Wednesday, December 1, 2021

ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಠಿಸುವ ಸಂಚು: CFI ಆರೋಪ

ಪುತ್ತೂರು: ವಿದ್ಯಾರ್ಥಿಗಳನ್ನು ಬಳಸಿಕೊಂಡು ಪುತ್ತೂರಿನಲ್ಲಿ ಕೋಮುಗಲಭೆ ಸೃಷ್ಠಿಸುವ ಸಂಚು ರೂಪಿಸಲಾಗುತ್ತಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.


ಪುತ್ತೂರಿನ ಸರಕಾರಿ ಪಿಯು ಕಾಲೇಜು ಕೊಂಬೆಟ್ಟುವಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದ್ದು, ಹಲ್ಲೆಯಲ್ಲಿ ಮೂರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ದಾಳಿ, ಹಲ್ಲೆ, ಬೆದರಿಕೆಗಳು ನಡೆಯಲು ಹಿಂದೂಪರ ಸಂಘಟನೆಗಳ ಸ್ಥಳೀಯ ಮುಖಂಡರುಗಳು ನೇರ ಹೊಣೆ ಎಂದು ಆರೋಪಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ

ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ ಈ ಘಟನೆಗಳು ಪುನರಾವರ್ತಿಸಿದರೆ ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಸೇರಿ ಪುತ್ತೂರು ಚಲೋ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಜೊತೆಗೆ ಈ ಘಟನೆಯಲ್ಲಿ ಪೋಲೀಸ್ ಇಲಾಖೆಯೂ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...