Connect with us

DAKSHINA KANNADA

ಪುತ್ತೂರು: ಕ್ರೈಸ್ತ ಪ್ರಾರ್ಥನಾಲಯದಲ್ಲಿ ಕೇಸರಿ ಧ್ವಜ ಪ್ರಕರಣ- ಅಕ್ರಮ ಕಟ್ಟಡ ಆರೋಪ

Published

on

ಪುತ್ತೂರು: ಕಡಬ ತಾಲೂಕಿನ ಪೇರಡ್ಕ ಸಮೀಪದ ಕ್ರೈಸ್ತ ಪ್ರಾರ್ಥನಾಲಯದ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ ಘಟನೆ ನಡೆದಿತ್ತು. ಸ್ಥಳಕ್ಕೆ ಹಿಂದೂ ಮುಖಂಡರು ಭೇಟಿ ನೀಡಿದ್ದು, ಇದೊಂದು ಅಕ್ರಮ ಕಟ್ಟಡ ಎಂದು ಆರೋಪಿಸಿದ್ದಾರೆ.


ದ.ಕ ಜಿಲ್ಲೆಯ ಪುತ್ತೂರಿನ ಕಡಬ ತಾಲೂಕಿನ ಪೇರಡ್ಕ ಸಮೀಪದ ಇಮ್ಮನ್ಯೂವೆಲ್ ಎ.ಜಿ ಚರ್ಚಿನ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ ಘಟನೆ ನಡೆದಿತ್ತು.

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬರುವ ಮತ್ತು ಕಡಬ ತಾಲೂಕಿಗೆ ಒಳಪಡುವ ಪೇರಡ್ಕ ಮೀನಾಡಿ ನಡುವೆ ಇರುವ ಮಲಯಾಳಿ ಕ್ರೈಸ್ತರಿಗೆ ಸೇರಿದ ಇಮ್ಯಾನುವೇಲ್ ಎ.ಜಿ ಪ್ರಾರ್ಥನಾಲಯದಲ್ಲಿ ದುರಸ್ತಿ ಕಾಮಗಾರಿಗಳು ನಡೆಯುತ್ತಿರುವ ಸಂದರ್ಭ ದುಷ್ಕರ್ಮಿಗಳು ಪ್ರಾರ್ಥನಾಲಯದ ಗೋಪುರದಲ್ಲಿರುವ ಶಿಲುಬೆಯನ್ನು ತೆಗೆದು ಕೇಸರಿ ಧ್ವಜ ಹಾಕಿದ್ದು,

ಚರ್ಚ್ ಬಾಗಿಲು ಒಡೆದು ಒಳಗಡೆ ಪ್ರವೇಶಿಸಿ ಹನುಮಾನ್ ದೇವರ ಫೋಟೋ ಇಟ್ಟು ದೀಪ ಹಚ್ಚಿದ್ದಾರೆ ಎಂಬ ಆರೋಪವನ್ನು ಮಾಡಲಾಗಿತ್ತು.

ಇದೀಗ ಘಟನೆ ನಡೆದ ಸ್ಥಳಕ್ಕೆ ಹಿಂದೂಪರ ಸಂಘಟನೆಗಳ ಪ್ರಮುಖರು ಭೇಟಿ ನೀಡಿದ್ದಾರೆ.
ಬಾಡಿಗೆ ಆಧಾರದಲ್ಲಿ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರಿಗೆ ನೀಡಲಾಗಿತ್ತು.

ಆದ್ರೆ ಅವರು ಅಲ್ಲಿ ಹಲವು ವರ್ಷಗಳ ಹಿಂದೆ ಕ್ರಿಶ್ಚಿಯನ್ ದಫನ ಭೂಮಿ ನಿರ್ಮಿಸಲು ಮುಂದಾದಾಗ ವಿರೋಧ ವ್ಯಕ್ತವಾದ ಹಿನ್ನೆಲೆ ಅದು ಸಾಧ್ಯವಾಗಿರಲಿಲ್ಲ.

ಇದೀಗ ಹೊರಗಿನಿಂದ ಬಂದಿರುವ ಕ್ರಿಶ್ಚಿಯನ್ ಸಮುದಾಯದ ಕೆಲವರು ಅದೇ ಸ್ಥಳದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲು ಮುಂದಾಗುತ್ತಿದ್ದಾರೆ.

ಜೊತೆಗೆ ಮತಾಂತರ ಕೇಂದ್ರವಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿರುವ ಅವರು ಜನರ ಅನುಕಂಪ ಗಳಿಸುವ ಉದ್ದೇಶದಿಂದ

ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಮುರಳೀಕೃಷ್ಣ ಹಸಂತಡ್ಕ ಸದ್ಯ ಆರೋಪಿಸಿದ್ದಾರೆ.

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

DAKSHINA KANNADA

“ಗಬ್ಬರ್ ಸಿಂಗ್” ಮೇ 3 ರಂದು ತೆರೆಗೆ ; ಇಂದು ವಿಡಿಯೋ ಸಾಂಗ್ ರಿಲೀಸ್..!

Published

on

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ‘ಗಬ್ಬರ್ ಸಿಂಗ್’ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಇದೀಗ ಈ ಸಿನೆಮಾದ ವಿಡಿಯೋ ಸಾಂಗ್‌ ರಿಲೀಸ್ ಆಗಿದ್ದು, ಜಸ್ಟ್‌ ರೋಲ್‌ ಫಿಲಂಸ್‌ನ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸೂಜಿ ಕಣ್‌ದ ಮೋನಾಲಿಸಾ ಎಂಬ ಉತ್ತಮ ಸಾಹಿತ್ಯವನ್ನು ಹೊಂದಿರುವ ಹಾಡನ್ನು ರಿಲೀಸ್ ಮಾಡಲಾಗಿದೆ. ಹಾಡಿಗೆ ಉಮೇಶ್ ಮಿಜಾರ್ ಸಾಹಿತ್ಯ ಬರೆದಿದ್ದರೆ, ಬೋಜರಾಜ ವಾಮಂಜೂರು, ವಿಸ್ಮಯ ವಿನಾಯಕ ಹಾಗೂ ಸ್ವತಹ ಉಮೇಶ್ ಮಿಜಾರ್ ಹಾಡುಗಳನ್ನು ಹಾಡಿದ್ದಾರೆ.


‘ಗಬ್ಬರ್ ಸಿಂಗ್’ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

‘ಗಬ್ಬರ್ ಸಿಂಗ್’ ಸಿನಿಮಾ ಮೇ 3 ರಂದು ಕರಾವಳಿ ಜಿ,ಲ್ಲೆಯಾದ್ಯಂತ ತೆರೆ ಕಾಣಲಿದೆ.  ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದ್ದು,  ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ. ಸಿನಿಮಾ ಮೇ 3 ರಂದು ತೆರೆ ಕಾಣಲಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್.

 

 

Continue Reading

DAKSHINA KANNADA

ಪುತ್ತೂರಿನಲ್ಲಿ ಭೀ*ಕರ ಅಪಘಾ*ತ; ರಿಕ್ಷಾ ಚಾಲಕ ಸಾ*ವು

Published

on

ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃ*ತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ಆಟೋ ರಿಕ್ಷಾ ಚಾಲಕ 30 ವರ್ಷದ ಜೈಸನ್ ಮೃ*ತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿದೆ.

ಇದನ್ನೂ ಓದಿ : ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ, ಜೈಸನ್ ಆಗಲೇ ಇಹಲೋಕ ತ್ಯಜಿಸಿದ್ದರು.

Continue Reading

LATEST NEWS

Trending