LATEST NEWS
ಸೌದಿಯಲ್ಲಿ ವ್ಯಾಪಕವಾಗುತ್ತಿರುವ ವೈರಲ್ ಜ್ವರ: ಜನರಿಗೆ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಸೂಚನೆ..!
Published
2 years agoon
By
Adminರಿಯಾದ್ :ಸೌದಿ ರಾಷ್ಟ್ರದಲ್ಲಿ ವ್ಯಾಪಕವಾಗಿ ಸಾಂಕ್ರಾಇಕ ಹರಡುತ್ತಿದ್ದು ಜ್ವರವನ್ನು ತಪ್ಪಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಸೂಚಿಸಿದೆ.
ಲಸಿಕೆ ತೆಗೆದುಕೊಳ್ಳುವುದರ ಜೊತೆಗೆ, ಜನರು ತಮ್ಮ ಕಣ್ಣುಗಳು ಮತ್ತು ಬಾಯಿಯನ್ನು ನೇರವಾಗಿ ಸ್ಪರ್ಶಿಸುವುದನ್ನು ತಪ್ಪಿಸಬೇಕು ಎಂದು ಸಚಿವಾಲಯ ಮನವಿ ಮಾಡಿದೆ.
ಇದರ ಜೊತೆಗೆ ಜನರು ತಮ್ಮ ಕೈಗಳನ್ನು ತೊಳೆಯುವ ಜೊತೆಗೆ ಸೀನುವಾಗ ಜಾಗರೂಕರಾಗಿರಬೇಕೆಂದು ಸಚಿವಾಲಯ ಹೇಳಿದೆ.
ಸಾಂಕ್ರಾಮಿಕ ಜ್ವರದ ಲಕ್ಷಣಗಳಾದ ನಡುಕ, ಬೆವರುವಿಕೆ ಮತ್ತು 38 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಿನ ದೇಹ ತಾಪಮಾನವನ್ನು ಕಂಡುಬಂದರೆ ತಕ್ಷಣ ವ್ಯದ್ಯರ ಸಲಹೆ ಪಡೆಯುವಂತೆ ಸೂಚಿಸಲಾಗಿದೆ.
ಈ ರೋಗಲಕ್ಷಣಗಳ ಜೊತೆಗೆ, ಸ್ನಾಯು ನೋವು, ತಲೆನೋವು, ಗಂಟಲು ನೋವು, ನಿರಂತರ ಕೆಮ್ಮು, ಶುಷ್ಕತೆ ಮತ್ತು ಮೂಗು ಸೋರುವಿಕೆ ಸಹ ಈ ವೈರಲ್ ಜ್ವರದ ಲಕ್ಷಣಗಳಾಗಿವೆ.
ಜಾಗ್ರತೆ ತಪ್ಪಿದಲ್ಲಿಕೆಲವು ವ್ಯಕ್ತಿಗಳಲ್ಲಿ, ಜ್ವರವು ಅತಿಯಾಗಿ ನ್ಯುಮೋನಿಯಾ, ಬ್ರಾಂಕೈಟಿಸ್, ಕಿವಿಯ ಸೋಂಕುಗಳು, ರಕ್ತದ ವಿಷದೊಂದಿಗೆ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು ಎಂದು ಸಚಿವಾಲಯ ಎಚ್ಚರಿಸಿದೆ.
ಮಂಗಳೂರು:ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಡಿ.26 ರ ರಾತ್ರಿ ವಿಧಿವಶರಾಗಿದ್ದಾರೆ. ರಾತ್ರಿ 8 ಗಂಟೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರು ರಾತ್ರಿ 9.30 ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. 2004 ರಿಂದ 2014 ರ ವರೆಗೆ ಎರಡು ಅವಧಿಗೆ ದೇಶದ ಮೊದಲ ಸಿಕ್ ಪ್ರಧಾನಿಯಾಗಿದ್ದರು. ನೆಹರು ಇಂದಿರಾ ಗಾಂಧಿ ಮತ್ತು ಮೋದಿ ಬಳಿಕ ಹೆಚ್ಚು ಕಾಲ ದೇಶದ ಪ್ರಧಾನಿಯಾಗಿದ್ದ ಹೆಗ್ಗಳಿಕೆ ಇವರದು.
1932 ರ ಸೆಪ್ಟಂಬರ್ 26 ರಲ್ಲಿ ಪಶ್ಚಿಮ ಪಂಜಾಬ್ ನಲ್ಲಿ ಜನಿಸಿದ್ದ ಮನಮೋಹನ್ ಸಿಂಗ್
ಅಮೃತಸರ ಹಿಂದೂ ಕಾಲೇಜಿನಲ್ಲಿ ಅದ್ಯಯನ ಮಾಡಿದ್ದು ಉನ್ನತ ವ್ಯಾಸಂಗವನ್ನು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಟ್ರೈಪೋಸ್ ಪೂರ್ಣ ಮಾಡಿದ್ದರು.
