Saturday, November 27, 2021

ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ ಲಾರಿ ಚಾಲಕನ ಬಂಧನ

ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಮಂಗಳೂರು ನಗರ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.


ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್​ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ,

ಫರಂಗಿಪೇಟೆ ಔಟ್​ ಪೋಸ್ಟ್​ ಬಳಿ ಲಾರಿ ಅಡ್ಡಗಟ್ಟಿದ್ದರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಚಾಲಕ ಪ್ರಯತ್ನಿಸಿದ್ದ. ಬಳಿಕ ಔಟ್​ಪೋಸ್ಟ್​ನ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ.
ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು.

ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.
ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...