Connect with us

    LATEST NEWS

    ಧೋನಿ ಬರ್ತ್​ಡೇ ಆಚರಿಸಿ ಹೊಸ ನಿಕ್ ನೇಮ್ ಕೊಟ್ಟ ಸಲ್ಮಾನ್ ಖಾನ್

    Published

    on

    ಮುಂಬೈ: ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಜುಲೈ 7 ಭಾನುವಾರದಂದು 43ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ನಟ ಸಲ್ಮಾನ್ ಖಾನ್ ಅವರು ಮುಂಬೈನಲ್ಲಿರುವ ತಮ್ಮ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಅದ್ದೂರಿಯಾಗಿ ಆಚರಿಸಿದ್ದಾರೆ. ಈ ವೇಳೆ ಧೋನಿ ಜೊತೆ ಅವರ ಪತ್ನಿ ಸಾಕ್ಷಿ ಕೂಡ ಇದ್ದರು. ಬರ್ತ್​ಡೇ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ.

    ಧೋನಿ ಅವರಿಗಾಗಿ ಸಲ್ಮಾನ್ ಖಾನ್ ಅವರು ವಿಶೇಷ ಕೇಕ್ ತರಿಸಿದ್ದರು. ಈ ಕೇಕ್​ನ ಧೋನಿ ಅವರು ಕತ್ತರಿಸಿದ್ದಾರೆ. ಸಲ್ಮಾನ್ ಖಾನ್ ಅವರು ಧೋನಿ ಜೊತೆ ಇರೋ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಜನ್ಮದಿನದ ಶುಭಾಶಯಗಳು ಕಪ್ತಾನ್ ಸಹಾಬ್’ ಎಂದಿದ್ದಾರೆ. ಧೋನಿಗೆ ಸಲ್ಮಾನ್ ಖಾನ್ ಕೊಟ್ಟಿರೋ ವಿಶೇಷ ಹೆಸರು ಇಷ್ಟ ಆಗಿದೆ.

    ಸಲ್ಮಾನ್ ಹಾಗೂ ಧೋನಿ ಒಟ್ಟಾಗಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಲ್ಮಾನ್ ಖಾನ್ ಅವರು ಧೋನಿಯವರನ್ನು ತಮ್ಮ ಮನೆಗೆ ಆಮಂತ್ರಿಸಿರಬಹುದು ಎಂದು ಅನೇಕರು ಹೇಳಿದ್ದಾರೆ.

    ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಶೀಘ್ರವೇ ಕನ್ನಡ ಸಿನಿಮಾ ನಿರ್ಮಾಣ ಮಾಡುತ್ತಾರೆ ಎನ್ನುವ ಸುದ್ದಿ ಇದೆ.

    LATEST NEWS

    ಉದ್ಯಾವರ : ಡಿವೈಡರ್ ಮೇಲೇರಿದ ಕಾರು; ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ಕಾಪು ಶಾಸಕ

    Published

    on

    ಉಡುಪಿ :ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಕಿಯಾ ಶೋರೂಂ ಬಳಿ ನಡೆದ ಅಪಘಾ*ತದ ಗಾ*ಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಮಣಿಪಾಲದಿಂದ ಪಡುಬಿದ್ರೆಯತ್ತ ಕಾರು ಸಾಗುತ್ತಿತ್ತು. ಈ ವೇಳೆ  ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿ*ಕ್ಕಿ ಹೊಡೆದು ನಿಂತಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 5 ಜನರಿಗೆ ಗಾಯಗಳಾಗಿವೆ.

    ಇದನ್ನೂ ಓದಿ : ಮಂಗಳೂರು : ಖಾಸಗಿ ಬಸ್ಸಿಗೆ ‘ಇಸ್ರೇಲ್‌’ ಹೆಸರು; ತೀವ್ರ ಆಕ್ಷೇಪದ ಬಳಿಕ ‘ಜೆರುಸಲೇಂ’ ಎಂದು ಬದಲಾಯಿಸಿದ ಮಾಲಕ

    ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಲು ನೆರವಾಗಿದ್ದಾರೆ. ಈ ಸಂದರ್ಭ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದ್ದು,  ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಮತ್ತು ಸ್ಥಳೀಯರೂ ನೆರವು ನೀಡಿದರು.

    Continue Reading

    DAKSHINA KANNADA

    ಪುತ್ತೂರು: ಪಿಕಪ್ ಗುದ್ದಿ ರಿಕ್ಷಾ ಪಲ್ಟಿ – ಹಲವರಿಗೆ ಗಾಯ

    Published

    on

    ಪುತ್ತೂರು: ನಿಧಾನವಾಗಿ ಚಲಿಸುತ್ತಿದ್ದ ರಿಕ್ಷಾಕ್ಕೆ ಹಿಂದಿನಿಂದ ಪಿಕಪ್ ಡಿಕ್ಕಿಯಾಗಿ ಹಲವರಿಗೆ ಗಾಯವಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ ಜಂಕ್ಷನ್‌ನಲ್ಲಿ ನಡೆದಿರುವುದು ತಿಳಿದು ಬಂದಿದೆ.

     

    ಇದನ್ನೂ ಓದಿ; ಉಳ್ಳಾಲ: ನಾಪತ್ತೆಯಾದ ವ್ಯಕ್ತಿ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆ…!

    ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ಎದುರಿನ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಉಳ್ಳಾಲ: ನಾಪತ್ತೆಯಾದ ವ್ಯಕ್ತಿ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆ…!

    Published

    on

    ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಇಂದು (ಅ.6) ಪಾಳು ಬಿದ್ದ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದೆ.


    ಪ್ರಸಾದ್ (44) ಮೃತ ದುರ್ದೈವಿ. ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಹೇಳಲಾಗಿದೆ. ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು.
    ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಪ್ರಸಾದ್, ತಾಯಿ, ತಂದೆ, ಇಬ್ಬರು ಸಹೋದರರು ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.
    ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Trending