Connect with us

DAKSHINA KANNADA

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

Published

on

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.


ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ ನಿವಾರಣೆಗಾಗಿ ಸ್ಥಿರ ಲಕ್ಷ್ಮಿ ಪ್ರಾಪ್ತಿಗಾಗಿ ಒಂದು ಸಾವಿರ ಚಂಡಿಕಾ ಪಾರಾಯಣ ಹಾಗೂ ಹೋಮಗಳನ್ನು ಮಾಡಿದರೆ ನಮ್ಮ ವಿಶೇಷ ಕಾಮನೆಗಳು ಪರಿಪೂರ್ಣವಾಗುತ್ತದೆ ಎಂಬ ವಿಶ್ವಾಸದಿಂದ ಈ ಯಾಗವನ್ನು ಮಾಡಲಾಗುತ್ತಿದ್ದು

ಬ್ರಹ್ಮಾಂಡದ ಮೂಲಬಿಂದು ಕರುಣಾ ಸಿಂದು ಬ್ರಹ್ಮಾಂಡದ ಸಕಲ ಜೀವ ಕಂದಗಳ ತಾಯಿ ಮಾತ್ರವಲ್ಲ ಬ್ರಹ್ಮಾಂಡವೆಲ್ಲವನ್ನು ತನ್ನ ಗರ್ಭದಲ್ಲಿಟ್ಟುಕೊಂಡವಳು ಶ್ರೀ ಶಾರದಾ ಮಾತೆ ಆದುದರಿಂದ ಈ ಜೀವಗಳಿಗೆ ಬೇಕಾದುದೆಲ್ಲವು ಅವಳಲ್ಲಿದೆ ಅವಳ ಶ್ರೀ ಚರಣಗಳಲ್ಲಿ ಶರಣಾದವರಿಗೆ ಅವಳ ಒಲುಮೆಯನ್ನು ಗಳಿಸಿದವರಿಗೆ ಲಕ್ಷವಲ್ಲದ ಸಂಗತಿಯೇ ಇಲ್ಲ.


ಜಗಜ್ಜನನಿಯ ಒಲುಮೆಯನ್ನು ಸಂಪಾದಿಸಲು ಮಾರ್ಕಾಂಡೇಯ ಪುರಾಣಾರ್ಗತವಾದ ಒಟ್ಟು ಏಳು ನೂರು ಮಂತ್ರಗಳನ್ನು ಋಷಿಗಳು ನಮಗೆ ಅನುಗ್ರಹಿಸಿದ್ದಾರೆ.

ಈ ಉಪಾಸನೆಯನ್ನು ನಾವು ಶ್ರದ್ಧಾ ಭಕ್ತಿಯಿಂದ ನೆರವೇರಿಸಬೇಕು. ಈ ಪುಣ್ಯಪ್ರದವಾದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಬಾಂಧವರೆಲ್ಲರೂ ತ್ರಿಕರಣ ಪೂರ್ವಕವಾಗಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ಶ್ರೀ ಶಾರದಾ ಮಾತೆಯ ಪರಮಾನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಮ್ರ ವಿನಂತಿ. ಐದು ದಿನಗಳ ಪರ್ಯಂತ ಈ ಮಹಾ ಯಾಗವು ನಡೆಯಲಿದ್ದು ದಿನನಿತ್ಯ ವೈದಿಕ ವಿಧಿ ವಿಧಾನಗಳ ಬಳಿಕ ಲಘು ಪೂರ್ಣಾಹುತಿ ನಡೆಯಲಿದೆ.

ಇಂದು ಮೂಂಜಾನೆ 5ಗಂಟೆಯಿಂದಲೇ ಗುರು ಗಣಪತಿ ಪೂಜನ, ಆವಾಹಿತ ದೇವತಾ ಪೂಜನ, ಕುಂಡ ಸಂಸ್ಕಾರ, ಸೂರ್ಯಾಗ್ನಿ ಗ್ರಹಣ (ಅರಣಿಮಂಥನ) ಪೂರ್ವಕ ಅಗ್ನಿ ಪ್ರತಿಷ್ಠೆ, ಸಹಸ್ರ ಚಂಡಿಕಾ ಹವನ ಪ್ರಾರಂಭ, ಬೆಳಿಗ್ಗೆ 10.30 ಗಂಟೆಗೆ ಲಘು ಪೂರ್ಣಾಹುತಿ, ಮಧ್ಯಾಹ್ನ ಪೂಜೆ, ಗೋಪೂಜೆ. ರಾತ್ರಿ 8.30 ಗಂಟೆಗೆ ಅಷ್ಠಾವಧಾನ ಸೇವೆ ಹಾಗೂ ರಾತ್ರಿ ಪೂಜೆ ನೆರವೇರಿದವು.

