Friday, July 1, 2022

ಆರ್‌ ಎಸ್‌ಎಸ್‌ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್‌ ಎದೆನೋವು : ಖಾಸಾಗಿ ಆಸ್ಪತ್ರೆಗೆ ದಾಖಲು..!

ಮಂಗಳೂರು: ಆರೆಸ್ಸೆಸ್ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್‌ ಅವರಿಗೆ ಸ್ವಲ್ಪ ಮಟ್ಟಿನ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಡಾ. ಭಟ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮನೆಯಲ್ಲಿದ್ದಾಗ ಅವರಿಗೆ ಕಡಿಮೆ ರಕ್ತದೊತ್ತಡ ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು.

ಜತೆಗೆ ಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಭಟ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಆಂಜಿಯೋಗ್ರಾಮ್ ಮಾಡಲು ವೈದ್ಯರು ಸೂಚಿಸಿದ್ದಾರೆ.

ಸದ್ಯ ಭಟ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಆಂಜಿಯೋಗ್ರಾಮ್ ಮಾಡಲು ವೈದ್ಯರು ಸೂಚಿಸಿದ್ದಾರೆ. ಡಾ. ಭಟ್ ಚೇತರಿಸಿಕೊಂಡಿದ್ದು, ಯಾರೂ ಗಾಬರಿಗೆ ಒಳಗಾಗುವುದು ಬೇಡ ಎಂದು ಆಪ್ತ ವಲಯಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Hot Topics

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...