LATEST NEWS
ಸೆ.13ರಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ
Published
2 months agoon
By
NEWS DESK2ಕೇರಳ: ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆ. ಸೆಪ್ಟೆಂಬರ್ 21 ರಂದು ರಾತ್ರಿ 10 ಗಂಟೆಗೆ ಅಥಾಜ ಪೂಜೆ ಮತ್ತು ಹರಿವರಾಸನದ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.
ಉದಯಾಸ್ತಮಾನ ಪೂಜೆ ಮತ್ತು ಅಷ್ಟಾಭಿಷೇಕಗಳು ದೇವಾಲಯದಲ್ಲಿ ನಡೆಯಲಿರುವ ಇತರ ಧಾರ್ಮಿಕ ವಿಧಿಗಳಾಗಿವೆ. ಸಮಾರಂಭದ ನಂತರ ಅನ್ನದಾನ ಸಭಾಂಗಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಕಲಭಾಭಿಷೇಕ, ಪಡಿಪೂಜೆ, ಪುಷ್ಪಾಭಿಷೇಕ ಸೇರಿದಂತೆ ವಿಶೇಷ ಆಚರಣೆಗಳು ನಡೆಯಲಿವೆ.
ದೇವರ ಹೆಸರಿನಲ್ಲಿ ದೀಪದ ಮುಂದೆ ಇಟ್ಟಿರುವ ಬಾಳೆ ಎಲೆಯ ಮೇಲೆ ಸಿಹಿತಿಂಡಿಗಳು ಸೇರಿದಂತೆ ಹಬ್ಬದ ಭಕ್ಷ್ಯಗಳನ್ನು ಇಡುತ್ತಾರೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
LATEST NEWS
ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’
Published
35 minutes agoon
22/11/2024ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.
ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.
ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
17 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
LATEST NEWS
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
ಪ್ರತಿವರ್ಷ ಅಯ್ಯಪ್ಪ ಮಾಲೆ ಹಾಕುವ ಸ್ವಾಮಿಗಳ ಹೆಸರು ಯಾವುದು ಗೊತ್ತಾ ??
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
ನೀವು ಹೀಗೆ ಮಾಡಿದ್ರೆ ‘ಗೂಗಲ್ ಪೇ’ನಲ್ಲಿ ಸುಲಭವಾಗಿ 1,000 ರೂಪಾಯಿ ಪಡೆಯಬಹುದು
ತಾಯಂದಿರಿಂಲೇ ಮಕ್ಕಳ ಅ*ಪಹರಣ; ಉದ್ದೇಶ ಕೇಳಿದ್ರೆ ನೀವೆ ಶಾಕ್ ಆಗ್ತೀರ !!
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