Connect with us

    LATEST NEWS

    ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !

    Published

    on

    ಮಂಗಳೂರು: ತಮಿಳಿನ ಶಿವ ಕಾರ್ತಿಕೇಯನ್ ಮತ್ತು ಸಾಯಿ ಪಲ್ಲವಿ ಅಭಿನಯದ ‘ಅಮರನ್’ ಚಿತ್ರ ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದಾಗಲೇ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.


    ನಟಿ ಸಾಯಿ ಪಲ್ಲವಿಯವರು ದಕ್ಷಿಣ ಭಾರತದ ಜನಪ್ರಿಯ ನಟಿ ಹಾಗೂ ತನ್ನ ಪ್ರತಿಭೆಯಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ. ಸದಾ ಒಂದಲ್ಲಾ ಒಂದು ಸಿನಿಮಾದಲ್ಲಿ ಕಾರ್ಯನಿರತರಾಗಿರುವ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.

    ಇದನ್ನೂ ಓದಿ: ಹಾಸಿಗೆ ಹಿಡಿದಿದ್ದ 80ರ ಅಜ್ಜಿ ಮೇಲೆಯೂ ವರದಕ್ಷಿಣೆ ಕೇಸ್‌: ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌
    ರಣಬೀರ್ ಕಪೂರ್, ಯಶ್ ನಟನೆಯ ಹಿಂದಿಯ ರಾಮಾಯಣ ಸಿನಿಮಾದಲ್ಲಿ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ನಂತರ ಅಮೀರ್ ಖಾನ್ ನಿರ್ಮಾಣ ಮಾಡಿ ಅವರ ಮಗ ನಟಿಸುತ್ತಿರುವ ಹೊಸ ಹಿಂದಿ ಸಿನಿಮಾದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುತ್ತಿದ್ದಾರೆ.
    ಈಗಾಗಲೇ, ನಟ ನಾಗಚೈತನ್ಯ ನಟಿಸಿರುವ ‘ತಾಂಡೇಲ್’ ಸಿನಿಮಾದಲ್ಲೂ ಸಾಯಿ ಪಲ್ಲವಿಯವರು ನಟಿಸಿದ್ದಾರೆ. ಇದರ ಚಿತ್ರೀಕರಣ ಮುಗಿದಿದ್ದು, ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ. ಇನ್ನೂ ಸುಕುಮಾರ್ ನಿರ್ದೇಶನದ ಹೊಸ ಸಿನಿಮಾದಲ್ಲೂ ಸಾಯಿ ಪಲ್ಲವಿ ನಟಿಸಲಿದ್ದಾರೆ. ಇದರಲ್ಲಿ ನಾಯಕನಾಗಿ ರಾಮ್ ಚರಣ್ ಅಭಿನಯಿಸಲಿದ್ದಾರೆ.
    ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಯಿ ಪಲ್ಲವಿ, ಪಕ್ಕಾ ಫ್ಯಾಮಿಲಿ ಗರ್ಲ್ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗಾಗಿಯೇ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

    1 Comment

    1 Comment

    1. Pingback: ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ! - NAMMAKUDLA NEWS - ನಮ್ಮಕುಡ್ಲ ನ್ಯೂಸ್

    Leave a Reply

    Your email address will not be published. Required fields are marked *

    LATEST NEWS

    ಆರ್ಥಿಕ ಸಮಸ್ಯೆಯಿಂದ 40,000ಕ್ಕೆ 4 ವರ್ಷದ ಹೆಣ್ಣುಮಗು ಮಾರಾಟ – ಪೋಷಕರು ಸೇರಿ 6 ಮಂದಿ ಅರೆಸ್ಟ್‌

    Published

    on

    ಭುವನೇಶ್ವರ: ಹಣಕಾಸಿನ ಸಮಸ್ಯೆಯಿಂದಾಗಿ ಪೋಷಕರು ತಮ್ಮ 4 ವರ್ಷದ ಹೆಣ್ಣು ಮಗುವನ್ನು 40,000 ರೂ.ಗಳಿಗೆ ಮಾರಾಟ ಮಾಡಿರುವ ಆಘಾತಕಾರಿ ಘಟನೆ ಒಡಿಶಾದಲ್ಲಿ ನಡೆದಿದೆ.

