Thursday, September 29, 2022

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.


ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ನಮನಗಳು’ ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದರು.

ಗುರುವಾರ ಸಂಜೆ ಸಾರ್ವಜನಿಕ ಸ್ಥಳದಲ್ಲಿ ಈ ಫ್ಲೆಕ್ಸ್‌ಗಳು ಕಾಣಿಸಿಕೊಂಡಿದ್ದವು. ತಕ್ಷಣ ಎಚ್ಚೆತ್ತ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫ್ಲೆಕ್ಸ್‌ ಅನ್ನು ತೆರವು ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಫ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಉಡುಪಿ ಹಾಗೂ ಸುರತ್ಕಲ್‌ನಲ್ಲಿ ಇದೇ ರೀತಿಯ ಫ್ಲೆಕ್ಸ್‌ ಕಂಡುಬಂದಿತ್ತು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...