Connect with us

    BANTWAL

    ಸಜಿಪದಲ್ಲಿ ರಸ್ತೆ ಅಪಘಾತ: ಯುವಕ ಮೃ*ತ್ಯು

    Published

    on

    ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃ*ತಪಟ್ಟಿದ್ದಾರೆ.

    ಬರಿಮಾರು ನಿವಾಸಿ ಸರ್ಫ್ರಾಝ್ ( 33) ಮೃ*ತಪಟ್ಟ ಯುವಕ. ಬೈಕ್ ಸವರಳಾಗಿದ್ದ ಸಹೋದರಿ ಜಾಸ್ಮೀನ್ (18) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸರ್ಫ್ರಾಝ್ ವಿದ್ಯಾರ್ಥಿನಿಯಾಗಿರುವ ತಂಗಿ ಜಾಸ್ಮೀನ್ ರನ್ನು ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

    ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಇವರ ಸ್ಕೂಟರ್ ಗೆ ಎದುರಿನಿಂದ ಇಮ್ತಿಯಾಝ್ ಎಂಬಾತ ಚಲಾಯಿಸಿಕೊಂಡು ಬಂದ ಬೈಕ್ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ನಲ್ಲಿದ್ದ ರಸ್ತೆಗೆ ಎಸೆಯಲ್ಪಟ್ಟಿದ್ದರು.

    ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸರ್ಫ್ರಾಝ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    BANTWAL

    ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ

    Published

    on

    ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ  ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು  ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


    ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

    ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.

    Continue Reading

    BANTWAL

    ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿ

    Published

    on

    ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

    ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

    ಸಿಡಿಲು ಬಡಿದ ಸಂದರ್ಭದಲ್ಲಿ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಂಡು ಬರಲು ತೆರಳಿದ್ದರು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಸಿಡಿಲು ಬಡಿದ ಪರಿಣಾಮ 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ಅವರು ಹೇಳಿದ್ದಾರೆ.

    Continue Reading

    BANTWAL

    ದೊಡ್ಮನೆಗೆ ಎಂಟ್ರಿ ಕೊಟ್ಟ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ಯ

    Published

    on

    ಬಂಟ್ವಾಳ : ಖ್ಯಾತ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.
    ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ತಮ್ಮ ಕಾಮಿಡಿ ಮ್ಯಾನರಿಸಂನಿಂದಲೇ ಫೇಮಸ್. ಹಾಸ್ಯಮಯ ವೀಡಿಯೋಗಳನ್ನು ಮಾಡಿ ಜನಮನಕ್ಕೆ ಹತ್ತಿರವಾಗಿದ್ದಾರೆ. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.

    ಟಿಕ್ ಟಾಕ್ ನಲ್ಲಿ ಕಾಮಿಡಿ ವೀಡಿಯೋ ಮಾಡಿ ಪ್ರಸಿದ್ದಿ ಪಡೆದಿದ್ದ ಧನರಾಜ್ ಬಳಿಕ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕಾಮಿಡಿ ವಿಡಿಯೋಗಳನ್ನು ಮಾಡಿ ಖ್ಯಾತಿ ಗಳಿಸಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿಯೂ ಗಮನ ಸೆಳೆದಿದ್ದರು.


    ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್ಯ ಜೊತೆಗೂಡಿ ವೀಡಿಯೋಗಳನ್ನು ಮಾಡುತ್ತಿರುವ ಧನರಾಜ್ ಆಚಾರ್ಯ ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.

    Continue Reading

    LATEST NEWS

    Trending