bengaluru
ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ -ದತ್ತು ಪುತ್ರ ಉಮೇಶ್
ಬೆಂಗಳೂರು: ಕರ್ನಾಟಕ ಸರಕಾರದ ಪರಿಸರ ರಾಯಭಾರಿಯಾಗಿರುವ , ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತಂತೆ ಅವರ ದತ್ತು ಪುತ್ರ ಉಮೇಶ್ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ತಿಮ್ಮಕ್ಕ ಅವರು ಮೂರು ತಿಂಗಳ ಹಿಂದೆ ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ಬಳಿಕ ಬೇಲೂರು ಸಮೀಪದ ಬಳ್ಳೂರಿನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು.
ಸಪ್ಟೆಂಬರ್ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವಾರದ ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದಿದೆ .
bengaluru
ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು
ಬೆಂಗಳೂರು : ಬಿಗ್ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.
ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.
ಇದರಿಂದಾಗಿ ವಿನಯ್ ತೀರಾ ಡಲ್ ಆಗ್ಬಿಟ್ಟರು. ಬಾತ್‌ರೂಮ್ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.
bangalore
ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್ ರಾಜ್‌ಕುಮಾರ್ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..
ಇನ್ನು ಮೊನ್ನೆಯಷ್ಟೇ ನಟ ಅರ್ಜುನ್ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ ವಿಚಾರಿಸಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..
bangalore
ನ. 29ಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮದುವೆ…
ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.
ಇದೇ ನವೆಂಬರ್ 29ರಂದು ಬೆಂಗಳೂರಿನ ಯಲಂಹಕದ ಸಮೀಪ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿಶೇಷ ಅಂದರೆ, ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ಈ ಮದುವೆ ನಡೆಯಲಿದೆ ಎಂದು ವರದಿಯಾಗಿದೆ.ಪೂಜಾಗಾಂಧಿ ಮೂಲತ: ಉತ್ತರ ಪ್ರದೇಶದ ಮೀರತ್‌ನವರು. ಪಂಜಾಬಿ ಕುಟುಂಬದಲ್ಲಿ ಜನಿಸಿದ್ದ ಪೂಜಾ ಗಾಂಧಿ ದೆಹಲಿಯಲ್ಲಿ ನೆಲೆಸಿದ್ದರು. ಜಾಹೀತಾರು ಹಾಗೂ ಮಾಡಲಿಂಗ್ ಮೂಲಕ ಜನಪ್ರಿಯರಾಗಿದ್ದ ನಟಿ ‘ಮುಂಗಾರು ಮಳೆ’ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಂತೆ ಒಂದರ ಹಿಂದೊಂದರಂತೆ ಯಶಸ್ಸು ಇವರನ್ನು ಹಿಂಬಾಲಿಸಿಕೊಂಡು ಬಂದಿತ್ತು.
2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿ, ನಂತರ ಮುರಿದು ಬಿದ್ದಿತ್ತು. ಆದರೆ, ಈಗ ಹರಿದಾಡುತ್ತಿರುವ ಮದುವೆ ವಿಷಯದ ಬಗ್ಗೆ ನಟಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.ಕನ್ನಡವನ್ನು ಕಲಿತು ಕನ್ನಡಿಗರಿಂದ ಬೇಷ್ ಎನಿಸಿಕೊಂಡಿರೋ ಮುಂಗಾರು ಮಳೆ ಬೆಡಗಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು, ಇದೀಗ ಮದುವೆಗೆ ರೆಡಿ ಆಗಿದ್ದಾರೆ. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಕರ್ನಾಟಕದ ಸೊಸೆ ಆಗಲು ಪೂಜಾ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು
- bengaluru6 days ago
ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ-ಉಪ್ಪಿನಂಗಡಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