LATEST NEWS
ಸೌದಿ ಅರೇಬಿಯಾದಲ್ಲಿ ಭಯೋತ್ಪಾದನಾ ಕೃತ್ಯ : 5 ಜನರಿಗೆ ಮರಣದಂಡನೆ..!
ದೇಶವನ್ನು ಅಸ್ತಿರಗೊಳಿಸುವ ಉಗ್ರವಾದಕ್ಕೆ ಸೌದಿ ಅರೇಬಿಯಾ ಕಠಿಣ ನಿಲುವು ತಳೆದಿದ್ದು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಸೌದಿ ಅರೇಬಿಯಾ ಸರ್ಕಾರ ಐದು ಜನರನ್ನು ಗಲ್ಲಿಗೇರಿಸಿದೆ.
ರಿಯಾದ್ : ದೇಶವನ್ನು ಅಸ್ತಿರಗೊಳಿಸುವ ಉಗ್ರವಾದಕ್ಕೆ ಸೌದಿ ಅರೇಬಿಯಾ ಕಠಿಣ ನಿಲುವು ತಳೆದಿದ್ದು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಸೌದಿ ಅರೇಬಿಯಾ ಸರ್ಕಾರ ಐದು ಜನರನ್ನು ಗಲ್ಲಿಗೇರಿಸಿದೆ.
ಪೂರ್ವ ಪ್ರಾಂತ್ಯದ ಅಲ್ ಹಸ್ಸಾದಲ್ಲಿ ಈಜಿಪ್ಟ್ ಪ್ರಜೆ ಮತ್ತು ನಾಲ್ವರು ಸ್ಥಳೀಯರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.
2016 ರಲ್ಲಿ, ಅಲ್-ಅಹ್ಸಾ ಗವರ್ನರೇಟ್ನ ಅಲ್-ಮಹಾಸಿನ್ನಲ್ಲಿರುವ ಅಲ್ ರಿದಾ ಮಸೀದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಕ್ಕಾಗಿ ಅವರಿಗೆ ಮರಣದಂಡನೆ ವಿಧಿಸಲಾಯಿತು.
ಈಜಿಪ್ಟ್ ಪ್ರಜೆ ಹಿಶಾಮ್ ಮೊಹಮ್ಮದ್ ಅಬ್ದು, ಸ್ಥಳೀಯರಾದ ಅಹ್ಮದ್ ಬಿನ್ ಮೊಹಮ್ಮದ್ ಬಿನ್ ಅಹ್ಮದ್ ಅಸಿರಿ, ನಾಸಿರ್ ಬಿನ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಮೂಸಾ, ಹಮದ್ ಬಿನ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಮೂಸಾ ಮತ್ತು ಅಬ್ದುಲ್ಲಾ ಬಿನ್ ಅಬ್ದುರ್ರಹ್ಮಾನ್ ಬಿನ್ ಅಬ್ದುಲ್ ಅಜೀಜ್ ಅವರನ್ನು ಗಲ್ಲಿಗೇರಿಸಲಾಯಿತು.
ಶಿಯಾ ಮಸೀದಿಯನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು.
ಈಜಿಪ್ಟ್ ಪ್ರಜೆಯೊಬ್ಬರು ಬೆಲ್ಟ್ ಬಾಂಬ್ ಸ್ಫೋಟಿಸುವ ಮೂಲಕ ಆತ್ಮಾಹುತಿ ದಾಳಿ ನಡೆಸಲು ಪ್ರಯತ್ನಿಸಿದ್ದರು.
ಅಹ್ಮದ್ ಬಿನ್ ಮೊಹಮ್ಮದ್, ನಾಸಿರ್ ಬಿನ್ ಅಬ್ದುಲ್ಲಾ ಮತ್ತು ಹಮದ್ ಬಿನ್ ಅಬ್ದುಲ್ಲಾ ಭಯೋತ್ಪಾದಕ ಗುಂಪುಗಳನ್ನು ಸೇರಿದ್ದರು ಮತ್ತು ದಾಳಿಯ ಯೋಜನೆಯಲ್ಲಿ ಭಾಗಿಯಾಗಿದ್ದರು.
ದಾಳಿ ಯೋಜನೆಯ ಬಗ್ಗೆ ಮುಂಚಿತವಾಗಿ ತಿಳಿದಿದ್ದರೂ ಅಬ್ದುಲ್ಲಾ ಬಿನ್ ಅಬ್ದುರ್ರಹ್ಮಾನ್ ಸಂಬಂಧಿತ ಇಲಾಖೆಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿತ್ತು. ಆತ ಭಯೋತ್ಪಾದಕ ಗುಂಪುಗಳಿಗೂ ಸೇರಿದ್ದರಿಂದ ಆತನನ್ನು ಗಲ್ಲಿಗೇರಿಸಲಾಯಿತು.
ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನಿಂದ ತೀವ್ರ ಟೀಕೆಗಳ ಹೊರತಾಗಿಯೂ, ಸೌದಿ ಅರೇಬಿಯಾ ಮೇ ಆರಂಭದಲ್ಲಿ ಇಬ್ಬರು ಬಹ್ರೇನ್ ನಾಗರಿಕರನ್ನು ಗಲ್ಲಿಗೇರಿಸಿತು.
ಏತನ್ಮಧ್ಯೆ, ಸೌದಿ ಅರೇಬಿಯಾ ಕಳೆದ ವರ್ಷ 147 ಜನರನ್ನು ಮತ್ತು 2021 ರಲ್ಲಿ 60 ಜನರನ್ನು ವಿವಿಧ ಆರೋಪಗಳ ಮೇಲೆ ಗಲ್ಲಿಗೇರಿಸಿದೆ.
ಮಾಹಿತಿಯ ಪ್ರಕಾರ, ಈ ದೇಶವು ಮಾರ್ಚ್ 2022 ರಲ್ಲಿ ಒಂದೇ ದಿನದಲ್ಲಿ 81 ಜನರನ್ನು ಗಲ್ಲಿಗೇರಿಸಿದೆ.
ಆದರೆ, 2015ರಲ್ಲಿ ದೊರೆ ಸಲ್ಮಾನ್ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ 1,000ಕ್ಕೂ ಹೆಚ್ಚು ಮಂದಿಯನ್ನು ಗಲ್ಲಿಗೇರಿಸಲಾಗಿದೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿದೆ.
LATEST NEWS
ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ 67ಸಾವಿರ ರೂ ಕಳೆದುಕೊಂಡ ಮಹಿಳೆ..! ದೂರು ದಾಖಲು
ಕೋಟ: ಇನ್ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತನ್ನು ನಂಬಿ ಯುವತಿಯೊಬ್ಬಳು 60 ಸಾವಿರ ರೂ. ಹಣವನ್ನು ಕಳೆದುಕೊಂಡಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲೇ ಕುಳಿತು ಮೊಬೈಲ್‌ನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತನ್ನು ನೋಡಿ ಯುವತಿಯೊಬ್ಬಳು 60 ಸಾವಿರ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾಳೆ. ಇನ್ಸ್ಟಾಗ್ರಾಮ್‌ನಲ್ಲಿ ಬಂದ ಲಿಂಕನ್ನು ಅಕ್ಷತಾ(26 ವ) ಸ್ವೀಕರಿಸಿದ್ದಾರೆ. ಅದರಂತೆ ಲಿಂಕ್‌ಅನ್ನು ಒತ್ತಿದ ಕೂಡಲೇ ಅದು ವ್ಯಾಟ್ಸಾಪ್ ನಂಬರ್‌ಗೆ ಸಂಪರ್ಕಗೊಂಡಿದೆ. ಅದರಲ್ಲಿ ಮೊಬೈಲ್‌ನಲ್ಲಿ ಮಾಡುವ ಕೆಲಸದ ಬಗ್ಗೆ ಮಾಹಿತಿಯನ್ನು ನೀಡಿದ್ದರು.
ಆರಂಭದಲ್ಲಿ ನೋಂದಣಿ ಶುಲ್ಕ ಎಂದು ಅಕ್ಷತಾ 200 ರೂಪಾಯಿ ಹಣವನ್ನು ಫೋನ್ ಪೇ ಮೂಲಕ ವರ್ಗಾವಣೆ ಮಾಡಿದ್ದಾರೆ. ನಂತರ ಬೋನಸ್ ಎಂದು ಹೇಳಿ ಅಕ್ಷತಾ ರವರಿಗೆ 60 ರೂಪಾಯಿ ಹಣವನ್ನು ನೀಡಲಾಗಿದೆ. ಹೀಗೆ ಒಂದೇ ದಿನ 1,615 ರೂಪಾಯಿ ಅವರು ಪಾವತಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ವೈದ್ಯರಿಗೆ ಕೋಟ್ಯಾಂತರ ರೂಪಾಯಿ ಆನ್ಲೈನ್ ವಂಚನೆ..! ಆರೋಪಿಗಳಿಂದ 13,95,000 ನಗದು ವಶ..!!
ಜಾಹಿರಾತುದಾರರು 1/09/2024ರಂದು ಒಂಭತ್ತು ಆರ್ಡರ್‌ಗಳನ್ನು ಮುಗಿಸುವಂತೆ ತಿಳಿಸಿದ್ದು ಮೊದಲಿಗೆ 500ರೂ. ಪಾವತಿಸಿ ಅಕ್ಷತಾ ಕೆಲಸವನ್ನು ಆರಂಭಿಸಿದ್ದಾರೆ. ಪ್ರತಿಯೊಂದು ಆರ್ಡರ್‌ಗೆ ಹಣ ಪಾವತಿಸಲು ಅವರು ತಿಳಿಸಿದ್ದು ಅದರಂತೆ ಅಕ್ಷತಾ ಒಟ್ಟು 67,330 ರೂಪಾಯಿ ಹಣ ಪಡೆದು ತನಗೆ ಹಣ ವಂಚನೆ ಮಾಡಿರುವುದಾಗಿ ಕೋಟ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
LATEST NEWS
ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಗಸ್ತು ತಿರುಗಲು ಮತ್ತು ವೈಮಾನಿಕ ಸಮೀಕ್ಷೆ ನಡೆಸಲು ಮಿಲಿಟರಿ ಹೆಲಿಕಾಪ್ಟರ್ ಅನ್ನು ನಿಯೋಜಿಸಲಾಗಿದ್ದು, ಕೂಂಬಿಂಗ್ ಕಾರ್ಯಾಚರಣೆಯೂ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ.
LATEST NEWS
ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟ ಕಿಡಿಗೇಡಿಗಳು: ತಪ್ಪಿದ ರೈಲು ದುರಂತ
ಅಜ್ಮೀರ್: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ತಲಾ 70 ಕೆ.ಜಿ ತೂಕದ ಸಿಮೆಂಟ್ ಬ್ಲಾಕ್ ಗಳಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾನುವಾರ ಕೆಲವು ದುರ್ಷ್ಕಮಿಗಳು ಸರಕು ಸಾಗಣೆ ಕಾರಿಡಾರ್ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟಿದ್ದಾರೆ. ಗೂಡ್ಸ್ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ’ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್ ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು. ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್ ತುಂಬಿದ ಬಾಟಲಿಗಳು, ಗನ್ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿ ರೈಲು ಸಿಲಿಂಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು. ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ.
ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.
- LATEST NEWS6 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- DAKSHINA KANNADA5 days ago
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ; 21 ಶಿಕ್ಷಕರಿಗೆ ಪ್ರಶಸ್ತಿ
- FILM5 days ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ
- LATEST NEWS1 day ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್