Connect with us

LATEST NEWS

ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ

Published

on

ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು.

ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. ಅರುಣ್ ಕುಮಾರ್ ನಂಬೂದಿರಿ ದೇವಾಲಯದ ಬಾಗಿಲು ತೆರೆದು ದೀಪ ಬೆಳಗಲಿದ್ದಾರೆ. ಮಾಳಿಗಪ್ಪುರಂ ದೇವಾಲಯ ತೆರೆಯಲು ಪ್ರಧಾನ ಅರ್ಚಕ ವಾಸುದೇವನ್ ನಂಬೂದಿರಿ ಅವರಿಗೆ ಕೀಲಿ ಹಸ್ತಾಂತರ ಮಾಡಲಾಗುವುದು.

18 ಮೆಟ್ಟಿಲ ಬಳಿಯ ಕುಂಡಕ್ಕೆ ಅಗ್ನಿಸ್ಪರ್ಶ ಮಾಡಿದ ನಂತರ ಭಕ್ತರಿಗೆ 18 ಮೆಟ್ಟಿಲು ಏರಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅನುಮತಿ ನೀಡಲಾಗುವುದು.ಡಿಸೆಂಬರ್ 30ರಂದು ಯಾವುದೇ ವಿಶೇಷ ಪೂಜೆ ಇರುವುದಿಲ್ಲ. ಡಿಸೆಂಬರ್ 31ರಂದು ಮುಂಜಾನೆ 3ಗಂಟೆಯಿಂದ ಮಕರ ಜ್ಯೋತಿ ಪೂಜೆ ಆರಂಭವಾಗುತ್ತದೆ.

2025ರ ಜನವರಿ 12ರಂದು ಪಂದಳ ಅರಮನೆಯಿಂದ ತಿರುವಾಭರಣ ಘೋಷಯಾತ್ರೆ ಹೊರಡಲಿದೆ. ಡಿಸೆಂಬರ್ ಜ.13ರಂದು ಪಂಪಾದಲ್ಲಿ ದೀಪೋತ್ಸವ, ಜನವರಿ 14ರಂದು ಸಂಜೆ 5ಗಂಟೆಗೆ ತಿರುವಾಭರಣ ಘೋಷ ಯಾತ್ರೆ,ಶರಂಗುತ್ತಿಗೆ ಆಗಮನ, ಮಕರ ಸಂಕ್ರಮಣ ಪೂಜೆ, ಸಂಜೆ 6.30ಕ್ಕೆ, ಅಯ್ಯಪ್ಪಸ್ವಾಮಿಗೆ ತಿರುವಾಭರಣ ತೊಡಿಸಿ ದೀಪಾರಾಧನೆ, ಮಕರ ನಕ್ಷತ್ರ ಗೋಚರಿಸಿದ ನಂತರ, ಮಕರ ಜ್ಯೋತಿ ದರ್ಶನ ನಂತರ ಜನವರಿ 19ರಂದು ರಾತ್ರಿ 10 ಗಂಟೆಯವರೆಗೆ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ ಇರಲಿದೆ.

DAKSHINA KANNADA

ಗುರುಪುರ : ನಗರದ ಹಲವು ಅಂಗಡಿಗಳಲ್ಲಿ ಕಳ್ಳತನ

Published

on

ಬಜಪೆ: ಎಲೆಕ್ಟ್ರಾನಿಕ್‌ ಅಂಗಡಿ, ಬೇಕರಿ, ತರಕಾರಿ ಅಂಗಡಿ ಹಾಗೂ ಬಂಡ ಶಾಲೆಯ ಒಂದು ಗೂಡಂಗಡಿಗೆ ಶುಕ್ರವಾರದ ರಾತ್ರಿ ವೇಳೆಯಲ್ಲಿ ಕಳ್ಳರು ನುಗ್ಗಿ, ಮೊಬೈಲ್‌, ಎಲೆಕ್ಟ್ರಾನಿಕ್‌ ಸಾಮಾಗ್ರಿ, ಚಿನ್ನದ ಉಂಗುರ, ನಗದು, ಬೇಕರಿಯಿಂದ ತಿಂಡಿ, ನಗದು, ತರಕಾರಿ ಅಂಗಡಿಯಿಂದ ನಗದು ನಾಣ್ಯ, ಸಿಗರೇಟ್‌, ಗೂಡಂಗಡಿಯಿಂದ ಬಿಸ್ಕತ್‌ನ್ನು ಕಳವು ಮಾಡಿರುವ ಘಟನೆ ಗುರುಪುರ ಪೇಟೆಯಲ್ಲಿ ನಡೆದಿದೆ.


ಗುರುಪುರ ಪೇಟೆಯ ಉಮೇಶ್‌ ಭಟ್‌ ರ ಎಲೆಕ್ಟ್ರಾನಿಕ್‌ ಅಂಗಡಿಗೆ ನುಗ್ಗಿ 12 ಮೊಬೈಲ್‌ ಫೋನ್‌, 20 ಸಾವಿರ ರೂಪಾಯಿ ಮೊತ್ತದ ಇಲೆಕ್ಟ್ರಾನಿಕ್‌ ಸಾಮಾಗ್ರಿಗಳು, 60 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಉಂಗುರ, ಸುಮಾರು 25 ಸಾವಿರ ರೂಪಾಯಿ ನಗದು ಕಳವು ಮಾಡಲಾಗಿದೆ. ಉಮೇಶ್‌ ನ ಸಹೋದರ ರಮೇಶ್‌ ಭಟ್‌ ರ ಬೇಕರಿ ಅಂಗಡಿಗೆ ನುಗ್ಗಿದ ಕಳ್ಳರು ಬೇಕರಿ ತಿಂಡಿಗಳನ್ನು ಹಾಗೂ ನಗದುಗಳನ್ನು ಶಟರ್‌ ಬೀಗ ಒಡೆದು ಕಳವು ಮಾಡಿದ್ದಾರೆ. ಸಂಶುದ್ದೀನ್‌ ನ ತರಕಾರಿ ಅಂಗಡಿಯ ಮರದ ಬಾಗಿಲಿನ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ಡಬ್ಬಿಯಲ್ಲಿದ್ದ ಹತ್ತು ರೂಪಾಯಿಯ ನ್ಯಾಣ ಸುಮಾರು 10 ಸಾವಿರ ರೂಪಾಯಿ ನಗದು, ಸುಮಾರು 10ಸಾವಿರ ರೂಪಾಯಿ ಮೌಲ್ಯದ ಸಿಗರೇಟ್‌ ಸಹಿತ 20 ಸಾವಿರ ರೂಪಾಯಿ ಮೌಲ್ಯದ ಸೊತ್ತು ಕಳವು ಮಾಡಿದ ಕಳ್ಳರು ಅಂಗಡಿಯಲ್ಲಿನ ಫ್ರೀಜ್‌ನಲ್ಲಿದ್ದ ಮೊಸರನ್ನು ಕುಡಿದಿದ್ದಾರೆ ಹಾಗೂ ಚೆಲ್ಲಿದ್ದಾರೆ. ಅಂಗಡಿಯಲ್ಲಿದ್ದ ಅನಾನಸನ್ನು ತುಂಡು ಮಾಡಿ,ತಿಂದಿದ್ದಾರೆ. ಇಲ್ಲಿ ಕಳ್ಳರು ಹಲವು ಹೊತ್ತು ಕಾಲ ಕಳೆದಿರುವುದು ಕಂಡು ಬಂದಿದೆ.ಬಂಡಸಾಲೆಯಲ್ಲಿ ಧರ್ಮಣ ಪೂಜಾರಿ ಗೂಡಂಗಡಿಯ ಶಟರ್‌ನ ಬೀಗ ಮುರಿದು ಬಿಸ್ಕತ್‌ನ್ನು ಕಳವು ಮಾಡಿದ್ದಾರೆ.

ಸುಮಾರು ರಾತ್ರಿ 2 ರಿಂದ 3 ಗಂಟೆಯೊಳಗೆ ಈ ಕಳವು ನಡೆದಿದೆ. ಇದು ಒಂದು ಕಳ್ಳರ ತಂಡವಾಗಿದ್ದು, ಗುರುಪುರ ಪೇಟೆಯಲ್ಲಿ ಸಿಸಿ ಕ್ಯಾಮಾರದಲ್ಲಿ ಕಳ್ಳರ ಸುಳಿವು ಸಿಗುವ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಕಳವಿನ ಬಗ್ಗೆ ಮಾಹಿತಿ ಪಡೆದು ಹೇಳಿಕೆ ತೆಗೆದುಕೊಂಡು ಹೋಗಿದ್ದಾರೆ.

Continue Reading

LATEST NEWS

ಮುಂದಿನ 3 ದಿನ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ

Published

on

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಇನ್ನು ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ.

Continue Reading

LATEST NEWS

ಟೀಂ ಇಂಡಿಯಾಗೆ ಮತ್ತೊಂದು ಆಘಾತ; ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್

Published

on

ಮಂಗಳೂರು/ಮುಂಬೈ : ಟೀಂ ಇಂಡಿಯಾ ಮತ್ತು ಹಿಮಾಚಲ ಪ್ರದೇಶದ ಆಲ್ ರೌಂಡರ್, 2013ರ ಐಪಿಎಲ್ ವಿಜೇತ ರಿಷಿ ಧವನ್ ಅವರು ಭಾರತೀಯ ಸೀಮಿತ ಓವರ್ ಗಳ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

34 ವರ್ಷದ ಆಲ್ ರೌಂಡರ್ ಇನ್ಮುಂದೆ ಏಕದಿನ ಮತ್ತು ಟಿ20 ಕ್ರಿಕೆಟ್ ಆಡುವುದಿಲ್ಲ. ದೇಶೀಯ ಕ್ರಿಕೆಟ್ ನಲ್ಲಿ ಹಿಮಾಚಲ ಪ್ರದೇಶದ ಪರ ಆಡುತ್ತಿರುವ ರಿಷಿ ಧವನ್, ಭಾರತಕ್ಕಾಗಿ ಮೂರು ಏಕದಿನ ಮತ್ತು ಒಂದು ಟಿ-20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

 

2016ರಲ್ಲಿ ಟೀಂ ಇಂಡಿಯಾಗೆ ಕಾಲಿಟ್ಟಿದ್ದರು. ಧವನ್ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಆಸ್ಟ್ರೇಲಿಯಾ ಪ್ರವಾಸದಿಂದ ಪ್ರಾರಂಭಿಸಿದರು. ಇನ್ನೂ ಸೀಮಿತ ಓವರ್ ಗಳ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧವನ್ ದೇಶಿಯ ಕ್ರಿಕೆಟ್ ನಲ್ಲಿ ಒಟ್ಟು 9000 ರನ್ ಗಳಿಸಿದ್ದಾರೆ. 650ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ಗುಜರಾತ್ ನಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ

ಐಪಿಎಲ್ ನಲ್ಲಿ, ಧವನ್ ಕಿಂಗ್ಸ್ ಇಲೆವೆನ್ ಪಂಜಾಬ್ (2014-2024) ಮತ್ತು ಮುಂಬೈ ಇಂಡಿಯನ್ಸ್ (2013) ಅನ್ನು ಪ್ರತಿನಿಧಿಸಿದರು. 39 ಪಂದ್ಯಗಳಲ್ಲಿ 25 ವಿಕೆಟ್ ಮತ್ತು 210 ರನ್ ಗಳಿಸಿದ್ದರು.

Continue Reading

LATEST NEWS

Trending

Exit mobile version