ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ; ಆದಿತ್ಯ ಆಳ್ವ ಬಂಧನ..!
ಬೆಂಗಳೂರು:ಮಾಜಿ ಸಚಿವ ಜೀವರಾಜ್ ಆಳ್ವರ ಮಗ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಬಾಮೈದನಾಗಿರುವ ಆದಿತ್ಯ ಆಳ್ವ ಅವರನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಆದಿತ್ಯ ಆಳ್ವ ನ ಮುಂದುವರಿದ ವಿಚಾರಣೆಬೆಂಗಳೂರು ಸ್ಯಾಂಡಲ್ವುಡ್ ಡ್ರಗ್ ಕೇಸ್ನಲ್ಲಿ ಮತ್ತೋರ್ವ ಪ್ರಭಾವಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಯಾಂಡಲ್ವುಡ್ ಡ್ರಗ್ ದಂಧೆಯ 6ನೇ ಆರೋಪಿಯಾಗಿದ್ದ ಆದಿತ್ಯ ಆಳ್ವ ಕೆಲವು ತಿಂಗಳುಗಳಿಂದ ತಲೆ ಮರೆಸಿಕೊಂಡಿದ್ದರು.
ನಿನ್ನೆ ರಾತ್ರಿ ಆರೋಪಿಯನ್ನ ಚೆನ್ನೈನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದು, ಇಂದು ಬೆಳಗ್ಗೆ ಬೆಂಗಳೂರಿಗೆ ಕರೆತಂದಿದ್ದಾರೆ. ಆದಿತ್ಯ ಆಳ್ವ ಅವರ ರೆಸಾರ್ಟ್ನಲ್ಲಿ ಸಾಕಷ್ಟು ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾರ್ಟಿ ಮಾಡುತ್ತಿದ್ದ ವಿಷಯ ಬೆಳಕಿಗೆ ಬಂದಿತ್ತು.
ಹೀಗಾಗಿ, ಆದಿತ್ಯ ಆಳ್ವ ಅವರ ಬಂಧನದಿಂದ ಇನ್ನಷ್ಟು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಆದಿತ್ಯನನ್ನು ಬಂಧಿಸಿದ ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ ಕೇಸ್ನ ಎ6 ಆರೋಪಿಯಾಗಿದ್ದ ಆದಿತ್ಯಾ ಆಳ್ವ ವಿರುದ್ಧ ಸೆಪ್ಟೆಂಬರ್ 4ರಂದು ದಾಖಲಾಗಿದ್ದ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬಳಿಕ ಆದಿತ್ಯ ಆಳ್ವ ಅವರ ಮನೆ ಮೇಲೆ ಸಿಸಿಬಿ ದಾಳಿ ನಡೆಸಲಾಗಿತ್ತು.
ಹೆಬ್ಬಾಳದ ಹೌಸ್ ಆಫ್ ಲೈಫ್ ಮೇಲೆ ದಾಳಿ ನಡೆಸಲಾಗಿತ್ತು. ಮನೆಯಲ್ಲೆ ಹಲವು ಪಾರ್ಟಿಗಳನ್ನ ಆಯೋಜನೆ ಮಾಡಿದ್ದ ಆದಿತ್ಯ ಆಳ್ವ ಈ ಕೇಸ್ನಲ್ಲಿ ಹಲವರು ಬಂಧನಕ್ಕೊಳಗಾದ ಬಳಿಕ ನಾಪತ್ತೆಯಾಗಿದ್ದರು.
ಆದಿತ್ಯ ಆಳ್ವ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದ ಸಿಸಿಬಿ ಪೊಲೀಸರು ಮುಂಬೈನಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲೂ ಸರ್ಚ್ ವಾರಂಟ್ ಪಡೆದು ಶೋಧ ನಡೆಸಿದ್ದರು.
ಆದರೆ, ತಂಗಿ ಪ್ರಿಯಾಂಕಾ ಆಳ್ವ ಹಾಗೂ ವಿವೇಕ್ ಒಬೆರಾಯ್ ಅವರ ಮನೆಯಲ್ಲೂ ಆದಿತ್ಯ ಪತ್ತೆಯಾಗಿರಲಿಲ್ಲ. ಇದೀಗ ಸುಮಾರು ನಾಲ್ಕು ತಿಂಗಳ ಬಳಿಕ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಆದಿತ್ಯ ಆಳ್ವನನ್ನು ಬಂಧಿಸಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.
ಚೆನ್ನೈನಿಂದ ಇಂದು ಮುಂಜಾನೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಆದಿತ್ಯ ಆಳ್ವನನ್ನು ಕರೆತರಲಾಗಿದೆ. ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದ ತಂಡದಿಂದ ಆದಿತ್ಯ ಆಳ್ವನನ್ನು ಬಂಧಿಸಲಾಗಿದೆ.
ಆದಿತ್ಯ ಆಳ್ವ ಚೆನ್ನೈನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರುಸೋಮವಾರ ಚೆನ್ನೈಗೆ ತೆರಳಿ ಆದಿತ್ಯನನ್ನು ಬಂಧಿಸಿದ್ದಾರೆ. ಮಾಜಿ ಸಚಿವ ಜೀವರಾಜ್ ಆಳ್ವ ಮತ್ತು ನಂದಿನಿ ಆಳ್ವ ಅವರ ಮಗನಾಗಿರುವ ಆದಿತ್ಯ ಆಳ್ವ ಸ್ಯಾಂಡಲ್ವುಡ್ ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.
ಪ್ರಕರಣ ಬೆಳಕಿಗೆ ಬಂದ ನಂತರ ಆದಿತ್ಯ ಆಳ್ವ ಮಾತ್ರವಲ್ಲದೆ ಅವರ ಕುಟುಂಬಸ್ಥರೂ ನಾಪತ್ತೆಯಾಗಿದ್ದಾರೆ. ಜನತಾ ಪರಿವಾರದ ಹಿರಿಯ ರಾಜಕಾರಣಿ ಜೀವರಾಜ್ ಆಳ್ವ ಕರ್ನಾಟಕದ ಸಚಿವರಾಗಿದ್ದವರು.
ಅವರ ಹೆಂಡತಿ ಖ್ಯಾತ ನೃತ್ಯಗಾರ್ತಿ ನಂದಿನಿ ಆಳ್ವ ಅವರ ಮಗಳು ಪ್ರಿಯಾಂಕಾ ಆಳ್ವ ಅವರನ್ನು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮದುವೆಯಾಗಿದ್ದಾರೆ. ಅವರ ಮಗ ಆದಿತ್ಯ ಆಳ್ವ ಇದೀಗ ಡ್ರಗ್ಸ್ ದಂಧೆಯಲ್ಲಿ ಆರೋಪಿಯಾಗಿದ್ದಾರೆ.