Monday, January 24, 2022

ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಇಳಿದ SCDCC ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್‌ ರಾಜೇಂದ್ರ ಕುಮಾರ್..!

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಬಲ ಪಕ್ಷಗಳಿಗೆ ಸ್ಪರ್ಧೆ ನೀಡಲು ಸಹಕಾರಿ ಧುರೀಣ ಕಣಕ್ಕೆ ಇಳಿಯಲಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಉತ್ಸಾಹ ತೋರಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಡಾ. ಎಂ ಎನ್ ಆರ್ ಈ ಕುರಿತು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ನಿನ್ನೆಯಿಂದ ಎಲ್ಲರೂ ನನಗೆ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹಾಕುತ್ತಿದ್ದಾರೆ.

ಎರಡು-ಮೂರು ದಿನಗಳಲ್ಲಿ ಚುನಾವಣೆಗೆ ನಿಲ್ಲುವ ಬಗ್ಗೆ ತೀರ್ಮಾನ ಮಾಡುತ್ತೇನೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ.

ಸೋಲು-ಗೆಲುವು ಮುಖ್ಯವಲ್ಲ ಯಾವುದೇ ಕಾರಣಕ್ಕೂ ಪಕ್ಷದಿಂದ ಸ್ಪರ್ಧಿಸುವುದಿಲ್ಲ. ನವೋದಯ ಸದಸ್ಯರು, ಪಂಚಾಯತ್ ಸದಸ್ಯರು, ಸ್ವಸಹಾಯ ಸಂಘ, ಸಹಕಾರಗಳಿಂದ ಒತ್ತಡ ಇದೆ.

ನಂಬರ್ 17ರಂದು ನನ್ನ ತೀರ್ಮಾನ ಪ್ರಕಟಿಸುತ್ತೇನೆ.ಸಾಧ್ಯವಾದರೆ ಅದೇ ದಿನ ನಾಮಪತ್ರ ಸಲ್ಲಿಸುತ್ತೇನೆ ಎಂದರು.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...

ಮುಡಿಪು: ದ್ವಿಚಕ್ರ ವಾಹನಕ್ಕೆ ಒಂದೇ ತಿಂಗಳಲ್ಲಿ ಬರೋಬ್ಬರಿ 9 ಸಾವಿರ ಟ್ರಾಫಿಕ್ ಫೈನ್-ಬೆಚ್ಚಿಬಿದ್ದ ಮಾಲಕಿ

ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ‌ ನಡೆದಿದೆ.ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್...