Connect with us

UDUPI

ಕೊರಗ ಸಮುದಾಯದಲ್ಲಿ ಪಿಎಚ್‌ಡಿ ಪದವಿ ಪಡೆದ ಮೊದಲ ಮಹಿಳೆ ಸಬಿತಾ ಗುಂಡ್ಮಿ

Published

on

ಉಡುಪಿ: ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್‌, ಎನ್‌ಇಟಿ ಪರೀಕ್ಷೆಯನ್ನು ಪ್ರಥಮ ಯತ್ನದಲ್ಲೇ ತೇರ್ಗಡೆ ಹೊಂದಿ ಸಾಧನೆ ಮಾಡಿರುವ ಕೊರಗ ಸಮುದಾಯದ ಸಬಿತಾ ಕೊರಗ ಅವರು ಇದೀಗ ಪಿಎಚ್‌ಡಿ ಪಡೆದಿದ್ದಾರೆ.


ಈ ಮೂಲಕ ಸಮುದಾಯದ ಮೊದಲ ಮಹಿಳಾ ಡಾಕ್ಟರೇಟ್‌ ಪದವೀಧರೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಉಡುಪಿ ಜಿಲ್ಲೆಯ ಸಾಸ್ತಾನ ಸಮೀಪದ ಗುಂಡ್ಮಿಯ ಸಬಿತಾ ಶೈಕ್ಷಣಿಕವಾಗಿ ಸಾಧನೆ ಮಾಡುವ ಕನಸು ಹೊಂದಿದ್ದರು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ

ನೇಮಕಗೊಂಡಿರುವ ಸಬಿತಾ ಕೊರಗ ಅವರಿಗೆ ಸಮಾಜಶಾಸ್ತ್ರ ವಿಭಾಗದಲ್ಲಿ ಪಿಎಚ್‌ಡಿಗೆ ಅವಕಾಶ ದೊರೆತಿತ್ತು.

ಮಂಗಳೂರು ವಿವಿಯ ಸಮಾಜಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಜೋಗನ್ ಶಂಕರ್ ಮಾರ್ಗದರ್ಶನದಲ್ಲಿ

‘ಇವ್ಯಾಲ್ಯುವೇಷನ್ ಆಫ್ ಪಾಲಿಸೀಸ್ ಆಂಡ್ ಪ್ರೋಗ್ರಾಮ್ಸ್ ಆಫ್ ಟ್ರೈಬಲ್ ಡೆವಲಪ್‌ಮೆಂಟ್ ಆಫ್ ಕರ್ನಾಟಕ ಸ್ಟೇಟ್’ ಎಂಬ ವಿಷಯದಲ್ಲಿ ಮಂಗಳೂರು ವಿವಿಗೆ ಮಂಡಿಸಿದ ಪ್ರಬಂಧವನ್ನು ಪಿಎಚ್‌ಡಿಗೆ ಅಂಗೀಕರಿಸಲಾಗಿದೆ.

Click to comment

Leave a Reply

Your email address will not be published. Required fields are marked *

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

LATEST NEWS

Trending