    ಘಟನೆ ತಿಳಿದ ಕೂಡಲೇ ಮಗುವನ್ನು ರಕ್ಷಣೆ ಮಾಡಿರುವ ಬಡಗಡ ಪೊಲೀಸರು, ಪೋಷಕರು ಹಾಗೂ ಮಗು ಮಾರಾಟಕ್ಕೆ ಸಹಾಯ ಮಾಡಿದ ನಾಲ್ವರು ಸೇರಿ 6 ಮಂದಿಯನ್ನು ಬಂಧಿಸಿದ್ದಾರೆ.

    ಆರೋಪಿ ದಂಪತಿ ಬಿಹಾರ ಮೂಲದವರಾಗಿದ್ದು, ಬಡಗಡದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕುಟುಂಬದಲ್ಲಿ ತುಂಬಾ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದರು. ಹಾಗಾಗಿ ತಮ್ಮ ನಾಲ್ಕು ವರ್ಷದ ಮಗುವನ್ನು ಪಿಪಿಲಿಯಲ್ಲಿರುವ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದರು ಎಂದು ಬಡಗಡ ಪೊಲೀಸ್ ಠಾಣೆಯ ಪ್ರಭಾರಿ ತೃಪ್ತಿ ರಂಜನ್ ನಾಯಕ್ ತಿಳಿಸಿದ್ದಾರೆ.

    ಘಟನೆ ಬೆಳಕಿಗೆ ಬಂದ ನಂತರ ಬಡಗಡ ಪೊಲೀಸರು ಮಗುವನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮಧ್ಯವರ್ತಿಗಳು ಮತ್ತು ಮಗುವಿನ ಪೋಷಕರು ಸೇರಿದಂತೆ ಒಟ್ಟು 6 ಜನರನ್ನ ಬಂಧಿಸಿದ್ದಾರೆ.

    Continue Reading

    LATEST NEWS

    ಪೋಷಕರೇ ಗಮನಿಸಿ : 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಈ ‘ಆಹಾರ’ ನೀಡಿ.!

    Published

    on

    ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನ ಆರೋಗ್ಯವಾಗಿಡಲು ಬಯಸುತ್ತಾರೆ. ಮಕ್ಕಳು ಆರೋಗ್ಯವಾಗಿದ್ದರೆ ಮನೆಯೂ ಸುಖಮಯವಾಗಿರುತ್ತದೆ. ಆದರೆ ಅವರಿಗೆ ಯಾವ ರೀತಿಯ ಆಹಾರ ನೀಡಬೇಕೆಂದು ತಿಳಿಯಬೇಕು. ಬಾಲ್ಯದಿಂದಲೇ ಅವರಿಗೆ ಸರಿಯಾದ ಆಹಾರ ನೀಡಿದರೆ, ಅವರು ಎಲ್ಲಕ್ಕಿಂತ ಮುಂದಿರುತ್ತಾರೆ.

    ಮನೆಯಲ್ಲಿಯೇ ಇರುವ ಐದು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಖಂಡಿತವಾಗಿಯೂ ಕೆಲವು ರೀತಿಯ ಆಹಾರವನ್ನ ನೀಡಬೇಕು. ಪ್ರೋಟೀನ್, ಹಾಲು, ತರಕಾರಿಗಳು, ಹಣ್ಣುಗಳು ಮತ್ತು ಧಾನ್ಯಗಳಂತಹ ಆಹಾರಗಳನ್ನ ಖಚಿತಪಡಿಸಿಕೊಳ್ಳಬೇಕು.

