ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಇದರ ಅಧ್ಯಕ್ಷರೂ ಆಗಿದ್ದಾರೆ. ರಾಜ್ಯದ ಸಹಕಾರ ಕ್ಷೇತ್ರದ ಧುರೀಣ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶೀಘ್ರ ಕೊರೊನಾ ಸೋಂಕಿನಿಂದ ಗುಣಮುಖರಾಗಲೇಂದು ರಾಜಕೀಯ ಗಣ್ಯರು ಹಾಗೂ ಸಹಕಾರಿಗಳು ಶುಭ ಹಾರೈಸಿದ್ದಾರೆ.