Connect with us

    LATEST NEWS

    “ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್”-ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

    Published

    on

    ಉಪ್ಪುಂದ: “ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್ ಆಗಿದ್ದು ಅದರ ಕಾರ್ಯವೈಖರಿ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ.” ಎಂದು ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು.


    ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ 110ನೇ ಉಪ್ಪುಂದ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    “ಕೋವಿಡ್ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಗಳಿಂದ ಸಾಲ ಪಡೆದಿದ್ದ ಸದಸ್ಯರು ಮರಣ ಹೊಂದಿದ್ದಾರೆ. ಈ ಬಗ್ಗೆ ಅಪೆಕ್ಸ್ ಬ್ಯಾಂಕ್ ನಲ್ಲಿ ಸಭೆ ನಡೆಸಿ ಮೃತರ ಕುಟುಂಬಗಳಿಗೆ ನೆರವಾಗುವ ನಿರ್ಧಾರಕ್ಕೆ ಬರಲಾಯಿತು.

    ಈ ವೇಳೆ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಅವರು ತಲಾ 1 ಲಕ್ಷ ರೂ. ನೆರವು ಘೋಷಣೆ ಮಾಡಿದ್ದು ಅದರಂತೆ ಇಂದು ಮೃತರ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಲಾಗಿದೆ.

    ಎಲ್ಲ ಸಹಕಾರ ಸಂಘಗಳನ್ನು ಒಂದೇ ತಂತ್ರಾಂಶದಡಿಯಲ್ಲಿ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು ಅವರು ಒಂದು ವರ್ಷದೊಳಗೆ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ 15 ಹಾಲಿನ ಯೂನಿಯನ್ ಇದ್ದು 26 ಲಕ್ಷ ರೈತರು ಹಾಲು ಪೂರೈಕೆ ಮಾಡುತ್ತಿದ್ದಾರೆ.

    ಅದರಲ್ಲಿ 9 ಲಕ್ಷ ಮಹಿಳೆಯರು ಸದಸ್ಯರಾಗಿರುವುದು ಖುಷಿಯ ವಿಚಾರ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಎಲ್ಲರಿಗೂ ಕಾರ್ಡ್ ವಿತರಿಸಲು ಸರಕಾರ ಮುಂದಾಗಿದೆ.” ಎಂದರು.

    “ಮಣ್ಣಿನ ಮಕ್ಕಳು ಸಾಮಾನ್ಯವಾಗಿ ಕೃಷಿ ಖಾತೆ ಕೇಳಲ್ಲ, ಪಿಡಬ್ಲ್ಯು ಖಾತೆಯೋ ಇನ್ನಿತರ ಖಾತೆಯನ್ನೋ ಕೇಳ್ತಾರೆ. ಆದರೆ ಓರ್ವ ಕೃಷಿಕನಾಗಿದ್ದು ಬಿ.ಸಿ. ಪಾಟೀಲ್ ಅವರು ಕೃಷಿ ಖಾತೆಯನ್ನು ಕೇಳಿ ಪಡೆದು ರಾಜ್ಯದಲ್ಲಿ ಕೃಷಿ ಉಳಿವಿಗಾಗಿ ದುಡಿಯುತ್ತಿದ್ದಾರೆ. ಅವರ ಶ್ರಮದಿಂದ ರಾಜ್ಯದ ಕೃಷಿ ಇಲಾಖೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ” ಎಂದರು.

    ಬಳಿಕ ಮಾತಾಡಿದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು, “ಉತ್ತರ ಕರ್ನಾಟಕ ಭಾಗದ ಹಲವಾರು ಕಾರ್ಖಾನೆಗಳಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಲ ಸೌಲಭ್ಯ ನೀಡುತ್ತಾ ಬಂದಿದೆ.

    ನನ್ನ ನಿರಾಣಿ ಗ್ರೂಪ್ ಗೆ 25 ವರ್ಷಗಳ ಹಿಂದೆ 12 ಕೋಟಿ ರೂ. ಸಾಲವನ್ನು ರಾಜೇಂದ್ರ ಕುಮಾರ್ ಅವರು ನೀಡಿದ್ದು ಅದರಿಂದ ನನ್ನ ಉದ್ದಿಮೆ ಇಂದು ಯಶಸ್ವಿಯಾಗಿ ಬೆಳೆದು ನಿಂತ ಪರಿಣಾಮ 75,000 ಮಂದಿ ದುಡಿಯಲು ಅವಕಾಶ ಸಿಕ್ಕಿದೆ.

    ನನ್ನ ಸಂಸ್ಥೆ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆಯಲು ರಾಜೇಂದ್ರ ಕುಮಾರ್ ಅವರ ಪ್ರೋತ್ಸಾಹವೇ ಕಾರಣ” ಎಂದರು.

    ಇದೇ ವೇಳೆ ಬಿಜೂರಿನ ನೂತನ ಸ್ವಸಹಾಯ ಗುಂಪಿನ ಉದ್ಘಾಟನೆಯನ್ನು ಕೃಷಿ ಸಚಿವ ಬಿ. ಸಿ. ಪಾಟೀಲ್ ನೆರವೇರಿಸಿದರು.

    ಬಳಿಕ ಮಾತಾಡಿದ ಅವರು, “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣುಮಕ್ಕಳು ಸ್ವಾವಲಂಬಿಯಾದರೆ ಆಕೆಯ ಇಡೀ ಕುಟುಂಬದ ಅಭಿವೃದ್ಧಿಯಾಗುತ್ತದೆ.

    ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ನೀಡಿ ಅವರನ್ನು ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯ.