    ಮಕ್ಕಳಿಗೆ ಕಡಿಮೆ ಸಕ್ಕರೆ ಅಂಶವಿರುವ ಆಹಾರ ನೀಡುವುದನ್ನು ಖಚಿತಪಡಿಸಿಕೊಳ್ಳಿ. ಅವರು ಹಣ್ಣಿನ ರಸ ಮತ್ತು ಹಣ್ಣಿನ ಪೀಸ್’ಗಳನ್ನು ತಿನ್ನುತ್ತಾರೆ ಎಂದು ಖಚಿತಪಡಿಸಿಕೊಳ್ಳಿ. ಅಲ್ಲದೆ ಬೀನ್ಸ್ ಮತ್ತು ಬಟಾಣಿ ಇರುವ ಆಹಾರಗಳನ್ನ ನೀಡಿದರೆ ಅವರು ಆರೋಗ್ಯವಾಗಿರುತ್ತಾರೆ. ಇದು ರೋಗಗಳನ್ನು ತ್ವರಿತವಾಗಿ ತಡೆಯುತ್ತದೆ.

    ಹಾಗೆಯೇ ಮಕ್ಕಳಿಗೆ ಹಾಲು ಕೂಡ ಕೊಡಬೇಕು. ಬೆಳಿಗ್ಗೆ ಮತ್ತು ರಾತ್ರಿ ಒಂದು ಲೋಟ ಹಾಲು ಕುಡಿಯಲು ಮರೆಯದಿರಿ. ಹಾಲು ಕುಡಿಯುವುದರಿಂದ ಅವರ ಶಕ್ತಿ ಹೆಚ್ಚುತ್ತದೆ. ಮೂಳೆಗಳು, ಸ್ನಾಯುಗಳು ಮತ್ತು ಹಲ್ಲುಗಳು ಆರೋಗ್ಯಕರವಾಗಿರುತ್ತವೆ.

    ಮಕ್ಕಳಿಗೆ ಧಾನ್ಯವೂ ಬಹಳ ಮುಖ್ಯ. ಅವರ ಆಹಾರದಲ್ಲಿ ದವಸ ಧಾನ್ಯಗಳು ಇರುವಂತೆ ನೋಡಿಕೊಳ್ಳಿ. ಗೋಧಿ, ಜೋಳ, ಓಟ್ಸ್, ಅಕ್ಕಿ ಮತ್ತು ಬೇಳೆಗಾಗಿ ನೋಡಿ. ಅವು ದೇಹಕ್ಕೆ ಶಕ್ತಿಯನ್ನು ನೀಡುತ್ತವೆ.

    Continue Reading

    LATEST NEWS

    ಹೆಬ್ರಿ : ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃ*ತ್ಯು

    Published

    on

    ಹೆಬ್ರಿ : ಮರದಿಂದ ಬಿ*ದ್ದು ಪ್ರಗತಿಪರ ಕೃಷಿಕರೊಬ್ಬರು  ಮೃ*ತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ನಡೆದಿದೆ.  62 ವರ್ಷದ ಜ್ಞಾನೇಶ್ವರ ಹೆಬ್ಬಾರ್ ಮೃ*ತ ಕೃಷಿಕ.

    ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿ*ದ್ದು ಜ್ಞಾನೇಶ್ವರ್  ಮೃ*ತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ಜ್ಞಾನೇಶ್ವರ್ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು ಎಂದು ತಿಳಿದುಬಂದಿದೆ.

    ಇದನ್ನೂ ಓದಿ : ಮೂರು ತಿಂಗಳ ಹಿಂದೆ ಪ್ರೀತಿಸಿ ಮದುವೆ.. ಮಗಳು ಕೈಹಿಡಿದ ಅಳಿಯನ ಜೀವವನ್ನೇ ತೆಗೆದ ಪೋಷಕರು..! 

    ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಜ್ಞಾನೇಶ್ವರ್ ಹೆಬ್ಬಾರ್ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅ*ಗಲಿದ್ದಾರೆ.

    Continue Reading

    LATEST NEWS

    Trending