Wednesday, January 27, 2021

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ – ನಟ ದಿಗಂತ ಐಂದ್ರಿತಾ ಗೆ ಸಿಸಿಬಿಯಿಂದ ನೋಟಿಸ್

ಬೆಂಗಳೂರು ಸೆಪ್ಟೆಂಬರ್ 15: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ನಟ ದಿಂಗತ್ ಹಾಗೂ ನಟಿ ಐಂದಿತಾ ರೇಗೆ ನೋಟಿಸ್ ಜಾರಿ ಮಾಡಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಎದುರಿಸಬೇಕೆಂದು ಸೂಚಿಸಿದೆ.

ಎರಡು ದಿನಗಳ ಹಿಂದೆ ನಟಿ ಐಂದ್ರಿತಾ ರೇಯವರು ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದ ವಿಡಿಯೋ, ಫೋಟೋ ವೈರಲ್‌ ಆಗಿತ್ತು. ಈ ವೇಳೆ ಈ ಪ್ರಕರಣದ ಆರೋಪಿ ಶೇಖ್‌ ಫಾಝಿಲ್‌ ಜೊತೆ ಇದ್ದ ಫೋಟೋಗಳು ಸಹ ಸಿಕ್ಕಿತ್ತು.


ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಅವರು ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ಅವರಿಗೆ ನೋಟಿಸ್ ನೀಡಲಾಗಿದೆ. ಅವರು ವಿಚಾರಣಗೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಬೆಂಗಳೂರಿನ ಸ್ಟಾರ್ ಹೋಟೆಲ್ ವೊಂದರಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲೂ ಐಂದ್ರಿತಾ ಮತ್ತು ಫಾಝಿಲ್ ಭೇಟಿಯಾಗಿದ್ದರು. ಈ ವೇಳೆ ಬಾಲಿವುಡ್ ನಟ ಸೋಹೇಲ್ ಖಾನ್ ಕೂಡ ಇದ್ದರು. ಈ ಫೋಟೋಗಳೆ ಇದೀಗ ಐಂದ್ರಿತಾ ರೇಗೆ ಮುಳುವಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ರಾಗಿಣಿ ಹಾಗೂ ಸಂಜನಾ ವಿರುದ್ದ ಡ್ರಗ್ಸ್‌ ಜಾಲಕ್ಕೆ ನಂಟು ಸಂಬಂಧಿಸಿ ತನಿಖೆ ನಡೆಸುತ್ತಿದ್ದು , ನಟಿ ರಾಗಿಣಿಗೆ ನ್ಯಾಯಾಲಯ 14ದಿನಗಳ ನ್ಯಾಯಾಂಗ ಬಂಧನ ವಿದಿಸಿದ್ದು, ಈಗ ಅವರು ಪರಪ್ಪನ ಅಗ್ರಹಾರದಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.