Connect with us

BELTHANGADY

ಬೆಳ್ತಂಗಡಿ: 35ನೇ ವರ್ಷದ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Published

on

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 35 ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ.


ಕಳೆದ 34 ವರ್ಷಗಳಿಂದ ಬಳಂಜ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವದ ನೂತನ ಸಮಿತಿ ರಚಿಸಲಾಯಿತು.

ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಬಳಂಜ ಗ್ರಾ.ಪಂ ಸದಸ್ಯ ಯಶೋಧರ ಶೆಟ್ಟಿ ಅಟ್ಲಾಜೆ, ಉಪಾಧ್ಯಕ್ಷರಾಗಿ ರಾಘವೇಂದ್ರ ಭಟ್ ಬಳಂಜ,ಕರುಣಾಕರ ಹೆಗ್ಡೆ ನಾಲ್ಕೂರು,ಸದಾನಂದ ಪೂಜಾರಿ ಬೊಂಟ್ರೋಟ್ಟು, ಯತೀಶ್ ವೈ ಬಳಂಜ, ಕೋಶಾಧಿಕಾರಿಯಾಗಿ ಸಂತೋಷ್ ಭಂಡಾರಿ, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಡಿ.ಕೋಟ್ಯಾನ್ ನಾಲ್ಕೂರು,

ಕ್ರೀಡಾ ಕಾರ್ಯದರ್ಶಿಯಾಗಿ ಯೋಗೀಶ್ ಯೈಕುರಿ ನಾಲ್ಕೂರು,ಯೋಗೀಶ್ ಕೊಂಗುಲ ಬಳಂಜ,ರಂಜಿತ್ ಮಜಲಡ್ಡ ನಾಲ್ಕೂರು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಚಂದ್ರಹಾಸ್ ಬಳಂಜ, ಪ್ರದೀಪ್ ದೇವಾಡಿಗ ಬಳಂಜ,ಶರತ್ ಅಂಚನ್ ಬಾಕ್ಯರಡ್ಡ,ಜಗದೀಶ್ ಬಳಂಜ, ರಮೇಶ್ ದೇವಾಡಿಗ ಅಟ್ಲಾಜೆ ಆಯ್ಕೆಯಾದರು.

ಸದಸ್ಯರಾಗಿ ಕಿಶಾನ್ ಬಳಂಜ, ಕಾರ್ತಿಕ್ ಬಳಂಜ,ನಾಗೇಶ್ ದೇವಾಡಿಗ,ಅಖಿಲ್ ಬಿ,ಸಂಪತ್ ಪಿ ಕೋಟ್ಯಾನ್,ರಾಜು ದೇವಾಡಿಗ,ಮೋಹನ್ ಆಚಾರ್ಯ,ಅನಿಲ್ ಬಿ,ಸುರೇಶ್ ಹೇವ,ಗಣೇಶ್ ದೇವಾಡಿಗ ಸಂಭ್ರಮ,ಈಶ್ವರ ದೇವಾಡಿಗ,ಗೋಪಾಲ ಶೆಟ್ಟಿ ಆಯ್ಕೆಯಾದರು.

ಗೌರವ ಸಲಹೆಗಾರರಾಗಿಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಹೆಚ್ ಧರ್ಣಪ್ಪ ಪೂಜಾರಿ ಸಂಧ್ಯಾದೀಪಾ ನಾಲ್ಕೂರು,ಸತೀಶ್ ರೈ ಬಾರ್ದಡ್ಕ,ಪ್ರಮೋದ್ ಕುಮಾರ್ ಜೈನ್ ಬಳಂಜ,ಜಯ ಸಾಲಿಯಾನ್ ಬದಿನಡೆ ಕೊಂಗುಳ,ವಿನು ಬಳಂಜ, ಶೀತಲ್ ಪಡಿವಾಳ್ ಬಳಂಜಗುತ್ತು,ತಿಮ್ಮಪ್ಪ ಪೂಜಾರಿ ನಿಟ್ಟಡ್ಕ ನಾಲ್ಕೂರು,

ಚಂದ್ರಶೇಖರ ಪಿ.ಕೆ ಬಳಂಜ,ಗಣೇಶ್ ಪೂಜಾರಿ ಬೊಂಟ್ರೋಟ್ಟು, ಕೊರಗಪ್ಪ ಶೆಟ್ಟಿ ಪಂಬಾಜೆ,ಸಂತೋಷ್ ಕುಮಾರ್ ಕಾಪಿನಡ್ಕ,ವಿಜಯ ಹೆಗ್ಡೆ ನೆಕ್ಕಿಲ,ರಮೇಶ್ ಆಚಾರ್ಯ ಕಡೆಂಕಿಲ, ರಾಜೇಂದ್ರ ಶೆಟ್ಟಿ ಕುರೆಲ್ಯ,ಸದಾನಂದ ಸಾಲಿಯಾನ್ ಬಳಂಜ,

ಸುರೇಶ್ ಶೆಟ್ಟಿ ಕುರೆಲ್ಯ,ಗಣೇಶ್ ಬಿ.ಕೆ ಬರೆಮೇಲು ಬಳಂಜ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು,ಹರೀಶ್ ವೈ ಚಂದ್ರಮ‌ ಬಳಂಜ,ದಿನೇಶ್ ಪೂಜಾರಿ ಅಂತರ ಬಳಂಜ,ಸಂತೋಷ್ ಕುಮಾರ್ ಜೈನ್ ಸಿದ್ದರಹಿತ್ಲು,ಪುರಂದರ ಪೂಜಾರಿ ಪೆರಾಜೆ, ಸತೀಶ್ ಬಿ ದೇವಾಡಿಗ ಬಳಂಜ ಆಯ್ಕೆಯಾಗಿದ್ದಾರೆ.

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending