Tuesday, October 19, 2021

ಸ್ಯಾಂಡಲ್‌ವುಡ್‌ ನಟ ಸತ್ಯಜಿತ್‌ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ ಹಿರಿಯ ನಟ ಸತ್ಯಜಿತ್‌ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರನ್ನು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಗ್ಯಾಂಗ್ರಿನ್‌ಗೆ ತುತ್ತಾಗಿದ್ದ ಅವರ ಒಂದು ಕಾಲನ್ನು ಕತ್ತರಿಸಲಾಗಿತ್ತು. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸತ್ಯಜಿತ್​ ಪುತ್ರ ಹೇಳಿರುವ ಪ್ರಕಾರ ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಹಲವು ದಿನಗಳಿಂದ ಸತ್ಯಜಿತ್​ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ.​ ಒಂದು ಕಾಲದಲ್ಲಿ ಅವರು ಬಹು ಬೇಡಿಕೆಯ ಫೋಷಕ ನಟನಾಗಿದ್ದರು. ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

1986ರಿಂದಲೂ ಸತ್ಯಜಿತ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅಪ್ಪು, ಅರಸು, ಅಭಿ, ಆಪ್ತಮಿತ್ರ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಜನಪ್ರಿಯತೆ ಪಡೆದಿದ್ದಾರೆ.

ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿದ್ದಾರೆ. ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆಯುತ್ತಿದ್ದ ಸತ್ಯಜಿತ್​ ಅವರಿಗೆ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಬೇಡಿಕೆ ಕಡಿಮೆ ಆಯಿತು. 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆ ‘ಸೆಕೆಂಡ್​ ಹಾಫ್​’ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ಸತ್ಯಜಿತ್​ ಕಾಣಿಸಿಕೊಂಡಿಲ್ಲ

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...