ಹೊಸದಿಲ್ಲಿ: ಸೌದಿ ಅರೇಬಿಯಾದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ.
ನವೆಂಬರ್‌ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಜಿ.20 ಶೃಂಗಸಭೆಗೆ ತೆರಳುವ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಭಾರತಕ್ಕೆ ಭೇಟಿ ನೀಡಲಿದ್ದಾರೆ. ನ.14 ರಂದು ಮುಂಜಾನೆ ಆಗಮಿಸಿ ಅಂದೇ ಶೃಂಗಸಭೆಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.