Connect with us

FILM

ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತಕ್ಕೆ ನಿಧನ – ಗಣ್ಯರ ಸಂತಾಪ..!

Published

on

ಸ್ಯಾಂಡಲ್​ ವುಡ್​ ನಲ್ಲಿ ನಟ ವಿಜಯ್ ರಾಘವೇಂದ್ರ  ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.

ಬೆಂಗಳೂರು :  ಸ್ಯಾಂಡಲ್​ ವುಡ್​ ನಲ್ಲಿ ನಟ ವಿಜಯ್ ರಾಘವೇಂದ್ರ  ಅವರ ಪತ್ನಿ ಸ್ಪಂದನಾಗೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.

ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಪುನೀತ್ ರಾಜ್​ಕುಮಾರ್ ಸೇರಿ ಅನೇಕ ಸೆಲೆಬ್ರಿಟಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈಗ ಸ್ಪಂದನಾ ಕೂಡ ನಿಧನ ಹೊಂದಿದ್ದು ನಿಜಕ್ಕೂ ಶಾಕಿಂಗ್ ಆಗಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.

ಸ್ಪಂದನಾ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ.

ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಪಂದನಾ ತಂದೆ ಬಿ.ಕೆ ಶಿವರಾಂ ಮತ್ತು ಅವರ ತಂದೆ ಬ್ಯಾಂಕಾಕ್ ಗೆ ತೆರಳಿದ್ದಾರೆ.

ವಿಜಯ ರಾಘವೇಂದ್ರ ಅವರು ಶೂಟಿಂಗ್ ನಿಮಿತ್ತ ಬೆಂಗಳೂರಿನಲ್ಲಿಯೇ ಇದ್ದರು ಎಂದು ತಿಳಿದು ಬಂದಿದೆ, ಸ್ಪಂದನಾ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ.

ಸ್ಪಂದನಾ  ಮತ್ತು ವಿಜಯ್‌ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಇವರಿಗೆ ಶೌರ್ಯ ಎಂಬ ಒಬ್ಬ ಮಗನಿದ್ದಾನೆ.

ಸ್ಪಂದನಾ 2016 ರಲ್ಲಿ ತೆರೆಕಂಡ ರವಿಚಂದ್ರನ್ ಅವರ ಅಪೂರ್ವ ಸಿನಿಮಾದಲ್ಲಿ ನಟಿಸಿದ್ದರು, ಇದರ ಜೊತೆಗೆ ಸ್ಪಂದನಾ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದಾರೆ.

ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪಂದನಾ ಅವರ ಅಗಲಿಕೆ ಸುದ್ದಿ ಆಘಾತವನ್ನುಂಟು ಮಾಡಿರುವುದಾಗಿ ತಿಳಿಸಿದ್ದಾರೆ.

ಸ್ಪಂದನ ನಿಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ತೀರಾ ಇತ್ತೀಚೆಗಷ್ಟೆ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ನನ್ನನ್ನು ಭೇಟಿ ಮಾಡಿದ್ದರು.

ಈಗ ಅವರು ಇಲ್ಲ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಅವರದ್ದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿಯಾಗಿದೆ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಹಲವು ಗಣ್ಯರು ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

FILM

ಸಮಂತಾ ಔಟ್.. ರಶ್ಮಿಕಾ ಮಂದಣ್ಣಗೆ ಸಿಕ್ತು ಬಿಗ್ ಜಾಕ್ ಪಾಟ್..!

Published

on

ಸೌತ್ ನಟಿ ಸಮಂತಾ ನಾಯಕಿಯಾಗಿ ನಟಿಸಬೇಕಾಗಿದ್ದ ಸಿನೆಮಾದಲ್ಲಿ ರಶ್ಮಿಕಾ ಮಂದಣ್ಣ ಚಾನ್ಸ್ ಗಿಟ್ಟಿಸಿಕೊಂಡಿದ್ದು, ಸ್ಯಾಮ್ ಔಟ್ ಆಗಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಮಂತ ಶೂಟಿಂಗ್‌ಗೆ ಬ್ರೇಕ್ ಕೊಟ್ಟಿದ್ದು ಈ ಹಿನ್ನೆಲೆ ದೊಡ್ಡ ಅವಕಾಶ ರಶ್ಮಿಕಾ ಪಾಲಾಗಿದೆ.

