DAKSHINA KANNADA
ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ
ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.
ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.
ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.
ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
DAKSHINA KANNADA
ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ
ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.
ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ
ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.
ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.
DAKSHINA KANNADA
ಮಾಜಿ ಸಚಿವ ಜನಾರ್ದನ ಪೂಜಾರಿಯಿಂದ ಕುದ್ರೋಳಿ ದಸರಾ ಉದ್ಘಾಟನೆ
ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಕಳೆದ 34 ವರ್ಷಗಳಿಂದ ವಿಜೃಂಭಣೆಯ ದಸರಾ ಮಹೋತ್ಸವ ನಡೆಸಲಾಗುತ್ತಿದೆ. ಈ ಬಾರಿಯೂ ವಿಜೃಂಭಣೆಯಿಂದ ನಡೆಯಲಿರುವ ದಸರಾ ಉತ್ಸವಕ್ಕೆ ಇಂದು(ಅ.3) ಮುಂಜಾನೆ ಹನ್ನೊಂದು ಘಂಟೆಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಚಾಲನೆ ನೀಡಿದ್ದಾರೆ.
ಮುಂಜಾನೆ 8.30ಕ್ಕೆ ಗುರು ಪೂಜೆಯೊಂದಿಗೆ ಕುದ್ರೋಳಿ ಕ್ಷೇತ್ರದ ನವರಾತ್ರಿ ಉತ್ಸವದ ಧಾರ್ಮಿಕ ವಿಧಿವಿಧಾನ ಆರಂಭಗೊಂಡಿತ್ತು. ನಾರಾಯಣ ಗುರುಗಳಿಗೆ, ಕ್ಷೇತ್ರದ ದೇವರು ಹಾಗೂ ಪರಿವಾರ ದೈವಗಳಿಗೆ ವಿಶೇಷ ಪೂಜೆಯ ಬಳಿಕ ನವರಾತ್ರಿ ಉತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಶಾರದೆಯನ್ನು ಹೊತ್ತು ತಂದ ಭಕ್ತರು ಇಲ್ಲಿನ ದರ್ಬಾರ್ ಹಾಲ್‌ನಲ್ಲಿ ಶಾರದೆಯನ್ನು ಪ್ರತಿಷ್ಠಾಪಿಸುವ ಮೂಲಕ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ.
ಇದನ್ನೂ ಓದಿ : ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅದ್ದೂರಿ ಚಾಲನೆ
ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಪುನರ್ ನಿರ್ಮಾಣದ ರೂವಾರಿ ಹಾಗೂ ದಸರಾ ಉತ್ಸವದ ಕಾರಣೀಕರ್ತರು ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ. ಈ ಬಾರಿ ಅವರೇ ದಸರಾ ಉತ್ಸವವನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಿದ್ದಾರೆ. ಈ ಬಾರಿಯ ದಸರಾ ಮಹೋತ್ಸವದ ಪ್ರತಿಯೊಂದ ವಿಚಾರವನ್ನು ಗಮನಿಸಿರುವ ಜನಾರ್ಧನ ಪೂಜಾರಿಯವರು ಕಳೆದೆರಡು ದಿನಗಳಿಂದ ಕ್ಷೇತ್ರಕ್ಕೆ ನಿರಂತರ ಭೇಟಿ ನೀಡಿ ದಸರಾ ಸಿದ್ಧತೆಗಳನ್ನು ವೀಕ್ಷಣೆ ಮಾಡಿದ್ದರು. ಇಂದು ದಸರಾ ಉದ್ಘಾಟನೆಗೆ ದರ್ಬಾರ್ ಹಾಲ್‌ನಲ್ಲಿ ನಡೆದುಕೊಂಡೇ ಬಂದ ಪೂಜಾರಿಯವರು ಗಮನ ಸೆಳೆದಿದ್ದರು. ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಗಣ್ಯ ಅತಿಥಿಗಳು ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಭಾಗವಹಿಸಿ, ಶಾರದೆ ಹಾಗೂ ನವದುರ್ಗೆಯರ ಆಶೀರ್ವಾದ ಪಡೆದುಕೊಂಡಿದ್ದಾರೆ.
- DAKSHINA KANNADA7 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!