Connect with us

LATEST NEWS

ದಿನ 60 ಸಂತೋಷ್‌ ಪಾಟೀಲ್‌ ಸೂಸೈಡ್‌ ಕೇಸ್‌ ಇಲ್ಲ ಅಪ್ಡೇಟ್ಸ್‌: ಹಳ್ಳ ಹಿಡಿಸ್ತಾರ ಉಡುಪಿ ಪೊಲೀಸ್ರು..!

Published

on

ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದು 2 ತಿಂಗಳು ಕಳೆದು ಹೋದರೂ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣದೇ ಇರುವುದು ತನಿಖೆಯನ್ನು ಹಳ್ಳ ಹಿಡಿಸುವ ಲಕ್ಷಣಗಳು ಕಾಣುತ್ತಿವೆ.


ಘಟನೆ ನಡೆದ ದಿನವೇ ಪೊಲೀಸರು, ಎಫ್‌ಎಸ್‌ಎಲ್‌ ತಂಡ ಬಂದು ಆತ್ಮಹತ್ಯೆಗೈದವನ ಮೊಬೈಲ್‌, ದಾಖಲೆ ಪತ್ರ ಸೇರಿದಂತೆ ಎಲ್ಲವನ್ನೂ ವಶಕ್ಕೆ ಪಡೆದು ಎರಡು ತಿಂಗಳಾದರೂ ಎಫ್‌ಎಸ್‌ಎಲ್ ವರದಿ ಬಾರದೇ ಇರುವುದು ಹಲವು ಅನುಮಾನ ಮೂಡಿಸಿದೆ.

ಜೊತೆಗೆ ಈ ತನಕ ಮೃತ ಗುತ್ತಿಗೆದಾರನ ಮೊಬೈಲ್‌ ಫೋನ್‌ನಲ್ಲಿ ಯಾವ ಸಂಗತಿ ಅಡಗಿದೆ ಎಂಬುವುದು ನಿಗೂಢವಾಗಿದೆ.
ಈ ಮಧ್ಯೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಲಾದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಿದ್ದಾರೆ ಹೊರತು ಪಡಿಸಿ ಯಾವುದೇ ಪ್ರಗತಿ ಕಂಡಿಲ್ಲ. ಜೊತೆಗೆ ಅಂದು ಹೋರಾಟ, ಹಾರಾಟ, ಚೀರಾಟ ಮಾಡಿದ ಪ್ರತಿಪಕ್ಷಗಳು ಇದನ್ನು ಅರ್ಧದಲ್ಲಿಯೇ ಬಿಟ್ಟು ಬೇರೆ ಹೋರಾಟದಲ್ಲಿ ಮುಳುಗಿದ್ದಾರೆ.
ಸದ್ಯ ಈ ಬಗ್ಗೆ ಮೃತ ಗುತ್ತಿಗೆದಾರನ ಪತ್ನಿ ರೇಣುಕಾ ಪಾಟೀಲ್ ಅವರು ರಾಜ್ಯ ಪಾಲರಿಗೆ ಮೊರೆಹೋಗಿದ್ದಾರೆ. ಇಡೀ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯುತ್ತಿಲ್ಲ. ಅಲ್ಲದೇ ಸಂತೋಷ್ ಪಾಟೀಲ್‌ ಅವರಿಗೆ ಸೇರಿದ ಮೊಬೈಲ್‌ನಲ್ಲಿ ಅಡಗಿರುವ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂದು ದೂರಿದ್ದಾರೆ.
ಕಳೆದ ಏಪ್ರಿಲ್ 12ರಂದು ಉಡುಪಿಯ ಬಸ್‌ ನಿಲ್ದಾಣದ ಎದುರಿನ ಲಾಡ್ಜ್‌ನಲ್ಲಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌, ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಸಂದೇಶ ಕಳುಹಿಸಿ ತಮ್ಮ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ದೂರಿದ್ದರು. ಹಿಂಡಲಗಾ ಗ್ರಾಮದಲ್ಲಿ 4 ಕೋಟಿ ರೂ. ವೆಚ್ಚದಲ್ಲಿ 108 ಕಾಮಗಾರಿ ಕೈಗೊಂಡ “ಬಿಲ್ ಪಾವತಿಗೆ ಕಮಿಷನ್‌ಗಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿತ್ತು.

ಈ ಸಂಬಂಧ ಉಡುಪಿ ಠಾಣೆಯಲ್ಲಿ ಆತ್ಮಹತ್ಯೆ ಕುರಿತಾಗಿ ಒ೦ದು ಎಫ್‌ಐಆರ್ ದಾಖಲಾಗಿತ್ತು. ಆದಾದ ಬಳಿಕ ಸಚಿವ ಈಶ್ವರಪ್ಪ ವಿರುದ್ಧ ಆತ್ಮಹತ್ಯೆಗಾಗಿ ಪ್ರಚೋದನೆ ಮಾಡಿದ ಆರೋಪದ ಹಿನ್ನೆಲೆ ಮತ್ತೊಂದು ಎಫ್‌ಐಆರ್ ದಾಖಲಾಗಿತ್ತು.
ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಮೃತ ದೇಹದ ಪೋಸ್ಟ್ ಮಾರ್ಟಂ ನಡೆಸಿದ್ದ ಮಣಿಪಾಲ್ ಆಸ್ಪತ್ರೆಯಿಂದ ಮಂಗಳೂರಿನ ಎಫ್‌ಎಸ್‌ಎಲ್ ಪ್ರಯೋಗಾಲಯಕ್ಕೆ ಆಹಾರ ಸೇವನೆ ಮಾಡಿದ್ದ ಮಾದರಿಗಳನ್ನು ರವಾನಿಸಲಾಗಿತ್ತು.

