Thursday, October 21, 2021

ಸಾಯಿ ಧರಂತೇಜ್ ಅಪಘಾತ ಪ್ರಕರಣ: ಆರೋಗ್ಯ ಸ್ಥಿತಿ ಸ್ಥಿರ ಎಂದ ವೈದ್ಯರು

ಹೈದರಾಬಾದ್​: ಟಾಲಿವುಡ್​​​ ನಟ ಸಾಯಿ ಧರಂತೇಜ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್​​ನ ಅಪೋಲೋ ಆಸ್ಪತ್ರೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ. ಸಾಯಿ ಧರಂ ತೇಜ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಎಲ್ಲ ಅಂಗಾಂಗಗಳೂ ಸರಿಯಾಗಿ ಕೆಲಸ ಮಾಡುತ್ತಿವೆ ಎಂದು ಬುಲೆಟಿನ್​ನಲ್ಲಿ ಉಲ್ಲೇಖಿಸಲಾಗಿದೆ.


ಸದ್ಯಕ್ಕೆ ಸಾಯಿ ಧರಂತೇಜ್​ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ.

ಮುಂದಿನ ಆರೋಗ್ಯ ಬುಲೆಟಿನ್ ನಾಳೆ ಬಿಡುಗಡೆಯಾಗುತ್ತದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಇನ್ನು ಅಪೋಲೋ ಆಸ್ಪತ್ರೆಗೆ ನಟ ರಾಮ್​ಚರಣ್ ಮತ್ತು ರಾಮ್​ಚರಣ್ ಪತ್ನಿ ಉಪಾಸನಾ ಭೇಟಿ ಕೊಟ್ಟು ತೇಜ್ ಆರೋಗ್ಯದ ಕುರಿತು ವೈದ್ಯರ ಬಳಿ ವಿಚಾರಿಸಿದ್ದಾರೆ.

ಇದರ ಜೊತೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತು ಟಾಲಿವುಡ್ ನಟ ಶ್ರೀಕಾಂತ್ ಆಸ್ಪತ್ರೆಗೆ ಭೇಟಿ, ತೇಜ್ ಆರೋಗ್ಯ ವಿಚಾರಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...