Connect with us

    LATEST NEWS

    ಇನ್ಮುಂದೆ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದೊಯ್ಯುವಾಗ ಸೇಫ್ಟಿ ಬೆಲ್ಟ್ ಕಡ್ಡಾಯ

    Published

    on

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೈಕ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ಸವಾರರ ಸುರಕ್ಷತೆಗಾಗಿ ಸರ್ಕಾರ ಹಾಗೂ ಸಾರಿಗೆ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚೆಗೆ 4 ವರ್ಷದ ಒಳಗಿನ ಮಕ್ಕಳನ್ನು ಶಾಲೆ ಅಥವಾ ಇತರೆ ಕೆಲಸಗಳಿಗೆ ಹಿಂದೆ, ಮುಂದೆ ಕೂರಿಸಿಕೊಂಡು ಬೈಕ್ ಚಲಾವಣೆ ಮಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದೆ.

    4 ವರ್ಷ ಒಳಗಿನ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದುಕೊಂಡು ಹೋಗುವಾಗ ಶಿಶು ಕವಚ ಹಾಕದಿದ್ದರೆ ಕೇಸ್ ಹಾಗೂ ದಂಡವನ್ನು ಸಾರಿಗೆ ಇಲಾಖೆ ಹಾಕುತ್ತಿದೆ. ಮಕ್ಕಳಿಗೆ ಸೇಫ್ಟಿ ಬೆಲ್ಟ್ ಹಾಕದ ಪೋಷಕರಿಗೆ 1,000 ರೂ. ದಂಡ ಹಾಕುತ್ತಿದೆ.

    ಕೇಂದ್ರ ಮೋಟಾರು ವಾಹನ ಕಾಯ್ದೆ 2019ರ ಅನ್ವಯ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳು ಸೇಫ್ಟಿ ಧಾರಣೆ ಮಾಡುವುದು ಕಡ್ಡಾಯ. ಈ ಬಗ್ಗೆ ಸಾರಿಗೆ ಇಲಾಖೆ ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ಆರ್‌ಟಿಒಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಈ ಹಿಂದೆಯೂ ಈ ಕಾಯ್ದೆ ಜಾರಿಯಲ್ಲಿತ್ತು. ಆದರೆ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆ, ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾದಾಗ ಕೇಂದ್ರ ಸರ್ಕಾರ ಅಧಿಸೂಚನೆಯಂತೆ ರಾಜ್ಯದಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾರಿಗೆ ಇಲಾಖೆಗೆ ಸೂಚಿಸಿದೆ.

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending