BANTWAL
ದಿ. ಜಯರಾಮ್ ಆಚಾರ್ಯ ನುಡಿ ನಮನ; ಗಣ್ಯರ ಸಂತಾಪ
Published
4 weeks agoon
ಮಂಗಳೂರು: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಜಯರಾಮ್ ಆಚಾರ್ಯ ಅವರಿಗೆ ಶೃದ್ಧಾಂಜಲಿ ಹಾಗೂ ನುಡಿ ನಮನ ಸಲ್ಲಿಸಲಾಗಿದೆ. ಉರ್ವಾ ಸ್ಟೋರ್ಸ್‌ನ ತುಳು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಜಯರಾಮ್ ಆಚಾರ್ಯ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಯಕ್ಷಗಾನದ ಹಾಸ್ಯ ಕಲಾವಿದನಾಗಿ ಯಕ್ಷಗಾನ ಕ್ಷೇತ್ರಕ್ಕೆ ಜಯರಾಮ್ ಆಚಾರ್ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಮಾತನಾಡಿ ಜಯರಾಮ್ ಆಚಾರ್ಯ ಎಂದೆಂದಿಗೂ ನೆನಪಿಡುವಂತ ವ್ಯಕ್ತಿತ್ವ. ಅವರು ಯಕ್ಷಗಾನದಲ್ಲಿ ಸಲ್ಲಿಸಿದ ಸೇವೆ ಮುಂದಿನ ಪೀಳಿಗೆಗೂ ಆದರ್ಶವಾಗಿದೆ. ಅವರ ಅಗಲುವಿಕೆ ಕೇವಲ ಯಕ್ಷರಂಗಕ್ಕೆ ಮಾತ್ರವಲ್ಲದೆ ಇಡೀ ಕಲಾರಂಗಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ.
ರಂಗಭೂಮಿ ಕಲಾವಿದ ನಟ ಅರವಿಂದ ಬೋಳಾರ್ ಅವರು ಮಾತನಾಡಿ, ಜಯರಾಮ್ ಆಚಾರ್ಯ ಅವರೊಬ್ಬ ಅಪ್ಪಟ ಹಾಸ್ಯ ಕಲಾವಿದ. ಅವರು ಹಾಸ್ಯದಲ್ಲಿ ಎಂದಿಗೂ ಕೆಟ್ಟ ಪದ ಬಳಸಿದ ಉದಾಹರಣೆಯೇ ಇಲ್ಲ. ಅವರು ನಾಟಕದಲ್ಲಿ ಚಿತ್ರರಂಗದಲ್ಲಿ ಎಲ್ಲಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದಾರೆ. ಅವರೊಂದು ಎಷ್ಟು ದೊಡ್ಡ ಕಲಾವಿದ ಎಂದು ಅವರಿಗೇ ಗೊತ್ತಿರಲಿಲ್ಲ. ಹೀಗಾಗಿ ಅವರು ಎಲ್ಲರೊಂದಿಗೂ ಸಹಜವಾಗಿಯೇ ಬೆರೆಯುತ್ತಿದ್ದು, ಸಲಹೆಗಳನ್ನು ನೀಡುತ್ತಿದ್ದರು. ಅಂತಹ ವ್ಯಕ್ತಿ ಇಂದು ನಮ್ಮೊಂದಿಗಿಲ್ಲವಾದ್ರೂ ಅವರ ಮಾರ್ಗದರ್ಶನ ನಮ್ಮಲ್ಲಿ ಯಾವತ್ತೂ ಇದೆ ಎಂದು ಬಂಟ್ವಾಳ ಜಯರಾಮ್ ಆಚಾರ್ಯ ಅವರನ್ನು ನೆನಪಿಸಿಕೊಂಡರು.
ಯಕ್ಷಗಾನ ಕಲಾವಿದ ಶಿಕ್ಷಕ ಬಾಸ್ಕರ್ ರೈ ಕುಕ್ಕುವಳ್ಳಿ ಜಯಾರಾಮ್ ಆಚಾರ್ಯ ಅವರ ಒಡನಾಟದ ದಿನವನ್ನು ಸ್ಮರಿಸಿಕೊಂಡು ಅವರ ಅಗಲುವಿಕೆಗೆ ಸಂತಾಪ ಸೂಚಿಸಿದ್ರು. ಜಯಾರಾಮ್ ಆಚಾರ್ಯ ಅವರ ಭಾಷಾ ಶುದ್ಧಿ ಹಾಗೂ ಅವರ ಹಾಸ್ಯ ಯಕ್ಷಗಾನ ಪ್ರಸಂಗಗಳನ್ನು ವಿಜ್ರಂಭಿಸುವಂತೆ ಮಾಡುತ್ತಿತ್ತು. ಒಬ್ಬ ಹಾಸ್ಯಗಾರನಾಗಿ ತನ್ನ ಎದುರಿಗಿದ್ದ ಪಾತ್ರಧಾರಿಯನ್ನು ಮೇಲೆತ್ತುವ ಕೆಲಸ ಅವರಿಂದ ಆಗುತ್ತಿತ್ತು. ಅಷ್ಟೊಂದು ಪ್ರಭಾವಶಾಲಿಯಾಗಿ ಹಾಸ್ಯಗಾರನ ಪಾತ್ರಕ್ಕೆ ಜಯಾರಾಮ್ ಆಚಾರ್ಯ ಅವರು ಜೀವ ತುಂಬುತ್ತಿದ್ದರು ಎಂದು ಸ್ಮರಿಸಿದ್ರು.
ದಿವಂಗತ ಜಯರಾಮ್ ಆಚಾರ್ಯ ಅವರ ಅಗಲುವಿಕೆಗೆ ಸಂತಾಪ ಸೂಚಿಸಿದ ಹಲವು ಗಣ್ಯರು, ಯಕ್ಷರಂಗಕ್ಕೆ ಅವರು ಕೊಟ್ಟ ಕೊಡುಗೆಯನ್ನು ಸ್ಮರಿಸಿದ್ದಾರೆ. ಅಗಲಿದ ಜಯರಾಮ್ ಆಚಾರ್ಯ ಅವರನ್ನು ಯಕ್ಷರಂಗ ಎಂದಿಗೂ ಮರೆಯಲಾರದು ಎಂದು ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಧ್ರುವ ಪಟ್ಲ ಫೌಂಡೇಶನ್, ತುಳು ನಾಟಕ ಕಲಾವಿದರ ಒಕ್ಕೂಟದಿಂದ ಈ ಶೃದ್ಧಾಂಜಲಿ ನುಡಿನಮನ ಕಾರ್ಯಕ್ರಮ ನಡೆದಿದ್ದು ಹಲವು ಗಣ್ಯರು ಹಾಗೂ ಸದಸ್ಯರು ತಮ್ಮ ನುಡಿನಮನ ಸಲ್ಲಸಿದ್ದಾರೆ.
You may like
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಮಂಗಳೂರು: ಟ್ರಾಯ್ನಿಂದ ಕರೆ; 1.71 ಕೋ.ರೂ ವಂಚನೆ
ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
ಪ್ರತಿವರ್ಷ ಅಯ್ಯಪ್ಪ ಮಾಲೆ ಹಾಕುವ ಸ್ವಾಮಿಗಳ ಹೆಸರು ಯಾವುದು ಗೊತ್ತಾ ??
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