Connect with us

LATEST NEWS

ಕಟ್ಟಡದ ಬೆಂಕಿ ನಂದಿಸುವಾಗ ನೀರು ಖಾಲಿ; ಅಗ್ನಿಗೆ ಆಹುತಿಯಾದ ಅಗ್ನಿಶಾಮಕ ಸಿಬ್ಬಂದಿ

Published

on

ಬಿಹಾರ : ಸಾಮಾನ್ಯವಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯಿಂದ ಜನರನ್ನು ರಕ್ಷಿಸುತ್ತಾರೆ. ಬೆಂಕಿ ಅನಾಹುತಗಳು ಇನ್ನಷ್ಟು ಬಿಗಡಾಯಿಸದಂತೆ ಎಚ್ಚರ ವಹಿಸುತ್ತಾರೆ. ಆದ್ರೆ, ಇಲ್ಲಿ ಆಗಿದ್ದು ಬೇರೆ. ಹೌದು,  ಮನೆಯೊಂದರಲ್ಲಿ ಅಗ್ನಿ ಅವಘ*ಡ ಸಂಭವಿಸಿತ್ತು. ಇಡೀ ಮನೆಯನ್ನು ಆವರಿಸುತ್ತಿದ್ದ ಬೆಂಕಿಯನ್ನು ನಂದಿಸುವ ಸಲುವಾಗಿ ಅಗ್ನಿಶಾಮಕ ದಳ ಕಾರ್ಯಪ್ರವೃತ್ತವಾಗಿತ್ತು. ಆಗ ಏಕಾಏಕಿ ಅಗ್ನಿಶಾಮಕ ವಾಹನದಲ್ಲಿದ್ದ ನೀರು ಖಾಲಿಯಾಗಿದೆ. ಪರಿಣಾಮ ಬೆಂ*ಕಿ ನಂದಿಸಲು ತೆರಳಿದ್ದ ಅಧಿಕಾರಿ ಅಗ್ನಿಯಲ್ಲಿ ಬೆಂದು ಹೋದ ಘಟನೆ ನಡೆದಿದೆ. ಈ ದುರಂ*ತ ಸಂಭವಿಸಿದ್ದು ಬಿಹಾರದ ಸಿವಾನ್​ನಲ್ಲಿ.


ಭಾಗಲ್ಪುರ ನಿವಾಸಿ ರವಿಕಾಂತ್ ಮಂಡಲ್ (40) ಮೃ*ತ ಅಗ್ನಿಶಾಮಕ ದಳದ ಸಿಬ್ಬಂದಿ. ಮನೆಯಲ್ಲಿದ್ದ ಯಂತ್ರಕ್ಕೆ ಬೆಂ*ಕಿ ತಗುಲಿ ಸ್ವಲ್ಪ ಸಮಯದಲ್ಲೇ ಮನೆಯೆಲ್ಲಾ ವ್ಯಾಪಿಸಿದೆ. ರವಿಕಾಂತ್ ಮನೆಯ ಮೇಲ್ಛಾವಣಿಯ ಮೇಲೆ ಹತ್ತಿ ಬೆಂ*ಕಿ ನಂದಿಸಲು ಆರಂಭಿಸಿದ್ದರು. ಭಾರೀ ಬೆಂ*ಕಿಯಿಂದಾಗಿ ಛಾವಣಿ ಕುಸಿದಿದೆ. ರವಿಕಾಂತನಿಗೆ ಪ್ರಜ್ಞೆ ಬರುವಷ್ಟರಲ್ಲಿ ಅವರೂ ಉರಿಯುವ ಬೆಂಕಿಗೆ ಬಿದ್ದಿದ್ದರು. ಪರಿಣಾಮ ಅವರು ಬೆಂಕಿಗೆ ಆಹುತಿಯಾದರು.