ಖ್ಯಾತ ಅರ್ಥ ಶಾಸ್ತ್ರಜ್ಞರಾಗಿ, ಶಿಕ್ಷಣ ತಜ್ಞರಾಗಿ ಮನಮೋಹನ್ ಸಿಂಗ್ ಆರ್ಥಿಕ ಕ್ರಾಂತಿಯನ್ನು ದೇಶದಲ್ಲಿ ಮಾಡಿದ್ದರು. ದೇಶದ ಪ್ರಧಾನಿಯಾಗುವ ಮೊದಲು ಹಲವು ದೇಶಗಳ ಆರ್ಥಿಕ ಸಲಹೆಗಾರರಾಗಿ ಆ ದೇಶಗಳನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿದ್ದರು.
ಮಿತಭಾಷಿಯಾಗಿದ್ದ ಅವರು ತಮ್ಮ ಕೆಲಸದ ಮೂಲಕವೇ ಎಲ್ಲದಕ್ಕೂ ಉತ್ತರ ನೀಡುತ್ತಿದ್ದರು.
ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶದ ಜಿಡಿಪಿ ಶೇಖಡಾ9 ರಲ್ಲಿ ಇದ್ದು ಅಭಿವೃದ್ಧಿಶೀಲ ದೇಶಗಳ ಸಾಲಿನಲ್ಲಿ ದೇಶವನ್ನು ಗುರುತಿಸುವಂತೆ ಮಾಡಿದ್ದರು.
ಮಾಜಿ ಪ್ರಧಾನಿ ಅಗಲುವಿಕೆಯ ಸುದ್ದಿ ಕೇಳಿ ಸೋನಿಯಾ ಗಾಂಧಿ ಆದಿಯಾಗಿ ಕಾಂಗ್ರೆಸ್ ನಾಯಕರ ದಂಡು ಏಮ್ಸ್ ಆಸ್ಪತ್ರೆಗೆ ದಾವಿಸಿದ್ದಾರೆ. ಅಗಲಿದ ನಾಯಕನಿಗೆ ಪ್ರಧಾನಿ ಮೋದಿ ಸಹಿತ ಪ್ರಮುಖ ನಾಯಕರು ಶೃದ್ದಾಂಜಲಿ ಸಲ್ಲಿಸಿದ್ದಾರೆ.
LATEST NEWS
ಸಕಲ ಗೌರವಗಳೊಂದಿಗೆ ಹುತಾತ್ಮ ಯೋಧ ಅನೂಪ್ ಅಂತ್ಯಕ್ರಿಯೆ
Published
12 hours agoon
26/12/2024By
NEWS DESK4ಕುಂದಾಪುರ : ಪೂಂಚ್‌ನಲ್ಲಿ ನಡೆದ ಅಪಘಾ*ತದಲ್ಲಿ ಹುತಾ*ತ್ಮರಾದ ಕುಂದಾಪುರದ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಯೋಧ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಬೀಜಾಡಿಯ ಕಡಲ ತೀರದಲ್ಲಿ ಸರ್ಕಾರಿ ಗೌರವದೊಂದಿಗೆ ನಡೆಸಲಾಯಿತು. ಮೂರು ಸುತ್ತು ಕುಶಾಲ ತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಲಾಯಿತು.
ಇದನ್ನೂ ಓದಿ : ಮಗನ ಆ ಒಂದು ನಿರ್ಧಾರದಿಂದ ಸಾ*ವಿಗೆ ಶರಣಾದ ಹೆತ್ತವರು!
ಮೆರವಣಿಗೆಯ ಮೂಲಕ ಪಾರ್ಥೀವ ಶರೀರವನ್ನು ಬೀಜಾಡಿಯ ಅನೂಪ್ ನಿವಾಸಕ್ಕೆ ತರಲಾಯಿತು. ಅಲ್ಲಿ ಅಂತಿಮ ವಿಧಿ ವಿಧಾನ ನಡೆದು ಬೀಜಾಡಿ ಪಡುಶಾಲೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಯಿತು. ನೂರಾರು ಮಂದಿ ಆಗಮಿಸಿ ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದರು. ಬಳಿಕ ಅಂತ್ಯಕ್ರಿಯೆ ನಡೆಯಿತು.
