FILM
ಸೈಫ್-ಕರೀನಾ ಸಮುದ್ರತೀರದಲ್ಲಿ ರೊಮ್ಯಾಂಟಿಕ್ ಪೋಸ್; ಫೋಟೋ ವೈರಲ್
Published
1 month agoon
ಕರೀನಾ ಕಪೂರ್ ಅಭಿನಯದ ಸಿಂಗಂ ಅಗೇನ್ ಚಿತ್ರ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರವು ಬಂಪರ್ ಓಪನಿಂಗ್ ಪಡೆದುಕೊಂಡಿದೆ. ನಟಿ ತನ್ನ ಪತಿ ಮತ್ತು ಇಬ್ಬರು ಪುತ್ರರೊಂದಿಗೆ ವಿದೇಶದಲ್ಲಿ ವಿಹಾರ ಮಾಡುತ್ತಿದ್ದಾರೆ.
ಈ ಎಲ್ಲದರ ನಡುವೆ, ಕರೀನಾ ದೀಪಾವಳಿ ಸಂದರ್ಭದಲ್ಲಿ ಪತಿ ಸೈಫ್ ಜೊತೆ ರೊಮ್ಯಾಂಟಿಕ್ ಡೇಟ್ ಅನ್ನು ಆನಂದಿಸಿದರು. ನಟಿ ತನ್ನ ಸ್ನೇಹಶೀಲ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಕರೀನಾ ಕಪೂರ್ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪತಿ ಸೈಫ್ ಅವರೊಂದಿಗೆ ಗುಣಮಟ್ಟದ ಸಮಯದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ದಂಪತಿಗಳು ಒಟ್ಟಿಗೆ ಸೂರ್ಯಾಸ್ತವನ್ನು ಆನಂದಿಸುತ್ತಿದ್ದಾರೆ.
ಕರೀನಾ ಮಾಲ್ಡೀವ್ಸ್ ರಜೆಯ ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಕರೀನಾ ತನ್ನ ಪತಿಯೊಂದಿಗೆ ರೊಮ್ಯಾಂಟಿಕ್ ಡೇಟ್ ಅನ್ನು ಆನಂದಿಸುವ ಸಮಯದಲ್ಲಿ ಗುಲಾಬಿ ಮತ್ತು ಹಸಿರು ಬಣ್ಣದ ಬೆರಗುಗೊಳಿಸುವ ಹೂವಿನ ಕಟ್-ಔಟ್ ಮ್ಯಾಕ್ಸಿ ಡ್ರೆಸ್ ಧರಿಸಿದ್ದರು.
ರಜೆಯ ಚಿತ್ರಗಳಲ್ಲಿ, ಸೈಫ್ ಕ್ಯಾಶುಯಲ್ ಕುರ್ತಾ-ಪೈಜಾಮವನ್ನು ಧರಿಸಿದ್ದರು.
ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್ ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.
ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.
ಮಂಗಳೂರು/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ರೇಣುಕಾಸ್ವಾಮಿ ಕೊಲೆ ನಡೆದು ಆರು ತಿಂಗಳಾಗಿದೆ. ಈ ಪ್ರಕರಣದಲ್ಲಿ ಒಟ್ಟು 17 ಜನ ಆರೋಪಿಗಳ ಬಂಧನವಾಗಿತ್ತು. ಆದರೆ ಕೆಲವು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ. ಅದರಲ್ಲಿ ಎ2 ಆರೋಪಿ ದರ್ಶನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಸಲ್ಮಾನ್ ಖಾನ್ ಶೂಟಿಂಗ್ ಸೆಟ್ ನಲ್ಲಿ ಭದ್ರತಾ ಲೋಪ !
ಸದ್ಯ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದ್ದು, ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಮಧ್ಯೆ ದರ್ಶನ್ ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ಒಂದು ಕಡೆ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗಲೇ ಅವರ ಮಧ್ಯಂತರ ಜಾಮೀನು ರದ್ದತಿ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಶುಕ್ರವಾರ(ಡಿ.6) ಅಥವಾ(ಡಿ.9) ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇನ್ನೂ ದರ್ಶನ್ ಗೆ ತೀವ್ರ ರಕ್ತದೊತ್ತಡ ಇರುವ ಕಾರಣದಿಂದ ಅವರು ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗುತ್ತಿಲ್ಲ. ಬಿಪಿ ಬಳಿಕ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಮಂಗಳೂರು/ಮುಂಬೈ: ನಟ ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನಿಂದ ಜೀವ ಬೆದರಿಕೆ ಇರೋದು ಗೊತ್ತೆ ಇದೆ. ಇದರ ನಡುವೆ ಸಲ್ಮಾನ್ ಖಾನ್ ಚಿತ್ರವೊಂದರ ಚಿತ್ರೀಕರಣದ ವೇಳೆ ಭಾರಿ ಭದ್ರತಾ ಲೋಪವಾಗಿದೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈನ ದಾದರ್ ವೆಸ್ಟ್ ನಲ್ಲಿ, ಸಿನಿಮಾ ಶೂಟಿಂಗ್ ಸಂದರ್ಭ ಅಭಿಮಾನಿಯೊಬ್ಬರು ಚಿತ್ರೀಕರಣ ವೀಕ್ಷಿಸಲು ಬಯಸಿದ್ದಾರೆ. ಆದರೆ ಭದ್ರತಾ ಸಿಬ್ಬಂದಿ ಅವರನ್ನು ಪಕ್ಕಕ್ಕೆ ಸರಿಸಿದಾಗ ಅವರ ನಡುವೆ ಮಾತಿನ ಚಕಮಕಿ ನಡೆಯಿತು.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಎನ್.ಐ.ಎ ದಾಳಿ
ಆ ಬಳಿಕ ಕೋಪಗೊಂಡ ಆ ವ್ಯಕ್ತಿ ಲಾರೆನ್ಸ್ ಬಿಷ್ಣೋಯಿ ಹೆಸರು ಹೇಳಿದ್ದಾನೆ. ಇದರಿಂದ ಭದ್ರತಾ ಸಿಬ್ಬಂದಿ ತಕ್ಷಣವೇ ಪೊಲೀಸರನ್ನು ಕರೆಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆ ವ್ಯಕ್ತಿ ಮುಂಬೈ ನಿವಾಸಿ ಎಂಬುದು ತಿಳಿದುಬಂದಿದೆ.
ಇತ್ತೀಚೆಗೆ, ಅಕ್ಟೋಬರ್ 24ರಂದು ಮುಂಬೈ ಸಂಚಾರಿ ಪೊಲೀಸರಿಗೆ ಬಂದ ಸಂದೇಶದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಅಕಿ 5 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.
ನಂತರ ಆ ವ್ಯಕ್ತಿಯನ್ನು ಹಾವೇರಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.