ಸದ್ಯ ಶ್ರೀವಲ್ಲಿ ಕೈಯಲ್ಲಿ ಪುಷ್ಪ 2, ಅನಿಮಲ್, ರೈನ್‌ಬೋ, ರವಿತೇಜ ಜೊತೆಗಿನ ಸಿನಿಮಾ, ವಿಜಯ್ ದೇವರಕೊಂಡ ಜೊತೆ ಚಿತ್ರ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಿವೆ.

ತೆಲುಗಿನ ನಿರ್ದೇಶಕ ರಾಹುಲ್ ರವಿಚಂದ್ರನ್ ಡೈರೆಕ್ಷನ್ ಚಿತ್ರದಲ್ಲಿ ಸಮಂತಾ ನಟಿಸುತ್ತಾರೆ ಎಂದು ಫೈನಲ್ ಆಗಿತ್ತು. ಈಗ ಕಾರಣಾಂತರಗಳಿಂದ ಸ್ಯಾಮ್ ನಟಿಸುತ್ತಿಲ್ಲ.

ಆ ಪಾತ್ರಕ್ಕೆ ರಶ್ಮಿಕಾರನ್ನ ತಂಡ ಸಂಪರ್ಕಿಸಿ ಕಥೆ ಹೇಳಿದ್ದಾರಂತೆ, ನಟಿ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ರೈನ್‌ಬೋ ಸಿನಿಮಾದಲ್ಲಿ ಸಮಂತಾ ನಟಿಸಬೇಕಿತ್ತು. ಆದರೆ ಸ್ಯಾಮ್ ಆ ಪ್ರಾಜೆಕ್ಟ್‌ನ ಅನಾರೋಗ್ಯದ ದೃಷ್ಟಿಯಿಂದ ಕೈಬಿಟ್ಟಿದ್ದರು. ‘ರೈನ್‌ಬೋ’ ಸಿನಿಮಾ ಕೂಡ ರಶ್ಮಿಕಾ ಪಾಲಾಯ್ತು.

ಇದೀಗ 2ನೇ ಬಾರಿ ಸ್ಯಾಮ್ ನಟಿಸಿಬೇಕಿದ್ದ ಪಾತ್ರ ಮತ್ತೆ ರಶ್ಮಿಕಾ ಪಾಲಾಗಿದೆ.

Continue Reading

bangalore

SHOCKING! ಗುರುತೇ ಸಿಗದಷ್ಟು ಬದಲಾದ ‘ಹುಚ್ಚ’ ಖ್ಯಾತಿಯ ನಟಿ ರೇಖಾ …!

Published

on

ಶಾಕಿಂಗ್ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್.

 

ಬೆಂಗಳೂರು : ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.

ಅಷ್ಟೊಂದು ಮುದ್ದು ಮುದ್ದು ಮುಖ, ಹೊಳೆಯುತ್ತಿದ್ದ ಕಣ್ಣು, ಮಿನುಗುತ್ತಿದ್ದ ಕೆನ್ನೆಯನ್ನು ಇಂದಿಗೂ ಅಭಿಮಾನಿಗಳು ನೆನೆಸಿಕೊಳ್ಳುತ್ತಾರೆ.ಆದ್ರೆ ಈಗ ಅದೇ ರೇಖಾ ಗುರುತೆ ಸಿಗದಷ್ಟರ ಮಟ್ಟಿಗೆ ಬದಲಾಗಿ ಹೋಗಿದ್ದಾರೆ.

ಸಣಕಲು ದೇಹ, ಬತ್ತಿದ ಕಣ್ಣುಗಳು, ಬಾಡಿದ ಕೆನ್ನೆಗಳು ರೇಖಾ ಅವರ ನಿಜ ಸ್ವರೂಪವನ್ನೇ ಬದಲಾಯಿಸಿ ಬಿಟ್ಟಿದೆ.

