ಸ್ಯಾಂಡಲ್‌ವುಡ್ ನಟಿ ಹಾಗೂ ರಾಜಕರಣಿ ತಾರಾ ಅನುರಾಧ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದುಕೊಂಡರು.
ಕಟೀಲು : ಸ್ಯಾಂಡಲ್‌ವುಡ್ ನಟಿ ಹಾಗೂ ರಾಜಕರಣಿ ತಾರಾ ಅನುರಾಧ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದುಕೊಂಡರು.
ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಫುಲ್ ಅಕ್ಟೀವ್ ಆಗಿದ್ದಾರೆ.
ಈ ಮಧ್ಯೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.
ಇನ್ನು ಸಾಲು ಸಾಲು ಚಿತ್ರಗಳಲ್ಲಿ ನಟಿ ತಾರಾ ಬ್ಯುಸಿಯಾಗಿದ್ದಾರೆ. ಯಾವುದೇ ಹಮ್ಮು- ಬಿಮ್ಮುಗಳು ಇಲ್ಲದೆ ಸರಳವಾಗಿರುವ ತಾರಾ ರಾಜಕೀಯ ಕ್ಷೇತ್ರದಲ್ಲಿ ಕೂಡ ಕೈಯಾಡಿಸಿ ಸೈ ಎನಿಸಿಕೊಂಡಿದ್ದಾರೆ.
ನನ್ನಮ್ಮ ಸೂಪರ್ ಸ್ಟಾರ್ 2 ರಿಯಾಲಿಟಿ ಶೋ ಗೆ ತೀರ್ಪುಗಾರರಾಗಿ ಕೂಡ ಕಾಣಿಸಿಕೊಳ್ತಿದ್ದಾರೆ.