Connect with us

DAKSHINA KANNADA

ನಟ ಸಂಚಾರಿ ವಿಜಯ್‌ ರಿಕವರಿ ಚಾನ್ಸ್‌ ಕಡಿಮೆ: ಡಾ. ಅರುಣ್‌ ನಾಯಕ್‌

Published

on

ಬೆಂಗಳೂರು: ಅಪಘಾತಕ್ಕೀಡ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್‌ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ನ್ಯೂರೋ ಸರ್ಜನ್‌ ಡಾ. ಅರುಣ್‌ ನಾಯಕ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.


‘ವಿಜಯ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ರಿಕವರಿ ಚಾನ್ಸ್‌ ಕಡಿಮೆ ಇದೆ’ ಎಂದು ಅವರ ಕುಟುಂಬಕ್ಕೆ ಈಗಾಗಲೇ ತಿಳಿಸಿದ್ದೇನೆ ಎಂದು ಅರುಣ್‌ ತಿಳಿಸಿದ್ದಾರೆ. ಜೊತೆಗೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗೆಳೆಯ ನವೀನ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೊನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಮೆದುಳು ಹಾಗೂ ಕಾಲಿನ ಬಲ ತೊಡೆಯ ಮೂಳೆ ಮುರಿದಿತ್ತು.

ಇದರಿಂದ ಮಧ್ಯರಾತ್ರಿ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಮಧ್ಯೆ ಸ್ಯಾಂಡಲ್‌ವುಡ್‌ ನಟ ಸುದೀಪ್‌ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ್ದರು. ಕರೋನಾ ಸಮಯದಲ್ಲಿ ವಿಜಯ್‌ ತನ್ನ ಗೆಳೆಯರೊಂದಿಗೆ ಸೇರಿ ಸಂತ್ರಸ್ಥರಿಗೆ ಕಿಟ್‌ ಹಂಚುವ ಮೂಲಕ ಸುದ್ದಿಯಾಗಿದ್ದರು

DAKSHINA KANNADA

ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್‌..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್‌

Published

on

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್‌ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.

Continue Reading

DAKSHINA KANNADA

ಗಾಂ*ಜಾ ಸಾಗಾಟದ ವೇಳೆ ಪೊಲೀಸರ ಬಲೆಗೆ ಬಿದ್ದ ಆರೋಪಿ..!

Published

on

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ.  ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂ*ಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಯಿಂದ ಗೂಡ್ಸ್ ಟೆಂಪೋ, 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂ*ಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ  ಎಂದು ಅಂದಾಜಿಸಲಾಗಿದೆ. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹ*ಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂ*ಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.

Continue Reading

DAKSHINA KANNADA

ಚೈತ್ರಾ ಗ್ಯಾಂಗ್‌ ಹೊಸ ಕಿರಿಕ್‌…! ಸಾಕ್ಷಿ ಹೇಳದಂತೆ ಬೆದರಿಕೆ…!

Published

on

ಮಂಗಳೂರು ( ಚಿಕ್ಕಮಗಳೂರು ) : ಉದ್ಯಮಿಯೊಬ್ಬರಿಗೆ ಟಿಕೇಟ್ ಕೊಡಿಸುವುದಾಗಿ 5  ಕೋಟಿ ವಂಚನೆ ಮಾಡಿ ಜೈಲು ಸೇರಿದ್ದ ಉಡುಪಿ ಜಿಲ್ಲೆಯ ಚೈತ್ರಾ ಗ್ಯಾಂಗ್ ಮತ್ತೆ ಸುದ್ದಿಯಾಗಿದೆ. ಜೈಲು ಸೇರಿ ತಿಂಗಳುಗಳ ಬಳಿಕ ಷರತ್ತುಬದ್ಧ ಜಾಮೀನು ಪಡೆದು ಹೊರ ಬಂದ ಆರೋಪಿ ಸಾಕ್ಷಿಯೊಬ್ಬರ ಜೊತೆ ಕಿರಿಕ್ ಮಾಡಿದ್ದಾನೆ.

CHAITRA KUNDAPUR

ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ಕೇಸ್‌ನ ಪ್ರಮುಖ ಆರೋಪಿ, ಚೈತ್ರಾಳ ರೈಟ್ ಹ್ಯಾಂಡ್ ಆಗಿದ್ದ ಧನರಾಜ್‌ ಇದೀಗ ಕಿರಿಕ್ ಮಾಡಿಕೊಂಡಿದ್ದಾನೆ. ಧನರಾಜ್ ಚೈತ್ರಾ ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬನ ಮೇಲೆ ಹ*ಲ್ಲೆ ನಡೆಸಿದ್ದಾನೆ.

ಚೈತ್ರಾ ಗ್ಯಾಂಗ್ ನ ಪ್ರಮುಖ ಆರೋಪಿಯಾಗಿರುವ ದನರಾಜ್ 2024ರ  ಫೆಬ್ರವರಿ ತಿಂಗಳಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದ. ಈ ನಡುವೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಸೆಲೂನ್ ಮಾಲೀಕ ರಾಮು ಮೇಲೆ ಹ*ಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಸೋಮವಾರ ಕಡೂರಿನ ಹೋಟೆಲ್‌ ಒಂದರಲ್ಲಿ ರಾಮು ಮೇಲೆ ಹ*ಲ್ಲೆ ನಡೆಸಿದ್ದಾಗಿ ಬೀರೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಗೋಪಾಲ್‌ ಜೀ ಪಾತ್ರದಾರಿಗೆ ರಾಮು ಸೆಲೂನಲ್ಲಿ ಮೇಕಪ್ ಮಾಡಿಲಾಗಿತ್ತು. ಪಾತ್ರದಾರಿ ಚೆನ್ನಾ ನಾಯ್ಕಗೆ ಮೇಕಪ್ ಮಾಡಿಸಲು ಧನರಾಜ್, ರಾಮು ಸೆಲೂನಿಗೆ ಕರೆದುಕೊಂಡು ಹೋಗಿದ್ದ. ರಾಮು ಹೇಳಿಕೆಯನ್ನು ಪ್ರಮುಖ ಸಾಕ್ಷಿಯಾಗಿ ಪರಿಗಣಿಸಿ ಆರೋಪಿಗಳ ಬಂಧನವಾಗಿತ್ತು.

ಆದ್ರೆ ಇದೀಗ ಷರತ್ತುಬದ್ಧ ಜಾಮೀನು ಪಡೆದು ಹೊರಬಂದ ಆರೋಪಿ, ಸೆಲೂನ್ ಮಾಲೀಕ ರಾಮುವಿಗೆ ನ್ಯಾಯಾಲಯದಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿ ಹ*ಲ್ಲೆ ನಡೆಸಿದ ಬಗ್ಗೆ ರಾಮು ಕುಟುಂಬ ಬೀರೂರು ಪೊಲೀಸರಿಗೆ ದೂರು ನೀಡಿದೆ. ಆದ್ರೆ ಈ ಬಗ್ಗೆ ಬೀರೂರು ಪೊಲೀಸರು ದೂರು ದಾಖಲಿಸದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ನ್ಯಾಯಾಲಯದಲ್ಲಿ ಸಾಕ್ಷಿ ಹೇಳದಂತೆ ಆರೋಪಿಯೊಬ್ಬ ಬೆದರಿಕೆ ಹಾಕುತ್ತಿದ್ದು, ಸೂಕ್ತ ನ್ಯಾಯ ಕೊಡಿಸಬೇಕು ಎಂದು ರಾಮು ಕುಟುಂಬ ಒತ್ತಾಯಿಸಿದೆ.

Continue Reading

LATEST NEWS

Trending