ಚಿತೆಗೆ ಸಹೋದರ ಶಿವರಾಂ ಅಗ್ನಿಸ್ಪರ್ಶ ಮಾಡಿದ್ದು, ಸಾವಿರಾರು ಜನರು ಯೋಧನ ಅಂತಿಮ ವಿದಾಯಕ್ಕೆ ಸಾಕ್ಷಿಯಾಗಿದ್ದರು. 13 ವರ್ಷಗಳಿಗೂ ಅಧಿಕ ಕಾಲ ದೇಶ ಸೇವೆ ಮಾಡಿದ್ದ ಯೋಧ ಅಕಾಲಿಕವಾಗಿ ಅಗಲಿದ್ದು, ಇಡೀ ಜಿಲ್ಲೆಯೆ ಶೋಕ ಸಾಗರದಲ್ಲಿ ಮುಳುಗಿದೆ.
LATEST NEWS
ಕರಾವಳಿ ಉತ್ಸವದ ಪ್ರಯುಕ್ತ ಡಿಸೆಂಬರ್ 28 ಮತ್ತು 29 ರಂದು ಬೀಚ್ ಉತ್ಸವ
Published
13 hours agoon
26/12/2024By
NEWS DESK2ಮಂಗಳೂರು: ಕರಾವಳಿ ಉತ್ಸವದ ಹಿನ್ನಲೆಯಲ್ಲಿ ಡಿಸೆಂಬರ್ 28 ಮತ್ತು 29 ರಂದು ತಣ್ಣೀರು ಬಾವಿ ಬೀಚ್‌ನಲ್ಲಿ ಬೀಚ್ ಉತ್ಸವ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಜನರಿಗೆ ಬರಪೂರ ಮನರಂಜನೆ ನೀಡಲಿರುವ ಈ ಬೀಚ್ ಉತ್ಸವದಲ್ಲಿ ಖ್ಯಾತ ಹಿನ್ನೆಲೆ ಗಾಯಕರ ಸಮಾಗಮವಾಗಲಿದೆ.
ಈ ಬೀಚ್ ಉತ್ಸವದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದು, ಕಾರ್ಯಕ್ರಮಗಳ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಕಾರ್ಯಕ್ರಮಗಳಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕರಾಗಿರುವ ಮಣಿಕಾಂತ್ ಕದ್ರಿ ಹಾಗೂ ತನ್ನದೇ ಶೈಲಿಯ ಸಂಗೀತದ ಮೂಲಕ ಜಗತ್ಪ್ರಸಿದ್ದಿ ಪಡೆದುಕೊಂಡಿರುವ ಗಾಯಕ ರಘು ದೀಕ್ಷೀತ್ ಅವರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿದೆ.
ಇದರ ಜೊತೆಗೆ ಬೀಚ್ ಉತ್ಸವದಲ್ಲಿ ಡ್ಯಾನ್ಸ್ ಫೆಸ್ಟಿವಲ್ , ವಾಟರ್ ಸ್ಪೋರ್ಟ್ಸ್, ಸ್ಯಾಂಡ್ ಆರ್ಟ್ , ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವೀಕೆಂಡ್ ಎಂಜಾಯ್ ಮಾಡಲು ಇದೊಂದು ಸದಾವಕಾಶವಾಗಿದ್ದು, ಕರಾವಳಿ ಉತ್ಸವ ಸಂಭ್ರಮಕ್ಕೆ ಈ ಎರಡು ದಿನಗಳ ಬೀಚ್‌ನಲ್ಲಿ ಜನರಿಗೆ ಸಾಕಷ್ಟು ಮನರಂಜನೆ ಸಿಗಲಿದೆ. ವಾಹನ ನಿಲುಗಡೆಗೂ ಪೊಲೀಸ್ ಇಲಾಖೆಯಿಂದ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸುಲ್ತಾನ್ ಬತ್ತೇರಿಯಿಂದ ಬೋಟ್ ಮೂಲಕ ತೆರಳುವವರಿಗೂ ಹೆಚ್ಚಿನ ವ್ಯವಸ್ಥೆಯನ್ನ ಮಾಡಲಾಗಿದೆ.
ಮಂಗಳೂರಿನ ಖ್ಯಾತ ಬಿಲ್ಡರ್ ರೋಹನೊ ಕಾರ್ಪೋರೇಷನ್ ಈ ಬೀಚ್ ಫೆಸ್ಟಿವಲ್‌ಗೆ ಟೈಟಲ್ ಸ್ಪಾನ್ಸರ್ ಆಗಿ ಸಹಕರಿಸಿದ್ದು, ಬೀಚ್ ಫೆಸ್ಟಿವಲ್ ಸಮಿತಿಯ ಅದ್ಯಕ್ಷತೆಯನ್ನು ನಗರ ಪೊಲೀಸ್ ಆಯುಕ್ತರು ವಹಿಸಿಕೊಂಡಿದ್ದಾರೆ.