ಆದಿತ್ಯವಾರ ಪ್ರಾತಃಕಾಲ 5.೦೦ ಗಂಟೆಗೆ ಗುರು ಗಣಪತಿ ಪೂಜನ, ಆವಾಹಿತ ದೇವತಾ ಪೂಜನ, ಬೆಳಿಗ್ಗೆ 10.30 ಗಂಟೆಗೆ ಶ್ರೀ ಕಾಶೀಮಠಾಧಿಪತಿ ಶ್ರೀಮದ್ ಸಂಯಮೀ೦ದ್ರ ತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಮಹಾಪೂರ್ಣಾಹುತಿ, ಮಹಾಪೂಜೆ, ಗುರುಗಳಿಂದ ಆಶೀರ್ವಚನ, ಗೋಪೂಜೆ, ಕುಮಾರಿ ಪೂಜೆ, ದಂಪತಿಪೂಜೆ, ಬ್ರಾಹ್ಮಣ ಸುವಾಸಿನಿ ಪೂಜೆ, ವೈದಿಕ ಸಂಬಾವನೆ, ಆಶೀರ್ವಾದಗ್ರಹಣ, ಮಂತ್ರಾಕ್ಷತೆ. ಮಧ್ಯಾಹ್ನ 1.30 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಶಾರದೋತ್ಸವ ಸಮಿತಿಯ ಅಧ್ಯಕ್ಷ ಡಾ . ಉಮಾನಂದ ಮಲ್ಯ , ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ನರಸಿಂಹ ಆಚಾರ್ಯ, ಪಂಡಿತ್ ಕಾಶಿ ನಾಥ್ ಆಚಾರ್ಯ , ವೇದಮೂರ್ತಿ ಭಾಸ್ಕರ್ ಭಟ್ ,

ವೇದಮೂರ್ತಿ ವೈಕುಂಠ ಭಟ್, ಸಮಿತಿಯ ಅಧ್ಯಕ್ಷ ಡಾ. ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಕೋಶಾಧಿಕಾರಿ ವಿಠಲ ಆಚಾರ್ಯ, ರಘುರಾಮ ಕಾಮತ್, ಗಣೇಶ್ ಬಾಳಿಗಾ ಸಮಿತಿಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

DAKSHINA KANNADA

ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

Published

on

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಇದು ಅವರಿಗೆ ನಿದ್ರಾಹೀನತೆ ಸಮಸ್ಯೆಗೂ ಕಾರಣವಾಗುತ್ತದೆ. ರಾತ್ರಿ ಬೇಗ ಮಲಗದೇ ಇರುವುದು ಮತ್ತು ಮಧ್ಯಾಹ್ನ ನಿದ್ದೆ ಮಾಡುವುದು ಹೀಗೆ ಮಾಡಿದರೆ ಆರೋಗ್ಯ ಹಾಳಾಗುತ್ತದೆ. ರಾತ್ರಿಯ ಹೊತ್ತು ಚಿಕ್ಕ ಮಕ್ಕಳು ಅಪ್ಪ ಅಮ್ಮನ ಒಟ್ಟಿಗೆ ಮಲಗುತ್ತಾರೆ. ಅದೇ ರೀತಿ ಗಂಡ ಹೆಂಡತಿಯರು ಒಟ್ಟಿಗೆ ಮಲಗುವುದು ಸರ್ವೇ ಸಾಮಾನ್ಯ.

ಮದುವೆಯ ನಂತರ ಸಾಮಾನ್ಯವಾಗಿ ಗಂಡ ಹೆಂಡತಿ ಒಟ್ಟಿಗೆ ಮಲಗುತ್ತಾರೆ. ಇದು ಸಮಾಜದ ಸಾಮಾನ್ಯ ನಿಯಮ ಸಹ ಹೌದು ಎನ್ನಬಹುದು. ಮದುವೆಯ ನಂತರ ಪತಿ-ಪತ್ನಿಯರ ನಡುವಿನ ಚರ್ಚೆಗಳು, ಮಾತುಗಳು ಸಾಮಾನ್ಯವಾಗಿ ಮಲಗುವ ಸಮಯದಲ್ಲೇ ಆಗುತ್ತದೆ. ಇನ್ನು ಪತಿ-ಪತ್ನಿಯರು ಪ್ರತ್ಯೇಕವಾಗಿ ಮಲಗುವುದರಿಂದಲೂ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ವರದಿ ಮೂಲಕ ತಿಳಿದುಬಂದಿದೆ.

