ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಮ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ. 3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಮನೆಯಲ್ಲಿದ್ದ ವೇಳೆ ಶಿವರಾಂ ಅವರ ಸ್ಥಿತಿ ಮತ್ತೆ ಗಂಭೀರವಾಗಿದೆ. ಇದೀಗ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.