Monday, January 24, 2022

ಸಾವರ್ಕರ್ ಬ್ರಿಟಿಷರಿಗೆ ಬರೆದಿದ್ದು ಕ್ಷಮಾಪಣಾ ಪತ್ರವಲ್ಲ, ಒಪ್ಪಂದ ಪತ್ರ: ಮೊಮ್ಮಗ ಸಾತ್ಯಕಿ ಸಾವರ್ಕರ್

ಉಡುಪಿ: ಜೈಲಿನಿಂದ ಬಿಡುಗಡೆ ಕೋರಿ ಸಾವರ್ಕರ್ ಬ್ರಿಟಿಷರಿಗೆ ಬರೆದಿದ್ದು ಕ್ಷಮಾಪಣಾ ಪತ್ರವಲ್ಲ, ಆವೇದನ (ಒಪ್ಪಂದ) ಪತ್ರ ಎಂದು ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೇಳಿದರು.


ಉಡುಪಿಯ ಪುರಭವನದಲ್ಲಿ ನಿನ್ನೆ ಕೂರ್ಮ ಬಳಗ ಹಮ್ಮಿಕೊಂಡಿದ್ದ ‘ಜಯೋಸ್ತುತೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಡಮಾನ್ ಜೈಲಿನಲ್ಲಿ ಸಾವರ್ಕರ್‌ಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿತ್ತು.

ಮಾನಸಿಕ ಚಿತ್ರಹಿಂಸೆ ನೀಡಲು, ಮನೋಬಲ ಕುಂದಿಸಲು ಅವರ ಎದುರಿಗೇ ಕೈದಿಗಳನ್ನು ನೇಣು ಹಾಕಲಾಗುತ್ತಿತ್ತು ಆದರೂ ಅವರು ಎದೆಗುಂದಲಿಲ್ಲ.

ಅಂದು ಸಾವರ್ಕರ್‌ ಬ್ರಿಟಿಷರ ಬಳಿ ಕ್ಷಮೆ ಕೋರಿದರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲಿಲ್ಲ. ಗಾಂಧೀಜಿ ಹತ್ಯೆ ಹಿಂದೆಯೂ ಅವರ ಕೈವಾಡವಿತ್ತು ಎಂಬೆಲ್ಲ ಸುಳ್ಳು ಆರೋಪಗಳನ್ನು ಇಂದಿಗೂ ಮಾಡುತ್ತಿದ್ದಾರೆ.

ಆದರೆ, ಸತ್ಯ ಅರಿಯಬೇಕಾದರೆ ಸಾರ್ವಕರ್ ಇತಿಹಾಸ ತಿಳಿಯಬೇಕು’ ಎಂದರು.
ಕಾರ್ಯಕ್ರಮದಲ್ಲಿ ಸಂದೀಪ್ ಬಾಲಕೃಷ್ಣನ್‌, ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಇದ್ದರು.

Hot Topics

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

ಸುಳ್ಯ: ಅಂಗಡಿಗೆ ಬಂದ ಗ್ರಾಹಕನಿಗೆ ಮಾಲಕನಿಂದ ಹಲ್ಲೆ- ದೂರು ದಾಖಲು

ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ.ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...