Friday, February 26, 2021

ಡ್ರಗ್ ಮಾಫಿಯಾ ಪರಪ್ಪನ ಅಗ್ರಹಾರಕ್ಕೆ ಮತ್ತೊಂದು ನಟಿ ಎಂಟ್ರಿ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾಕ್ಕೆ ಮತ್ತೊಂದು ನಟಿ ಜೈಲು ಸೇರಿದ್ದಾರೆ. ರಾಗಿಣಿ ಪರಪ್ಪನ ಅಗ್ರಹಾರ ಸೇರಿದ ಬೆನ್ನಲ್ಲೇ, ಇಂದು ಪ್ರಕರಣದ 14ನೇ ಆರೋಪಿಯಾಗಿರುವ ನಟಿ ಸಂಜನಾ ಕೂಡ ಜೈಲು ಪಾಲಾಗಿದ್ದಾರೆ.

ಸಂಜನಾ ಸಿಸಿಬಿ ಕಸ್ಟಡಿ ಇಂದು ಅಂತ್ಯವಾದ ಹಿನ್ನಲೆ ಪೊಲೀಸರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಸಂಜನಾರನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಸಂಜನಾ ಜೊತೆ ಆರೋಪಿಗಳಾದ ವೀರೇನ್ ಖನ್ನಾ, ರವಿಶಂಕರ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತು.


ಇದೀಗ ಡ್ರಗ್ಸ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ ನಟಿ ರಾಗಿಣಿ ಬೆನ್ನಲ್ಲೇ ಈಗ ನಟಿ ಸಂಜನಾ ಜೈಲುಪಾಲಾಗಿದ್ದಾರೆ. ಈ ಮೂಲಕ ಡ್ರಗ್ಸ್‌ ಪ್ರಕರಣದಲ್ಲಿ ಜೈಲು ಸೇರಿದ ಎರಡನೇ ನಟಿ ಎಂಬ ಕುಖ್ಯಾತಿಗೆ ಸಂಜನಾ ಪಾತ್ರವಾಗಿದ್ದಾರೆ. ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಸಂಜನಾರನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಸಂಜನಾ ಜೊತೆ ಆರೋಪಿಗಳಾದ ವೀರೇನ್ ಖನ್ನಾ, ರವಿಶಂಕರ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತು.


ಸಾಂತ್ವನ ಕೇಂದ್ರದಲ್ಲಿದ್ದ ಸಂಜನಾರನ್ನು ಬೆಳಗ್ಗೆ ಕೆಸಿ ಜನರಲ್ ಆಸ್ಪತ್ರಗೆ ಕರೆತಂದು ವೈದ್ಯಕೀಯ ಪರೀಕ್ಷೆ, ಕೊರೊನಾ ಟೆಸ್ಟ್‌ ನಡೆಸಲಾಯಿತು. ಬಳಿಕ ಸಾಂತ್ವನ ಕೇಂದ್ರಕ್ಕೆ ಕರೆತಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಇಂದಿನ ವಿಚಾರಣೆ ವೇಳೆ ಸಿಸಿಬಿ ಪೊಲೀಸರು ಕಸ್ಟಡಿಗೆ ನೀಡುವಂತೆ ಕೇಳಿರಲಿಲ್ಲ. ಹೀಗಾಗಿ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...