Friday, July 1, 2022

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.


ಮೂಲಗಳ ಪ್ರಕಾರ, ರಸ್ತೆಯನ್ನು ಮತ್ತೆ ತೆರೆಯಲು 3 ದಿನಗಳು ಬೇಕಾಗಬಹುದು. ಕೆಲವು ಚಿಕ್ಕ ವಾಹನಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದ್ದರೂ ದೂರದಿಂದ ದೊಡ್ಡ ವಾಹನಗಳಲ್ಲಿ ಬಂದವರು ತೆರಳಲು ಸಾಧ್ಯವಾಗುತ್ತಿಲ್ಲ.

ಪವಿತ್ರ ಯಮುನಾ ನದಿಯ ಉಗಮಸ್ಥಾನವಾದ ಯಮುನೋತ್ರಿ ಇರುವುದು ಬಂದಾರ್ ಪೂಂಚ್ ಪರ್ವತದ ಮೇಲೆ. ಸಮುದ್ರ ಮಟ್ಟದಿಂದ ಸರಿ ಸುಮಾರು 3293 ಮೀಟರ್ ಎತ್ತರದಲ್ಲಿ. ಭೌಗೋಳಿಕವಾಗಿ,

ಯಮುನೆಯು ಸಮುದ್ರ ಮಟ್ಟದಿಂದ 4421 ಮೀಟರ್ ಎತ್ತರದಲ್ಲಿರುವ ಚಾಂಪಸರ್ ಹಿಮನದಿಯಲ್ಲಿ ಹುಟ್ಟುತ್ತಾಳೆ. ವಾಸ್ತವವಾಗಿ ಈ ಹಿಮನದಿಯು ಪವಿತ್ರ ಯಮುನೋತ್ರಿಯಿಂದ ಕೇವಲ 1 ಕಿಮೀ ದೂರದಲ್ಲಿದೆ. ಆದರೂ ಇದನ್ನು ತಲುಪಬೇಕಾದರೆ ಸಾಕಷ್ಟು ಪ್ರಯಾಸ ಪಡಬೇಕಾಗುವುದು.


ಇಂಡೋ ಚೀನಾ ಗಡಿಯ ಸಮೀಪದಲ್ಲಿರುವ ಈ ತಾಣವನ್ನು ಕಾಲ್ನಡಿಗೆಯಿಂದ ತಲುಪಬೇಕಾದರೆ ಒಂದಿಡೀ ದಿನವೇ ಬೇಕಾಗುವುದು. ಅದರಲ್ಲೂ ದಟ್ಟಾರಣ್ಯದೊಳಗೆ, ತಗ್ಗು-ದಿಣ್ಣೆಗಳನ್ನು ದಾಟುತ್ತಾ ಹೋಗುವ ಅನಿವಾರ್ಯತೆ ಇದೆ. ಸೌಭಾಗ್ಯ ವಶಾತ್ ಭಕ್ತರಿಗೆ ದೇವಾಲಯ ತಲಪುವುದಕ್ಕೆ ಕುದುರೆ ಮತ್ತು ಹೇಸರಗತ್ತೆಗಳುಳ್ಳ ಸಾರಿಗೆಗಳು ಲಭ್ಯವಿವೆ

LEAVE A REPLY

Please enter your comment!
Please enter your name here

Hot Topics

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...