ಒಂದು ಕಾಲದಲ್ಲಿ ಬೆಳ್ಳಿ ತೆರೆಯಲ್ಲಿ ಮಿರ ಮಿರ ಮಿಂಚಿ ಮರೆಯಾಗಿರುವ ನಟಿ ರೇಖಾ ದಿಢೀರನೆ ತೆಲುಗು ಕಿರುತೆರೆ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆಗಿದ್ದಾರೆ.

ತೆಲುಗಿನ ‘ಶ್ರೀದೇವಿ ಡ್ರಾಮಾ ಕಂಪನಿ’ ಕಾಮಿಡಿ ಶೋಗೆ ಅತಿಥಿಯಾಗಿ ಬಂದಿದ್ದ ರೇಖಾ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹುಟ್ಟಿಬೆಳೆದ ರೇಖಾ ಕನ್ನಡದ ‘ಹುಚ್ಚ’ ಚಿತ್ರದಲ್ಲಿ ಮೊದಲಿಗೆ ಆಕೆ ಬಣ್ಣ ಹಚ್ಚಿದ್ದರು.

ಅಲ್ಲಿಂದ ಮುಂದೆ ಕನ್ನಡ ಸಿನಿರಸಿಕರಿಗೆ ‘ಹುಚ್ಚ’ ನಟಿ ರೇಖಾ ಅಂತ್ಲೇ ಪರಿಚಿತರಾದರು.

ಕನ್ನಡ ಜೊತೆ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲಿ ರೇಖಾ ಮಿಂಚಿದರು. ತೆಲುಗಿನಲ್ಲೂ ಆಕೆ ಹಲವು ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದಾರೆ.

ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ ಚೆಲುವೆಗೆ ಚಿತ್ರರಂಗಕ್ಕೆ ಬರುವುದು ಕಷ್ಟವಾಗಲಿಲ್ಲ.

‘ಚಿತ್ರ’, ‘ತುಂಟಾಟ’, ‘ಮೋನಲಿಸಾ’, ‘ಚೆಲ್ಲಾಟ’ ಹೀಗೆ ಹಿಟ್ ಸಿನಿಮಾಗಳಲ್ಲಿ ಮಿಂಚಿದರು.

ಬಳಿಕ ತೆಲುಗು, ತಮಿಳು ಸಿನಿಮಾಗಳತ್ತ ಮುಖ ಮಾಡಿದ್ದರು. ಗಣೇಶ್ ಜೋಡಿಯಾಗಿ ‘ಹುಡುಗಾಟ’ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬಂದ ರೇಖಾ ಮತ್ತೊಮ್ಮೆ ಕಮಾಲ್ ಮಾಡಿದರು.

ನಟಿ ರೇಖಾ 2014ರ ನಂತರ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಅವಕಾಶಗಳು ಸಿಕ್ಕಿಲ್ವೋ ಅಥವಾ ಸಿನಿಮಾ ಮೇಲಿನ ಆಸಕ್ತಿ ಕಮ್ಮಿ ಆಯ್ತೋ ಗೊತ್ತಿಲ್ಲ.

ಆದರೆ ಇದ್ದಕ್ಕಿಂದ್ದಂತೆ ಬಿಗ್ ಸ್ಕ್ರೀನ್​ನಿಂದ ಮಾಯವಾಗಿದ್ದ ರೇಖಾ ಸಿನಿಪ್ರೇಮಿಗಳಿಗೆ ಅಪರೂಪದ ತಾರೆಯಾಗಿ ಉಳಿದುಕೊಂಡು ಬಿಟ್ರು.

ಆದಷ್ಟು ಬೇಗ ಕನ್ನಡ ಮುದ್ದು ಮುಖದ ನಟಿ ರೇಖಾ ವೇದವ್ಯಾಸ್ ಗುಣ ಮುಖರಾಗಿ ಮೊದಲಿನ ಮಂದಹಾಸ ಬರಲಿ ಅನ್ನೋದೆ ಅವರ ಅಭಿಮಾನಿಗಳ ಆಸೆ.

