Connect with us

DAKSHINA KANNADA

ಪಾಳುಬಿದ್ದಿದೆ ಗಣರಾಜ್ಯೋತ್ಸವ ಪಾರ್ಕ್: ಕಾಯಕಲ್ಪ ಕಲ್ಪಿಸುವರೇ ಸಂಬಂಧ ಪಟ್ಟವರು..? 

Published

on

ಪಾಳುಬಿದ್ದಿದೆ ಗಣರಾಜ್ಯೋತ್ಸವ ಪಾರ್ಕ್: ಕಾಯಕಲ್ಪ ಕಲ್ಪಿಸುವರೇ ಸಂಬಂಧ ಪಟ್ಟವರು..? 

Ruined Republic Park:Related should take care of this park..

ಮಂಗಳೂರು: ಭಾರತವಿಂದು 72ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಆದರೆ ಗಣರಾಜ್ಯೋತ್ಸವ ಹೆಸರಿನಲ್ಲಿ ನೂರಾರು ಪಾರ್ಕ್‌ಗಳನ್ನು ಕೆಲವೊಂದು ಸಂಘ ಸಂಸ್ಥೆಗಳು ನಿರ್ಮಾಣ ಮಾಡಿವೆ.

ಆದರೆ ಸಾರ್ವಜನಿಕರ ಸಹಭಾಗಿತ್ವ ಇಲ್ಲದೇ ಇದ್ದಲ್ಲಿ ಯಾವುದೇ ಯೋಜನೆಗಳು ಸಫಲವಾಗುವುದು ಬಹಳ ಅಪರೂಪ. ಸಾರ್ವಜನಿಕರ ನೆರವಿಗೆ ಎಂದು ನವಮಂಗಳೂರು ಬಂದರು ಮಂಡಳಿ ವತಿಯಿಂದ ಎನ್‌ಎಂಪಿಟಿ ಬಳಿ ನಿರ್ಮಾಣ ಮಾಡಲಾದ ಗಣರಾಜ್ಯೋತ್ಸವ ಪಾರ್ಕ್‌ ಇದೀಗ ಪಾಳು ಬಿದ್ದಿದೆ. ಇಲ್ಲಿ ಎಲ್ಲಾ ಸುಸಜ್ಜಿತ ವ್ಯವಸ್ಥೆಗಳನ್ನು ಮಾಡಲಾಗಿದ್ದು  ಬಾವಿಯೂ ಇದೆ. ಜನರಿಗೆ ಕುಳಿತುಕೊಳ್ಳಲು ಕಲ್ಲಿನ ಬೆಂಚು, ಹುಲ್ಲು ಹಾಸು ಎಲ್ಲವೂ ಇದೆ. ಆದರೆ ಈ ಪಾರ್ಕ್‌ಗೆ ಜನತೆ ಬಾರದೇ ಇರುವುದರಿಂದ ಇದೀಗ ಇದು ಪಾಳು ಬಿದ್ದಿದೆ.ಇದನ್ನು ಇನ್ನಾದರೂ ಸ್ವಚ್ಛಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಕಲ್ಪಿಸಬೇಕಾದ ಅಗತ್ಯವಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಜನತೆ ಸಂಭ್ರಮದಲ್ಲಿರುವಾಗ ಗಣರಾಜ್ಯೋತ್ವವ ಪಾರ್ಕ್‌ ಎಂದೇ ಹೆಸರು ಪಡೆದಿರುವ ಪಾರ್ಕ್‌ ಈ ರೀತಿ ಪಾಳು ಬಿದ್ದಿರುವುದು ಶೋಚನೀಯ ಸಂಗತಿಯಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending