Thursday, February 2, 2023

ಶಬರಿಮಲೆಗೆ ಬರುವ ಭಕ್ತರಿಗೆ ಕೊರೊನಾ ನೆಗಟಿವ್ ಪ್ರಮಾಣಪತ್ರ ಕಡ್ಡಾಯ

ತಿರುವನಂತಪುರಂ : ನವೆಂಬರ್ ತಿಂಗಳಿನಿಂದ ವರ್ಷಾವಧಿಯ ಶಬರಿಮಲೆ ಯಾತ್ರೆಗಳು ಪ್ರಾರಂಭವಾಗಲಿರುವ ಹಿನ್ನಲೆ ಕೇರಳ ಸರಕಾರ ಕೆಲವು ಮಾರ್ಗದರ್ಶಿಸೂಚಿಗಳನ್ನ ತರಲು ತಜ್ಞರ ಸಮಿತಿಗಳನ್ನು ನಿರ್ಮಾಣ ಮಾಡಿದೆ. ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಿಸಲು ಭಕ್ತರಿಗೆ ಕೋವಿಡ್-19 ನೆಗಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಕೇರಳ ಸರ್ಕಾರಕ್ಕೆ ಶಿಫಾರಸು ಮಾಡಿದೆ.


ಎರಡು ತಿಂಗಳ ವಾರ್ಷಿಕ ಮಂಡಲ ಪೂಜೆ ಮಹೋತ್ಸವ ಮತ್ತು ಮಕರವಿಳಕ್ಕು ಉತ್ಸವ ನವೆಂಬರ್ 16ರಿಂದ ಆರಂಭವಾಗಲಿದ್ದು, ದೇವಾಲಯ ತೆರೆದ ನಂತರ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಕೋವಿಡ್-19 ನೆಗಟಿವ್ ವರದಿ ಕಡ್ಡಾಯಗೊಳಿಸುವಂತೆಯೂ ಶಿಫಾರಸು ಮಾಡಲಾಗಿದೆ. ಸಮಿತಿಯ ಶಿಫಾರಸುಗಳನ್ನು ಸರ್ಕಾರ ವಿವರವಾಗಿ ಪರಿಶೀಲಿಸಲಿದೆ ಎಂದು ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಹೇಳಿದ್ದಾರೆ.

ಕೋವಿಡ್-19 ನೆಗಟಿವ್ ಪ್ರಮಾಣಪತ್ರದೊಂದಿಗೆ ಆಗಮಿಸುವ ಯಾತ್ರಾರ್ಥಿಗಳಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡಬೇಕು ಮತ್ತು ದೇವಸ್ಥಾನ ಪ್ರವೇಶಕ್ಕೂ ಮುನ್ನ ಹೊಸದಾಗಿ ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಯಾವುದೇ ಗಂಭೀರ ಕಾಯಿಲೆಗಳಿಂದ ಬಳಲುತ್ತಿಲ್ಲ ಎಂದು ವೈದ್ಯಕೀಯ ಪ್ರಮಾಣಪತ್ರವನ್ನು ಸಹ ನೀಡಬೇಕು ಎಂದು ಸಮಿತಿ ಹೇಳಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ವೈದ್ಯರ ಗಾಂಜಾ ಜಾಲ ಪ್ರಕರಣ:ವೈದ್ಯರು, ವೈದ್ಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು..!

ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.ಮಂಗಳೂರು :  ಮಂಗಳೂರಿನಲ್ಲಿನ...

ಕಣ್ಣೂರು ಕೇರಳ: ಕಾರಿಗೆ ಬೆಂಕಿ ತಗುಲಿ ಗರ್ಭಿಣಿ ಮತ್ತು ಪತಿ ದಾರುಣ ಸಾವು..!

ದಂಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಕೇರಳದ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ. ಕಣ್ಣೂರು (ಕೇರಳ): ದಂಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ...

ಕ್ಯಾಂಪ್ಕೋ ಸುವರ್ಣ ಸಂಭ್ರಮ : ಪುತ್ತೂರಿಗೆ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಭೇಟಿ..!

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭ ಕರಾವಳಿಯ ಖ್ಯಾತ ಕ್ಯಾಂಪ್ಕೋ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾಗಿರುವ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್​...