ಮೊದಲಿಗೆ, ಈ ವಿಷಯದ ಬಗ್ಗೆ ಮಾಡಿದ ಎಲ್ಲಾ ಸಂಶೋಧನೆಗಳು ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ಮಲಗುವುದು ತಪ್ಪಲ್ಲ ಎಂದು ತೋರಿಸುತ್ತದೆ ಮತ್ತು ಪ್ರತಿ ದಂಪತಿಗಳು ತಮ್ಮದೇ ಆದ ನಿಯಮಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಆದರೆ ಅನೇಕ ಬಾರಿ ಜನರು ಇಂತಹ ಮಾತುಗಳನ್ನು ಕೇಳಲು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಈ ದಂಪತಿಗಳ ಜೀವನದಲ್ಲಿ ಏನೋ ಸರಿಯಾಗಿಲ್ಲ ಎಂದು ಭಾವಿಸುತ್ತಾರೆ.

ಆದರೆ ಅಷ್ಟೇ ಅಲ್ಲ, ಕೆಲವೊಮ್ಮೆ ಬೇರೆ ಬೇರೆ ಕೋಣೆಗಳಲ್ಲಿ ದಂಪತಿಗಳಿಗೆ ಮಲಗುವುದರಿಂದ ದಂಪತಿಗಳಿಗೆನೇ ಹೆಚ್ಚು ಅನುಕೂಲಕರವಾಗಿರುತ್ತದೆ. ಸಂಶೋಧನೆಯ ಪ್ರಕಾರ ನೀವು ಪ್ರತ್ಯೇಕವಾಗಿ ಏಕೆ ಮಲಗುವುದರಿಂದ ಯಾವುದೇ ನಿದ್ರಾ ಭಂಗವನ್ನು ಉಂಟುಮಾಡುವುದಿಲ್ಲ. ಇದರಿಂದ ಸುಖಕರವಾಗಿ ನಿದ್ರೆ ಮಾಡಬಹುದು.

ರಾತ್ರಿಯಲ್ಲಿ ಗೊರಕೆ ಹೊಡೆಯುವುದು, ಒದೆಯುವುದು, ದೇಹದ ಉಷ್ಣತೆಯ ಬದಲಾವಣೆ ವಿಭಿನ್ನವಾಗಿರುತ್ತದೆ. ನೀವು ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗಲು ಪ್ರಯತ್ನಿಸಿದರೆ ನಿಮ್ಮ ದೇಹವು ಅರಾಮವಾಗಲು ಸಹಾಯಕವಾಗುತ್ತದೆ. ಸ್ವಲ್ಪ ಸಮಯದ ಅಂತರವು ನಿಮ್ಮ ಸಂಬಂಧವನ್ನು ಹೆಚ್ಚು ಉತ್ತಮಗೊಳಿಸುತ್ತದೆ. ನಿಮಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ.


ಜೊತೆಗೆ ಕೆಲವೊಮ್ಮೆ ದಂಪತಿಗಳ ನಡುವೆ ಮನಸ್ಥಾಪವಾದಾಗ ಈ ರೀತಿ ಕೆಲ ದಿನ ದೂರ ಮಲಗಿದರೆ ಆ ವಿರಹ ವೇದನೆಯಿಂದ ಕೋಪವೂ ತಣ್ಣಗಾಗುತ್ತದೆ. ದೈಹಿಕ ಅನ್ಯೋನ್ಯತೆ ಮತ್ತು ಭಾವನಾತ್ಮಕ ಪ್ರೀತಿಯ ಅವಶ್ಯಕತೆ ಯಾವಾಗಲೂ ಇರುತ್ತದೆ ಮತ್ತು ಆದ್ದರಿಂದ ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗುವುದು ಉತ್ತಮ. ಜೊತೆಗೆ ಕೆಲವೊಮ್ಮೆ ಜ್ವರ ರೀತಿಯ ಅನಾರೋಗ್ಯವಿದ್ದಾಗ ದೂರ ಮಲಗಿದರೆ ಒಬ್ಬರಿಂದ ಒಬ್ಬರಿಗೆ ಅದು ಹರಡುವುದಿಲ್ಲ.

ಇದನ್ನೂ ಓದಿ ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

ಕೆಲವೊಮ್ಮೆ ದಂಪತಿಗಳಿಗೆ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಅವರ ಲೈಂಗಿಕ ಜೀವನಕ್ಕೆ ಒಳ್ಳೆಯದು ಎಂದು ಸಂಶೋಧನೆ ಸೂಚಿಸುತ್ತದೆ. ಇದರಿಂದ ದಣಿವು ಆಗುವುದು ಕಡಿಮೆ ಆಗುತ್ತದೆ. ಪರಿಣಾಮವಾಗಿ, ಲೈಂಗಿಕ ಜೀವನವನ್ನು ಸುಧಾರಿಸಬಹುದು.

Continue Reading

LATEST NEWS

Trending