ಇದರಲ್ಲಿ ವಿಷ ಸೇವನೆ ಕುರಿತಾದ ವಿವರಗಳುಳ್ಳ ವಿಸ್ತೃತ ವರದಿ ಬಂದಿದೆ. ಆದರೆ ಲಾಡ್ಜ್‌ನಲ್ಲಿ ಪತ್ತೆಯಾಗಿದ್ದ ಸಂತೋಷ್‌ಗೆ ಸೇರಿದ ಮೊಬೈಲ್ ಫೋನ್ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.

ಆದರೆ ಮೊಬೈಲ್‌ಗೆ ಕುರಿತಾದ ಎಫ್‌ಎಸ್‌ಎಲ್ ವರದಿಯನ್ನು ಬೆಂಗಳೂರು ಪ್ರಯೋಗಾಲಯ ಈ ತನಕ ನೀಡಿಲ್ಲ.
ಪಾಟೀಲ್ ತನ ಮೊಬೈಲ್‌ನಲ್ಲಿ ತನ್ನ ವೈಯಕ್ತಿಕ ಎಲ್ಲ ವ್ಯವಹಾರಗಳು, ಆಸ್ತಿ-ಪಾಸ್ತಿ, ಬ್ಯಾಂಕ್‌ ವಿವರ, ಗುತ್ತಿಗೆದಾರ ವ್ಯವಹಾರಕ್ಕೆ ಸಂಬಂಧಿಸಿದ೦ತೆ ದಾಖಲಾತಿಗಳು, ಉಪಗುತ್ತಿಗೆ ನೀಡಿದ ವಿವರಗಳು, ಸರ್ಕಾರಕ್ಕೆ ಸಲ್ಲಿಸಿದ ಹಾಗೂ ಸರ್ಕಾರದಿಂದ ಪಡೆದ ದಾಖಲಾತಿಗಳು ಮೊಬೈಲ್‌ನಲ್ಲಿ ಸಂಗ್ರಹಿಸಿಕೊಂಡಿದ್ದರು.
ಅಲ್ಲದೇ ಮೊಬೈಲ್‌ನಲ್ಲಿ ಮಾತನಾಡಿದ ಪ್ರಮುಖ ಕರೆಗಳನ್ನು ರೆಕಾರ್ಡಿಂಗ್ ಮಾಡಿಟ್ಟುಕೊಂಡಿದ್ದು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಪ್ರಧಾನಮಂತ್ರಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು, ಗೃಹ ಸಚಿವರ ವಿರುದ್ಧ ದೂರು ನೀಡಿದ ಎಲ್ಲಾ ವಿವರಗಳು ದಾಖಲಾತಿಗಳು ಮೊಬೈಲ್‌ನಲ್ಲಿವೆ ಕುಟು೦ಬದ ಸದಸ್ಯರು ಹೇಳುತ್ತಿದ್ದಾರೆ.

ಮೊಬೈಲ್ ಫೋನ್ ಎಫ್‌ಎಸ್ಎಲ್ ಪರೀಕ್ಷೆಗೆ ಕಳಿಸಿದ್ದರೆ ಗರಿಷ್ಠ ಒಂದು ತಿಂಗಳ ಒಳಗಾಗಿ ಎಲ್ಲ ವಿವರಗಳನ್ನು ರಿಟ್ರೈವ್ ಮಾಡಲಾಗುತ್ತದೆ. ಆದರೆ ಸಂತೋಷ್ ಪ್ರಕರಣದಲ್ಲಿ ಈ ತನಕ ವರದಿ ಬಂದಿಲ್ಲ. ಜೊತೆಗೆ ಸಂತೋಷ ಪಾಟೀಲ್‌ಗೆ ಸೇರಿದ ಮೊಬೈಲ್ ಫೋನ್‌ನ ವಿವರಗಳನ್ನು ಕುಟುಂಬದ ಸದಸ್ಯರಿಗೆ ಪೊಲೀಸರು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಪೊಲೀಸರ ತನಿಖೆ ಬಗ್ಗೆ ಅಸಮಾಧಾನಗೊಂಡಿರುವ ಸಂತೋಷ್‌ ಪಾಟೀಲ್‌ ಪತ್ನಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ಗೆ ಪತ್ರ ಬರೆದಿದ್ದು, ಘಟನೆ ನಡೆದು ಎರಡು ತಿಂಗಳಾದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ.

ಆದ್ದರಿಂದ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ನಿರ್ದೇಶನ ನೀಡುವಂತೆ ಮೃತ ಸಂತೋಷ್‌ ಪಾಟೀಲ್‌ ಪತ್ನಿ ರೇಣುಕಾ ಪಾಟೀಲ್‌ ಪತ್ರದಲ್ಲಿ ತಿಳಿಸಿದ್ದಾರೆ.

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

Published

on

ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

havamana

ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.

ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:

ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್‌ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

Trending