Thursday, August 11, 2022

ಕಾರ್ಕಳದ ಸಚ್ಚಿದಾನಂದ ಪ್ರಭು ಅವರಿಗೆ ಭೂಸೇನಾ ನ್ಯಾಯಾಂಗದ ಬ್ರಿಗೇಡಿಯರ್‌ ಪದವಿ: ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆ

ಕಾರ್ಕಳ: ಇಲ್ಲಿನ ಮರ್ಣೆ ಗ್ರಾಮದ ಕಾಡುಹೊಳೆಯ ಸಚ್ಚಿದಾನಂದ ಪ್ರಭು ಅವರು ಭಾರತದ ರಕ್ಷಣಾ ಇಲಾಖೆಯಲ್ಲಿ ಬ್ರಿಗೇಡಿಯರ್ ಹುದ್ದೆ ಅಲಂಕರಿಸಿದ್ದಾರೆ.

ಈ ಮೂಲಕ ಭಾರತೀಯ ಸೇನೆಯ ನ್ಯಾಯಾಂಗ ವಿಭಾಗದಲ್ಲಿ ಬ್ರಿಗೇಡಿಯರ್ ಪದವಿ ಪಡೆದ ಮೊದಲ ಕನ್ನಡಿಗರೆ೦ಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಕಾಡುಹೊಳೆಯಲ್ಲಿ ಪ್ರಾಥಮಿಕ ಶಿಕ್ಷಣ, ಅಜೆಕಾರು ಜ್ಯೋತಿ ಶಾಲೆಯಲ್ಲಿ ಪ್ರೌಢಶಿಕ್ಷಣ, ಎಸ್‌ಡಿಎಂ ಉಜಿರೆಯಲ್ಲಿ ಪಿಯು ಶಿಕ್ಷಣ ಪೂರೈಸಿರುವ ಪ್ರಭು,

ಉಡುಪಿ ವೈಕುಂಠ ಬಾಳಿಗಾ ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದು, 1997ರಲ್ಲಿ ಭಾರತೀಯ ಭೂಸೇನೆಯಲ್ಲಿ ಅಸಿಸ್ಟೆಂಟ್ ಜಡ್ಜ್ ಅಡ್ವಕೇಟ್ ಜನರಲ್ ಹುದ್ದೆಗೆ ನೇಮಕಗೊಂಡಿದ್ದರು.

ಬಳಿಕ ಕರ್ನಲ್ ಮಿಲಿಟರಿ ಸೆಕ್ರೆಟರಿ (ಕಾನೂನು), ಡೆಪ್ಯೂಟಿ ಜಡ್ಜ್ ಅಡ್ವಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರು ಕಾಡುಹೊಳೆ ಬೈಲೂರು ಕೊಪ್ಪಲದ ದಿ.ಬಾಬುರಾಯ ಪ್ರಭು ಹಾಗೂ ರತ್ನಮ್ಮ ದಂಪತಿ ಪುತ್ರ. ಜ್ಯೋತಿ ಪ್ರಭು ಅವರನ್ನು ವಿವಾಹವಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟು ಕಾಪಿಕಾಡಿನಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರರಿಗೆ ಗಾಯ – ಕಾರು ಕಮರಿಗೆ ..!

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್...

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾhttp://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...