Connect with us

LATEST NEWS

ಕೊನೆಗೂ ಕೊರೊನಾ ಲಸಿಕೆ; ರಷ್ಯಾ ಅಧ್ಯಕ್ಷರ ಮಗಳಿಗೆ ಮೊದಲ ಲಸಿಕೆ

Published

on

ಮಾಸ್ಕೊ: ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರ ಸಂಸ್ಥೆಗಳ ಎಚ್ಚರಿಕೆ ನಡುವೆಯೂ ರಷ್ಯಾ ಕೊರೊನಾ ವಿರುದ್ದ ತನ್ನ ಲಸಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಅದು ರಷ್ಯಾದ ಅದ್ಯಕ್ಷ ಪುಟಿನ್ ಅವರ ಒಬ್ಬಳು ಮಗಳಿಗೆ ಈ ಲಸಿಕೆಯನ್ನು ನೀಡುವ ಮೂಲಕ ಇಡೀ ವಿಶ್ವಕ್ಕೆ ಕೊರೊನಾ ಲಸಿಕೆ ಬಗ್ಗೆ ಸಾರಿ ಹೇಳಿದೆ.


ಈಗಾಗಲೇ ಮಾನವನ ಮೇಲಿನ ಟ್ರಯಲ್ ನಲ್ಲಿ ಕೊರೊನಾ ಲಸಿಕೆ ಯಶಸ್ವಿಯಾಗಿದ್ದು ಮೂರು ಹಂತದ ಪರಿಕ್ಷೆಗಳನ್ನು ರಷ್ಯಾ ಕಂಡು ಹಿಡಿದ ಲಸಿಕೆ ಫಲಪ್ರದವಾಗಿದೆ. ಈ ಹಿನ್ನಲೆ ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್‌–19 ಲಿಸಿಕೆ ಕೆಲವೇ ದಿನಗಳಲ್ಲಿ ಜನರ ಬಳಕೆಗೆ ಬಿಡುಗಡೆಯಾಗಲಿದೆ. ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್‌–19 ಲಸಿಕೆ ಇಂದು ದಾಖಲಾಗಿದೆ.


ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜಂಟಿಯಾಗಿ ಲಸಿಕೆ ಅಭಿವೃದ್ಧಿ ಪಡಿಸಿದೆ. ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮನುಷ್ಯರ ಮೇಲೆ ಪ್ರಯೋಗ ನಡೆಸಲಾಗಿದೆ. ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್‌ ಲಸಿಕೆಯನ್ನು ಬಳಕೆಗೆ ನೋಂದಾಯಿಸಲಾಗಿದೆ.


ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಒಬ್ಬಳು ಮಗಳಿಗೆ ಲಸಿಕೆ ನೀಡುವುದರ ಮೂಲಕ ಇಡೀ ಜಗತ್ತಿಗೆ ಕೊರೊನಾಗೆ ಲಸಿಕೆ ಕಂಡು ಹಿಡಿದಿರುವ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ. ಎರಡು ಮತ್ತು ಮೂರನೇ ಹಂತದ ಪ್ರಯೋಗಗಳಲ್ಲಿ ಭಾಗಿಯಾದ ಎಲ್ಲ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿದೆ.


ಜೂನ್‌ 18ರಿಂದ ಕ್ಲಿನಿಕಲ್‌ ಟ್ರಯಲ್‌ಗಳನ್ನು (ಮನುಷ್ಯರ ಮೇಲೆ) ಆರಂಭಿಸಲಾಗಿತ್ತು. ಪ್ರಯೋಗಕ್ಕೆ ಒಳಗಾದವರ ಪೈಕಿ ಮೊದಲ ಗುಂಪು ಜುಲೈ 15ರಂದು ಸಂಶೋಧನಾ ಕೇಂದ್ರಗಳಿಂದ ಬಿಡುಗಡೆಯಾಗಿದೆ ಹಾಗೂ ಎರಡನೇ ಗುಂಪು ಜುಲೈ 20ರಂದು ಮನೆಗೆ ಮರಳಿದೆ.

DAKSHINA KANNADA

ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!

Published

on

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

DAKSHINA KANNADA

Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

Published

on

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.

ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.

ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.

 

 

Continue Reading

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

LATEST NEWS

Trending