    ಸರಕಾರಗಳು ಮಾಡಬೇಕಿರುವ ಕೆಲಸವನ್ನು ಇಂದು ರಾಜೇಂದ್ರ ಕುಮಾರ್ ಮಾಡುತ್ತಾ ಬಂದಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ.

    ಅವರ ಸಾಮಾಜಿಕ ಕಳಕಳಿ ಇದೇ ರೀತಿ ಮುಂದುವರಿದು ನಾಡಿನೆಲ್ಲೆಡೆಯ ಜನರು ಪ್ರಯೋಜನ ಪಡೆಯುವಂತಾಗಲಿ” ಎಂದರು.

    ಸಮಾವೇಶವನ್ನು ಉದ್ದೇಶಿಸಿ ಮಾತಾಡಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, “ಉಪ್ಪುಂದ ಶಾಖೆಯು ಉದ್ಘಾಟನೆಗೊಂಡ ದಿನವೇ 4000 ಖಾತೆಗಳು ತೆರೆಯಲ್ಪಟ್ಟಿವೆ. ಇದಕ್ಕಾಗಿ ನಾನು ಇಲ್ಲಿನ ಗ್ರಾಹಕರಿಗೆ ಅಭಾರಿಯಾಗಿದ್ದೇನೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕ ಸಂಕಷ್ಟದಿಂದ ಸಕಾಲದಲ್ಲಿ ಸಾಲ ಸಿಗದ ಕಾರಣಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅದೇ ರೀತಿ ಶೇ.100ರಷ್ಟು ಸಾಲ ಮರುಪಾವತಿಯಾಗುತ್ತಿದೆ. ಇದು ನಾವೆಲ್ಲರೂ ಹೆಮ್ಮೆ ಪಡಬೇಕಾದ ಸಂಗತಿಯಾಗಿದೆ.

    ಬ್ಯಾಂಕ್ ಇಷ್ಟು ದೊಡ್ಡಮಟ್ಟದಲ್ಲಿ ಬೆಳೆಯಲು ಕಾರಣ ನಾನೊಬ್ಬನೇ ಅಲ್ಲ, ನೀವು. ಯಾಕೆಂದರೆ ನೀವು ಪಡೆದುಕೊಂಡ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದ ಕಾರಣ ಇದು ಸಾಧ್ಯವಾಯಿತು.

    ಬರೀ ಭಾಷಣದಲ್ಲಿ ಮಾತೆಯರೇ ತಾಯಂದಿರೇ ಎಂದರೆ ಸಾಲದು.

    ನಾನು ನಿಮ್ಮನ್ನು ಸ್ವಾವಲಂಬಿಯನ್ನಾಗಿ ಮಾಡಲು ನಿಮ್ಮನ್ನು ನಂಬಿ ಸಾಲ ನೀಡುತ್ತಿದ್ದೇನೆ. ಇದಕ್ಕಾಗಿ ಮನೆ ಅಡಮಾನ ಇಡಬೇಕಿಲ್ಲ. ನಿಮ್ಮದೇ ಗುಂಪು ರಚಿಸಿದ್ದೀರಿ, ನಿಮ್ಮೆಲ್ಲರ ಮೇಲೆ ವಿಶ್ವಾಸವಿರಿಸಿ ಸಾಲ ನೀಡಿದ್ದೇನೆ. ನೀವು ಮರುಪಾವತಿ ಮಾಡಿದ್ದೀರಿ.

    ನೀವು ನನಗೇನೂ ಕೊಡುವುದು ಬೇಡ, ಸಾಲ ಪಡೆದು ಅನ್ಯ ಖರ್ಚು ಮಾಡದೇ ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರನ್ನು ಮುಂದೆ ಅವರ ಕಾಲ ಮೇಲೆ ನಿಲ್ಲಿಸಿ.

    ಅವರು ನಿಮ್ಮ ಇಡೀ ಕುಟುಂಬಕ್ಕೆ ಬೆಳಕಾಗುತ್ತಾರೆ. ಇದು ನನ್ನೊಬ್ಬನ ಸಾಧನೆಯಲ್ಲ ನಮ್ಮೆಲ್ಲರ ಟೀಮ್ ವರ್ಕ್ ನಿಂದ ಇದು ಸಾಧ್ಯವಾಗಿದೆ.” ಎಂದರು.

    ಇದೇ ವೇಳೆ ಕೋವಿಡ್ ನಿಂದ ಮೃತಪಟ್ಟ ನವೋದಯ ಸ್ವಸಹಾಯ ಸಂಘದ ಸದಸ್ಯರ ಕುಟುಂಬಕ್ಕೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ವಿತರಿಸಲಾಯಿತು.

    ಮೃತ ಸದಸ್ಯರ ಚೈತನ್ಯ ವಿಮಾ ಚೆಕ್ ಅನ್ನು ಕುಟುಂಬ ಸದಸ್ಯರಿಗೆ ವಿತರಿಸಲಾಯಿತು. ಉಪ್ಪುಂದ ನೂತನ ಶಾಖೆಯಿಂದ ವಾಹನದ ಸಾಲ ಪತ್ರ ವಿತರಣೆ ಮಾಡಲಾಯಿತು.

    ವೇದಿಕೆಯಲ್ಲಿ ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಶಾಸಕ ಜಿ. ಟಿ. ದೇವೇಗೌಡ, ಸಂಸದ ಬಿ. ವೈ. ರಾಘವೇಂದ್ರ,

    ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ,

    ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ,

    ಉಪ್ಪುಂದ ಲಕ್ಷ್ಮಿ ಖಾರ್ವಿ, ಹಿರಿಯಣ್ಣ ಶೆಟ್ಟಿ, ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಮಹೇಶ್ ಮೊಳಹಳ್ಳಿ ಧನ್ಯವಾದ ಅರ್ಪಿಸಿದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending