆ ನಮಗೆ ಮುಖ್ಯವಾಗಿದ್ದು, ಅನಂತಕುಮಾರ್, ನಳೀನ್ ಕುಮಾರ್ ಅವರಂತೆ ದ್ವೇಶ ನಮ್ಮ ಬಂಡವಾಳವಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

DAKSHINA KANNADA

ಮಂಗಳೂರು ಮೇಯರ್ ಫೋನ್‌ ಇನ್ ಕಾರ್ಯಕ್ರಮ; ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಜಾರಿ

Published

on

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜನರ ಸಮಸ್ಯೆ ಆಲಿಸಲು ಮೇಯರ್ ಇಂದು ಫೋನ್‌ ಇನ್ ಕಾರ್ಯಕ್ರಮ ನಡೆಸಿದ್ದಾರೆ. ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರು ಪ್ರತಿ ತಿಂಗಳು ಈ ಫೋನ್ ಇನ್ ಕಾರ್ಯಕ್ರಮ ನಡೆಸಿ ಜನಸ್ನೇಹಿ ಆಡಳಿತ ನೀಡಲು ಪ್ರಯತ್ನಿಸಿದ್ದಾರೆ. ಫೋನ್ ಮೂಲಕ ಬರುವ ದೂರುಗಳನ್ನು ಸ್ವೀಕರಿಸಿ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಸಮಸ್ಯೆಯನ್ನು ತಕ್ಷಣ ಬಗೆ ಹರಿಸಲು ಇದರಿಂದ ಸಾಧ್ಯವಾಗಿದೆ. ಕಳೆದ ತಿಂಗಳು ನಡೆದಿದ್ದ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸುಮಾರು 27 ದೂರುಗಳಲ್ಲಿ 24 ದೂರುಗಳನ್ನು ತಕ್ಷಣ ಬಗೆ ಹರಿಸಿದ್ದಾರೆ. ಈ ಬಾರಿಯೂ ಕೂಡಾ ಸುಮಾರು 26 ಕರೆಗಳು ಬಂದಿದ್ದು ಬಹುತೇಕ ಕರೆಗಳು ನಗರದ ಸ್ವಚ್ಚತೆ , ಸ್ವಯಂ ಘೋಷಿತ ಆಸ್ತಿ ತೆರಿಗೆ , ಹಾಗೂ ಲೈಸೆನ್ಸ್‌ ವಿಚಾರವಾಗಿತ್ತು.

ನಗರದ ಪಂಪ್‌ವೆಲ್‌ನ ಮಹಾವೀರ ವೃತ್ತವನ್ನು ಸುಂದರವಾಗಿಸಿದ್ರೂ ಅಲ್ಲಿ ಅಲೆಮಾರಿ ಕುಟುಂಬಗಳು ನಗರ ಸೌಂದರ್ಯ ಕೆಡಿಸಿರುವ ಬಗ್ಗೆ ದೂರು ಬಂದಿದೆ. ಅವರನ್ನು ಪೊಲೀಸರ ಸಹಾಯದಿಂದ ತೆರವು ಗೊಳಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.

ಅಲ್ಲದೇ, ಆಸ್ತಿ ತೆರಿಗೆ ವಿಚಾರದಲ್ಲಿ ಜನರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಎಲ್ಲಾ ಬಿಲ್‌ಗಳನ್ನು ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ನಾಳೆ ನಡೆಯುವ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಜನಸ್ನೇಹಿ ಆಡಳಿತ ನೀಡಲು ಪೋನ್ ಇನ್ ಕಾರ್ಯಕ್ರಮ ಸಹಕಾರಿಯಾಗಿದ್ದು, ಜನರು ಸಮಸ್ಯೆಗಳನ್ನು ಗಮನಕ್ಕೆ ತಂದಾಗ ತಕ್ಷಣ ಕ್ರಮ ಕೈಗೊಳ್ಳಲು ಸಹಕಾರಿ ಆಗುತ್ತದೆ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

Mangaluru: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಯುವಮೋರ್ಚಾ

Published

on

ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

 


ನಾಸಿರ್ ಹುಸೇನ್ ರಾಜೀನಾಮೆ ನೀಡಬೇಕು ಹಾಗೂ ಘೋಷಣೆ ಕೂಗಿದ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುವ ವಿಚಾರ ತಿಳಿದ ಪೊಲೀಸರು ಕಚೇರಿ ಬಳಿ ಹೆಚ್ಚಿನ ಭದ್ರತೆ ಏರ್ಪಡಿಸಿದ್ದರು.

ಕಾಂಗ್ರೆಸ್ ಕಚೇರಿ ಸುತ್ತ ಬ್ಯಾರಿಕೇಡ್ ಅಳವಡಿಸಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕದಂತೆ ತಡೆ ಒಡ್ಡಿದ್ದಾರೆ. ಕಚೇರಿ ಬಳಿ ಬಂದು ನಾಸಿರ್ ಹುಸೇನ್ ಹಾಗೂ ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Continue Reading

DAKSHINA KANNADA

ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು, ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು- ನಟ ಪ್ರಕಾಶ್ ರಾಜ್

Published

on

ಉಳ್ಳಾಲ: ತೊಕ್ಕೊಟ್ಟಿನಲ್ಲಿ ನಡೆದ ಡಿವೈಎಫ್‌ಐನ 12ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾವೇಶಕ್ಕೆ ಅತಿಥಿಯಾಗಿ ಆಗಮಿಸಿದ ಬಹುಬಾಷಾ ನಟ ಪ್ರಕಾಶ್ ರಾಜ್‌ ಭಾಷಣದ ಉದ್ದಕ್ಕೂ ಪ್ರಧಾನಿ ಮೋದಿಯವರನ್ನು ಏಕವಚನದಲ್ಲೇ ಸಂಭೋದಿಸಿ ಟೀಕೆ ಮಾಡಿದ್ದಾರೆ.

ಅಲ್ಲದೇ  ಬಹುಮತ ಎಲ್ಲ ದೇಶದಲ್ಲಿ ನಡೆಯಲ್ಲ, ಪ್ರಕೃತಿಗೆ ಬಹುಮತ ಸರಿಯಲ್ಲ, ಬಹುಮತನೇ ಆಗಬೇಕಾದ್ರೆ ಕಾಗೆ ರಾಷ್ಟ್ರೀಯ ಪಕ್ಷಿಯಾಗಬೇಕಿತ್ತು. ಹಸು ರಾಷ್ಟ್ರೀಯ ಪ್ರಾಣಿಯಾಗಬೇಕಿತ್ತು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

Continue Reading

LATEST NEWS

Trending