Monday, May 17, 2021

 ಡಿಸೆಂಬರ್ 3ನೇವಾರದಲ್ಲಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಗೆ ಸಜಿಪಮುನ್ನೂರು ಗ್ರಾಮಸ್ಥರಿಂದ ಬಹಿಷ್ಕಾರದ ಎಚ್ಚರಿಕೆ..!

 ಡಿಸೆಂಬರ್ 3ನೇವಾರದಲ್ಲಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಗೆ ಸಜಿಪಮುನ್ನೂರು ಗ್ರಾಮಸ್ಥರಿಂದ ಬಹಿಷ್ಕಾರದ ಎಚ್ಚರಿಕೆ..!

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಗ್ರಾಮಸ್ಥರು ಗ್ರಾ.ಪಂ.ಚುನಾವಣೆಯನ್ನು ಬಹಿಷ್ಕರಿಸಿ ರಸ್ತೆಯಲ್ಲಿ ಬ್ಯಾನರ್ ಹಾಕಿದ ಪ್ರಸಂಗ ನಿನ್ನೆ  ನಂದಾವರದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ನಂದಾವರ ದೇವಸ್ಥಾನದ ಸಮೀಪ ಅರಮನೆ ಹಿತ್ಲು ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಬ್ಯಾನರ್ ಹಾಕಿದ್ದಾರೆ.

2020-21ರ ಸಾಲಿನಲ್ಲಿ  ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಸಜೀಪ ಮುನ್ನೂರು ಗ್ರಾಮದ ನಂದಾವರ ಅರಮನೆ ಹಿತ್ಲುವಿನ ಸಾರ್ವಜನಿಕರು ಒಗ್ಗಟ್ಟಿನಿಂದ ಬಹಿಷ್ಕರಿಸುತ್ತೇವೆ ಎಂದಿದ್ದಾರೆ.

ನಂದಾವರದಿಂದ ಅರಮನೆ ಹಿತ್ಲುವಿಗೆ ಸಂಪರ್ಕಿಸುವ ರಸ್ತೆಗೆ ಸರಕಾರದಿಂದ ಅನುದಾನ ದೊರೆತರೂ ಸಹ ಸ್ಥಳೀಯ ರಾಜಕಾರಣಿಗಳ ಬೇಜವಾಬ್ದಾರಿಯಿಂದ ಯಾವುದೇ ಕೆಲಸ ನಡೆಯದ ಕಾರಣ ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...