ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ತೀವ್ರತೆ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಅಲ್ಲಿ ಇನ್ನೂ ಭಾರತೀಯರು ಉಳಿದಿರುವರಿಂದ ಕೇಂದ್ರದ 4 ಸಚಿವರನ್ನು ಉಕ್ರೇನ್‌ನ ನೆರೆಯ ದೇಶಗಳಿಗೆ ಕಳುಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಕೇಂದ್ರ ಸಚಿವರು, ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ,
ಜ್ಯೋತಿರಾದಿತ್ಯ ಸಿಂಧ್ಯಾ, ಕಿರಣ್ ರಿಜಿಜು, ಜನರಲ್ ವಿ.ಕೆ.ಸಿಂಗ್ ಶೀಘ್ರದಲ್ಲೇ ಉಕ್ರೇನ್ಗೆ ತೆರಳಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.