ನೀರು ಖಾಲಿ…ಸಿಬ್ಬಂದಿ ಪ್ರಾ*ಣ ಹೋಯ್ತು :

ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನ ನಡೆಸುತ್ತಿತ್ತು. ಇದ್ದಕ್ಕಿದ್ದಂತೆ ಅಗ್ನಿಶಾಮಕ ವಾಹನದಲ್ಲಿ ನೀರು ಖಾಲಿಯಾಯಿತು. ಈ ವೇಳೆ ಬೆಂಕಿಯ ಕೆನ್ನಾಲೆಗೆ ಸಿಲುಕಿದ ರವಿಕಾಂತ್ ರನ್ನು ರಕ್ಷಿಸಲಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊ*ಲೆ; ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಯುವತಿಯ ಹ*ತ್ಯೆಗೈದ ಪಾಪಿ!

ಇದರಿಂದ ಲಕ್ಷಾಂತರ ಮೌಲ್ಯದ ಆಸ್ತಿ ಸುಟ್ಟು ಭಸ್ಮವಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮವಹಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

LATEST NEWS

ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!

Published

on

ಮಂಗಳೂರು/ಪಂಜಾಬ್: ಕಟ್ಟಡ ಕು*ಸಿತದಿಂದ ಹಿಮಾಚಲ ಪ್ರದೇಶದ 20 ವರ್ಷದ ಯುವತಿ ಸೇರಿದಂತೆ ಇಬ್ಬರು ಮೃ*ತಪಟ್ಟ ಘಟನೆ ಶನಿವಾರ (ಡಿ.21) ಸಂಜೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದ್ದು, ಹಲವರು ಇನ್ನೂ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬ ಶಂ*ಕೆ ವ್ಯಕ್ತವಾಗಿ ತೀ*ವ್ರ ಪರಿಶೀಲನೆ ನಡೆಸುತ್ತಿದ್ದಾರೆ.

ಥಿಯೋಗ್‌ನ ದೃಷ್ಟಿ ವರ್ಮ (20) ಓರ್ವ ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕಳೆದ ರಾತ್ರಿ ಅವಶೇಷಗಳಡಿ ಸಿಲುಕಿಕೊಂಡು ಗಂ*ಭೀರ ಸ್ಥಿತಿಯಲ್ಲಿದ್ದವರನ್ನು ರಕ್ಷಿಸಿ, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದರು. ಇಂದು(ಡಿ।22) ಬೆಳಗ್ಗೆ ಮತ್ತೊಬ್ಬ ವ್ಯಕ್ತಿಯ ಮೃ*ತದೇಹ ಪ*ತ್ತೆಯಾಗಿದ್ದು, ಅವರನ್ನು ಹರಿಯಾಣದ ಅಂಬಾಲಾ ಜಿಲ್ಲೆಯ ಅಭಿಷೇಕ್ ಎಂದು ಗುರುತಿಸಲಾಗಿದೆ.

ಘಟನೆಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ದೀಪಕ್ ಪರೀಕ್, “ಪ್ರಾಥಮಿಕ ತನಿಖೆಯಲ್ಲಿ, ಕಟ್ಟಡದ ಮಾಲಕರು ಕಟ್ಟಡದ ಪಕ್ಕದಲ್ಲಿರುವ ನಿವೇಶನದಲ್ಲಿ ಯಾವುದೇ ಅನುಮತಿಯಿಲ್ಲದೆ ಮಣ್ಣು ತೋಡುತ್ತಿದ್ದರು” ಎಂದು ತಿಳಿಸಿದ್ದಾರೆ. ಕಳೆದ 17 ಗಂಟೆಗಳಿಂದ ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಇನ್ನೂ ಹಲವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಶಂ*ಕೆ ವ್ಯಕ್ತವಾಗಿದೆ. ಶೇ. 60ರಷ್ಟು ಕಟ್ಟಡದ ಅ*ವಶೇಷಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡದ ಮಾಲಕರಾದ ಪರ್ವಿಂದರ್ ಸಿಂಗ್ ಹಾಗೂ ಗಗನ್ ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಸ್ಥಳದಲ್ಲಿನ ಪರಿಸ್ಥಿತಿಯ ಮೇಲೆ ಫೋನ್ ಮೂಲಕ ನಿಗಾ ವಹಿಸಿದ್ದಾರೆ.

Continue Reading

LATEST NEWS

ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !

Published

on

ಮಂಗಳೂರು/ಮೆಲ್ಬೋರ್ನ್: ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಮೆಲ್ಬೋರ್ನ್ ನ ಎಂಸಿಜಿಯಲ್ಲಿ ಡಿ.26ರಂದು ಆರಂಭವಾಗಲಿದೆ. ಈಗಾಗಲೇ ಸರಣಿ 1-1ರಿಂದ ಸಮಬಲವಾಗಿದ್ದು, ಮುನ್ನಡೆಗಾಗಿ ಉಭಯ ತಂಡಗಳು ಸಿದ್ದತೆಯಲ್ಲಿದೆ.

ಆದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಅದುವೇ ಗಾಯಾಳುಗಳ ಸಮಸ್ಯೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್ ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !

ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.

ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್ ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಕೆ.ಎಲ್.ರಾಹುಲ್ ಗೆ ಗಾಯ

ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸದ ವೇಳೆ ಕೆ.ಎಲ್.ರಾಹುಲ್ ಅವರ ಕೈ ಬೆರಳಿಗೆ ಏಟು ಬಿದ್ದ ಘಟನೆ ಸಂಭವಿಸಿದೆ. ಕೂಡಲೇ ಚಿಕಿತ್ಸೆ ನೀಡಲಾಯಿತು.

ಇದೇನೂ ಗಂಭೀರ ಸ್ವರೂಪದ ಗಾಯವಲ್ಲ ಎನ್ನಲಾಗಿದೆಯಾದರೂ, ಮುಂದಿನ ನಿರ್ಣಾಯಕ ಪಂದ್ಯಕ್ಕೂ ಮುನ್ನ ಭಾರತೀಯ ತಂಡದಲ್ಲಿ ಗಾಯದ ಭೀತಿ ಎದುರಾಗಿದೆ.

Continue Reading

LATEST NEWS

ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?

Published

on

ಮಂಗಳೂರು/ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಗೃಹ ಖಾತೆಯ ಜೊತೆಗೆ ಇಂಧನ, ಕಾನೂನು ಮತ್ತು ನ್ಯಾಯಾಂಗ, ಸಿಬ್ಬಂದಿ ಆಡಳಿತ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಖಾತೆಗಳನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ನಗರಾಭಿವೃದ್ದಿ, ವಸತಿ ಮತ್ತು ಲೋಕೋಪಯೋಗಿ ಖಾತೆಗಳು ಹಂಚಿಕೆಯಾಗಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಅಬಕಾರಿ ಖಾತೆ ಹಂಚಿಕೆಯಾಗಿವೆ.

ಇದನ್ನೂ ಓದಿ: ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!

ಉಳಿದಂತೆ ಉದಯ್ ಸಾಮಂತ್ ಅವರಿಗೆ ಕೈಗಾರಿಕೆ, ಪಂಕಜಾ ಮುಂಡೆ ಅವರಿಗೆ ಪರಿಸರ, ಮಾಣಿಕ್ರಾವ್ ಕೊಕಾಟೆ ಅವರಿಗೆ ಕೃಷಿ ಖಾತೆಗಳನ್ನು ನೀಡಲಾಗಿದೆ. ಧನಂಜಯ್ ಮುಂಡೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಅಶೋಕ್ ಅವರಿಗೆ ಬುಡಕಟ್ಟು ಅಭಿವೃದ್ದಿ, ಆಶಿಶ್ ಶೆಲಾರ್ ಅವರಿಗೆ ಐಟಿ ಮತ್ತು ಸಂಸ್ಕೃತಿ ಇಲಾಖೆಯ ಉಸ್ತುವಾರಿ ವಹಿಸಲಾಗಿದೆ.

ಇನ್ನೂ ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರುಗಳಾದ ರಾಧಾಕೃಷ್ಣ ವಿಖೆ ಪಾಟೇಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ.

ಡಿಸೆಂಬರ್ 5ರಂದು ಫಡ್ನವೀಸ್, ಏಕನಾಥ ಶಿಂಧೆ, ಅಜಿತ್ ಪವರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸೆಂಬರ್ 15 ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

 

Continue Reading

LATEST NEWS

Trending

Exit mobile version