Saturday, June 3, 2023

ಬುದ್ಧದೇವ ಭಟ್ಟಾಚಾರ್ಯ ಬೆನ್ನಲ್ಲೇ ಸಂಧ್ಯಾ ಮುಖರ್ಜಿಯಿಂದ ಗೌರವ ತಿರಸ್ಕಾರ

ಕೋಲ್ಕತ: ಕೇಂದ್ರ ಸರ್ಕಾರದ ಅತ್ಯುನ್ನತ ಗೌರವ ಪುರಸ್ಕಾರಗಳಲ್ಲಿ ಒಂದಾದ ಪದ್ಮಭೂಷಣ ಪ್ರಶಸ್ತಿಯನ್ನು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರು ತಿರಸ್ಕರಿಸಿದ ಬೆನ್ನಲ್ಲೇ ಬಂಗಾಳದ ದಿಗ್ಗಜ ಗಾಯಕಿ ಸಂಧ್ಯಾ ಮುಖರ್ಜಿ ಅನುಸಿರಿಸಿದ್ದಾರೆ.


ಸಂಧ್ಯಾ ಮುಖರ್ಜಿ ಅವರ ಮಗಳು ಸೌಮಿ ಸೆಂಗುಪ್ತಾ ಅವರು ಪ್ರಶಸ್ತಿ ತಿರಸ್ಕಾರಕ್ಕೆ ಕಾರಣ ತಿಳಿಸಿದ್ದಾರೆ. ಅವರಂತಹ ಲೆಜೆಂಡರಿ ಕಲಾವಿದೆಗೆ 90ನೇ ವಯಸ್ಸಿನಲ್ಲಿ ಪ್ರಶಸ್ತಿಯನ್ನು ನೀಡುವುದು ನಿಜಕ್ಕೂ ಅವಮಾನವಾಗಿದೆ.

ಹೀಗಾಗಿ ಅವರು ಪ್ರಶಸ್ತಿಯನ್ನು ನಿಕಾರಿಸಿದ್ದಾರೆ ಎಂದು ಹೇಳಿದ್ದಾರೆ.
ಅಂದಹಾಗೆ ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮುಖರ್ಜಿ ಅವರ ನಿರ್ಧಾರವು ರಾಜಕೀಯ ಪ್ರೇರಿತವಲ್ಲ. ನಮ್ಮ ತಾಯಿ ರಾಜಕೀಯವನ್ನು ಮೀರಿದವರು.

ಇದರಲ್ಲಿ ರಾಜಕೀಯ ಕಾರಣ ಹುಡುಕುವ ಪ್ರಯತ್ನ ಮಾಡಬೇಡಿ. ಅವರು ಅವಮಾನಿತರಾಗಿದ್ದಾರಷ್ಟೇ ಎಂದು ಸೌಮಿ ಸೆಂಗುಪ್ತಾ ಸ್ಪಷ್ಟನೆ ನೀಡಿದ್ದಾರೆ.

ಸಂಧ್ಯಾ ಮುಖರ್ಜಿ ಅವರನ್ನು 60 ಮತ್ತು 70ರ ದಶಕದ ಸುಮಧುರವಾದ ಧ್ವನಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

ಅವರು ಬಂಗಾಳಿ ಮತ್ತು ಸುಮಾರು ಹನ್ನೆರಡು ಇತರ ಭಾಷೆಗಳಲ್ಲಿ ಸಾವಿರಾರು ಹಾಡುಗಳಲ್ಲಿ ಹಿನ್ನೆಲೆ ಧ್ವನಿ ನೀಡಿದ್ದಾರೆ.

2011ರಲ್ಲೇ, ಸಂಧ್ಯಾ ಮುಖರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರವು ನೀಡುವ ಅತ್ಯುನ್ನತ ನಾಗರಿಕ ಗೌರವವಾದ ಬಂಗಾ ಬಿಭೂಷಣವನ್ನು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.


ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (77) ಅವರು ಕೂಡ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ನನ್ನನ್ನು ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆಂದು ಅನೇಕರು ಹೇಳುತ್ತಿದ್ದಾರೆ.

ಈ ಬಗ್ಗೆ ನನಗೇನೂ ಗೊತ್ತಿಲ್ಲ. ಇದು ನಿಜವೇ ಆಗಿದ್ದರೆ ನಾನು ಪ್ರಶಸ್ತಿಯನ್ನು ತಿರಸ್ಕರಿಸುತ್ತೇನೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಟೀಕಾಕಾರರಲ್ಲಿ ಭಟ್ಟಾಚಾರ್ಯ ಕೂಡ ಪ್ರಮುಖರು. ಕೆಲ ತಿಂಗಳುಗಳಿಂದ ಭಟ್ಟಾಚಾರ್ಯ ಅವರು ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳ ಜೊತೆಗೆ ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ.

LEAVE A REPLY

Please enter your comment!
Please enter your name here

Hot Topics