 

Continue Reading

FILM

ಮಲಯಾಳಂನ ‘2018’ ಚಿತ್ರ ಆಸ್ಕರ್ ಗೆ ನಾಮಿನೇಟ್

Published

on

OSCAR AWARD : 2024ಕ್ಕೆ ಭಾರತವು ಆಸ್ಕರ್ ಪ್ರಶಸ್ತಿಗೆ ಮಲಯಾಳಂ ಭಾಷೆಯ ‘2018’ ಚಿತ್ರವನ್ನು ನಾಮಿನೇಟ್ ಮಾಡಿದೆ.

ಬಾರಿ ಆಸ್ಕರ್​ಗೆ ಭಾರತದದಿಂದ ಕಳಿಸಲಾಗುವ ಅಧಿಕೃತ ಸಿನಿಮಾ ಘೋಷಣೆ ಆಗಿದ್ದು, ಮಲಯಾಳಂ ನ ‘2018’ ಸಿನೆಮಾ ಆಯ್ಕೆಯಾಗಿದೆ.

ಕಳೆದ ಸಲ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗಾಗಿ ಆಸ್ಕರ್ ಪ್ರಶಸ್ತಿ ಬಂದಿತ್ತು.

ಈ ಬಾರಿ ದಕ್ಷಿಣದ ಮತ್ತೊಂದು ಸಿನಿಮಾ ಈ ವರ್ಷದ ಆಸ್ಕರ್ ಪ್ರಶಸ್ತಿಗಾಗಿ ನಾಮಿನೇಟ್ ಆಗಿದೆ.

ಮಲಯಾಳಂನ 2018 ಹೆಸರಿನ ಚಿತ್ರ ಈ ಬಾರಿ ಆಸ್ಕರ್ ಪ್ರಶಸ್ತಿಗಾಗಿ ಸೆಣಸಲಿದೆ. ಈ ವಿಷಯವನ್ನು ಆಸ್ಕರ್ ಆಯ್ಕೆ ಸಮಿತಿ ಅಧ್ಯಕ್ಷ, ಕನ್ನಡದವರೇ ಆಗಿರುವ ಗಿರೀಶ್ ಕಾಸರವಳ್ಳಿ ತಿಳಿಸಿದ್ದಾರೆ.

ಟೊವಿನೋ ಥಾಮಸ್ ನಟನೆಯ 2018 ಹೆಸರಿನ ಮಲಯಾಳಂ ಸಿನಿಮಾ ವಿಶೇಷ ಕಥಾವಸ್ತುವನ್ನು ಹೊಂದಿದೆ.

ಕೇರಳದಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅತಿವೃಷ್ಠಿ ಸೃಷ್ಟಿಸಿದ ಆವಾಂತರವನ್ನು ಆಧರಿಸಿದ ಚಿತ್ರಿಸಲಾಗಿದೆ.

ಈ ಚಿತ್ರಕ್ಕೆ ಭಾರೀ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ಈ ಸಿನಿಮಾವನ್ನು ಕಾಸರವಳ್ಳಿ ಅಧ್ಯಕ್ಷತೆಯ ಕಮೀಟಿಯು ಆಸ್ಕರ್ ಪ್ರಶಸ್ತಿ ಸ್ಪರ್ಧೆಗಾಗಿ ಆಯ್ಕೆ ಮಾಡಲಾಗಿದೆ.

ಈ ಆಯ್ಕೆಯು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಮೂಲಕ ನಡೆಯುತ್ತದೆ. ಇದು ಪ್ರತಿ ವರ್ಷವೂ ಒಂದು ಸಿನಿಮಾವನ್ನು ಆಯ್ಕೆ ಮಾಡಿ, ಸರಕಾರವೇ ಉಳಿದ ವೆಚ್ಚವನ್ನು ಭರಿಸಿ ಕಳುಹಿಸುತ್ತದೆ.

ಜೊತೆಗೆ ಖಾಸಗಿಯಾಗಿ ಯಾವ ಸಿನಿಮಾಗಳು ಕೂಡ ಸ್ಪರ್ಧಿಸಬಹುದಾಗಿದೆ.

Continue Reading

LATEST NEWS

Trending