Connect with us

    DAKSHINA KANNADA

    ಸಾಯಿನಾಥ ಶಿರಡಿ ಬಾಬಾ ;ಭಕ್ತಿ ಪ್ರಧಾನ ಕನ್ನಡ ಚಾರಿತ್ರಿಕ ನಾಟಕದ ಪ್ರಥಮ ಅತ್ಯದ್ಭುತ ಪ್ರದರ್ಶನ ..!

    Published

    on

    ಮಂಗಳೂರು: ಶಿರಡಿ ಸಾಯಿಬಾಬಾ  ಮಂದಿರ ಸೇವಾ ಟ್ರಸ್ಟ್ ಉರ್ವ ಚಿಲಿಂಬಿ, ಮಂಗಳೂರು ಇವರ ಆಶ್ರಯದಲ್ಲಿ ತುಳುನಾಡ ತುಡರ್ ಇದರ ಅತ್ಯದ್ಭುತ ಕಲಾವಿದರಿಂದ ಕದ್ರಿ ನವನೀತ್ ಶೆಟ್ಟಿ ವಿರಚಿತ ಸಾಯಿನಾಥ ಶಿರಡಿ ಬಾಬಾ ಭಕ್ತಿ ಪ್ರಧಾನ ಕನ್ನಡ ಚಾರಿತ್ರಿಕ ನಾಟಕದ ಪ್ರಥಮ ಪ್ರದರ್ಶನ ರಾಮನವಮಿಯ ಪ್ರಯುಕ್ತ ನಿನ್ನೆ ಸಂಜೆ ಮಂಗಳೂರಿನ ಪುರಭವನದಲ್ಲಿ ನಡೆಯಿತು. ನಯನಾ ಕೊಟ್ಯಾನ್ ನಿರ್ದೇಶನದ, ಬಿ.ಎಸ್ ಕಾರಂತ್ ಸಂಗೀತ ಹಾಗೂ ಲಾವಣ್ಯ ವಿಶ್ವಾಸ್ ಕುಮಾರ್ ದಾಸ್ ಸಂಯೋಜನೆಯ ಸಾಯಿನಾಥ ಶಿರಡಿ ಬಾಬಾ ನಾಟಕಕ್ಕೆ ಮೊದಲ ಪ್ರದರ್ಶನದಲ್ಲೆ ಕಂಡು ಕೇಳರಿಯದ ರೀತಿಯಲ್ಲಿ ಮೆಚ್ಚುಗೆ ವ್ಯಕ್ತವಾಯಿತು. ಇದಕ್ಕೂ ಮುನ್ನ ನಡೆದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಜೆ.ಆರ್ ಲೋಬೋ ನೆರವೇರಿಸಿದ್ರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ” ಶಿರಡಿ ಸಾಯಿಬಾಬಾರ ಮಂದಿರದ ಮುಖಾಂತರ ಮಾಡಿರುವಂತಹ  ಸೇವಾ ಕಾರ್ಯಕ್ರಮಗಳು ಹಾಗೂ ಭಜನಾ ಕಾರ್ಯಕ್ರಮಗಳು ಉತ್ತಮವಾಗಿರುವಂತದ್ದು. ಸಾಯಿಬಾಬಾರಂತಹ  ದೇವತಾ ಮನಷ್ಯನನ್ನು ನಾವು ಇಂದು ಕೊಂಡಾಡುವಾಗ ಅವರ ತತ್ವ ಸಿದ್ದಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ್ರು. ಇದೇ ವೇಳೆ ಮಾತನಾಡಿದ ಶಿರಡಿ ಸಾಯಿಬಾಬಾ ಮಂದಿರ ಸೇವಾ ಟ್ರಸ್ಟ್ ನ ಆಡಳಿತ ಮೊಕ್ತೇಸರರಾದ ವಿಶ್ವಾಸ್ ಕುಮಾರ್ ದಾಸ್ “ಮಂದಿರ ಇಷ್ಟು ಅಭಿವೃದ್ಧಿ ಕಂಡು ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸುವವರೆಗೂ ಬೆಳೆದು ನಿಂತಿದೆ ಅಂದ್ರೆ ಅದಕ್ಕೆ ನಮ್ಮ ಜೊತೆ ಕೈ ಜೋಡಿಸಿ ಸಹಕರಿಸಿದ ಎಲ್ಲರೂ ಕಾರಣಕರ್ತರು ಎಂದರು.ಕಾರ್ಯಕ್ರಮದಲ್ಲಿ ಕೊರೊನಾ ಮಹಾಮಾರಿಯ ಸಂದರ್ಭ ಸಾವಿರಾರು ಜನರಿಗೆ ಶಿರಡಿ ಸಾಯಿಬಾಬಾ ಮಂದಿರದ ವತಿಯಿಂದ ಊಟೋಪಚಾರದ ವ್ಯವಸ್ಥೆ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಮಾಡಿ ವಿಸೇಷ ಸೇವೆ ನೀಡಿದ ಸೇವಾಕರ್ತರಿಗೆ ಸನ್ಮಾನಿಸಲಾಯಿತು.

    ಈ ಸಂದರ್ಭ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಪಾಲಿಕೆ ಪ್ರತಿಪಕ್ಷ ನಾಯಕರಾದ ಎ.ಸಿ ವಿನಯ್ ರಾಜ್, ಕಾರ್ಪೋರೇಟರ್ ಕೇಶವ ಮರೋಳಿ, ನೆಹರು ಯುವ ಕೇಂದ್ರದ ಸಂಯೋಜನ ಅಧಿಕಾರಿ ರಘುವೀರ್ ಸೂಟರ್ ಪೇಟೆ, , ನಾಟಕ ರಚನೆಕಾರ ಹಾಗೂ ನಮ್ಮ ಕುಡ್ಲ ವಾಹಿನಿ ಸಿ.ಒ.ಒ ಕದ್ರಿ ನವನೀತ್ ಶೆಟ್ಟಿ, ನಮ್ಮ ಕುಡ್ಲ ನಿರ್ದೇಶಕರಾದ ಲೀಲಾಕ್ಷ ಬಿ. ಕರ್ಕೇರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    LATEST NEWS

    Trending