ಬೆಂಗಳೂರು: ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (47) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಬೆಳಗ್ಗೆ ಜಿಮ್‌ಗೆ ಹೋಗಿದ್ದರು ಈ ವೇಳೆ ಲಘು ಹೃದಯಾಘಾತವಾಗಿತ್ತು.
ಈ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಮಧ್ಯೆ ಆಸ್ಪತ್ರೆಗೆ ಸೆಲೆಬ್ರಿಟಿಗಳ ದಂಡೇ ನೆರೆದಿದೆ. ತನ್ನ ನಟನೆ, ವ್ಯಕ್ತಿತ್ವಗಳ ಮೂಲಕ ಜನರನ್ನು ಮೆಚ್ಚಿಸಿದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು ಅಭಿಮಾನಿಗಳಿಂದ ಆರಗಿಸಿಕೊಳ್ಳಲು ಆಗುತ್ತಿಲ್ಲ.
ಇದರ ಜತೆಗೆ ಅಣ್ಣ ಶಿವರಾಜ್‌ಕುಮಾರ್ ಅವರ ಭಜರಂಗಿ-2 ಸಿನಿಮಾ ರಿಲೀಜ್ ಆಗಿದೆ. ಪುನೀತ್ ನಿಧನ ಹಿನ್ನೆಲೆ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳಿಗೆ ನಿಜಕ್ಕೂ ಆಘಾತ ಮೂಡಿಸಿದೆ.