Connect with us

    DAKSHINA KANNADA

    ವಿದ್ಯುತ್ ಉತ್ಪಾದಿಸಿ, ಮಾರಾಟ ಮಾಡುವ ಮೂಲಕ ಹಣ ಸಂಪಾದಿಸುವ ಯೋಜನೆ

    Published

    on

    ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ‘( ಪಿಎಂ ಸೂರ್ಯ ಗೃಹ – ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಇಂದು(ಆ .26)ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು.

    ‘ಇನರ್ಜಿಯ ಸೋಲಾರ್ ಕಂಪನಿ’ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78000 ರೂ. ಸಬ್ಸಿಡಿ ಪತ್ರವನ್ನು ಹಸ್ತಾಂತರ ಮಾಡಿದರು.

    ಈ ವೇಳೆ ಮಾತನಾಡಿದ ಸಂಸದರು “ಸೂರ್ಯನಿಂದ ಉತ್ಪತ್ತಿಯಾಗುವ ಸೌರಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಮೂಲಕ ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆಯಲ್ಲಿ ಭಾರತ ಕ್ರಾಂತಿ ಸೃಷ್ಟಿಸಿದ ದೇಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆ ಒಂದು ಕುಟುಂಬವನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಈ ಯೋಜನೆ ಮೂಲಕ ಅಗತ್ಯವಿರುವ ವಿದ್ಯುತ್ ನ್ನು ಉತ್ಪಾದಿಸಿ ಬಳಸುವ ಜೊತೆಗೆ ಉಳಿದ ಯುನಿಟ್ ಗಳನ್ನು ಮಾರಾಟ ಮಾಡಬಹುದಾಗಿದೆ. ಇದು ಕರ್ನಾಟಕದಲ್ಲಿ ಇರುವಂತೆ ಹಣ ಕೊಟ್ಟು ಪಡೆಯುವ ಗ್ಯಾರಂಟಿಯಲ್ಲ. ಇದು ಹಣ ಸಂಪಾದನೆ ಮಾಡಿ ತಮ್ಮ ಬದುಕಿಗೆ ಗ್ಯಾರಂಟಿ ಪಡೆಯುವಂಥ ಯೋಜನೆಯಾಗಿದೆ ಎಂದು ಹೇಳಿದರು.

    “ಪ್ರಧಾನಿಗಳ ಇಂತಹ ಮಹತ್ವಾಕಾಂಕ್ಷಿ ಯೋಜನೆಗಳನ್ನು ಮೊದಲು ಒಂದು ಗ್ರಾಮ ವಾರ್ಡ್ ಅಥವಾ ಬೂತ್ ಮಟ್ಟದಲ್ಲಿ ಮಾದರಿಯಾಗಿ ಅನುಷ್ಟಾನಗೊಳಿಸಬೇಕು. ಸಣ್ಣ- ಸಣ್ಣ ಪ್ರದೇಶದಲ್ಲಿ ಅನುಷ್ಠಾನ ಪ್ರಕ್ರಿಯೆ ಸುಲಭವಾಗುತ್ತದೆ. ಇದರಿಂದ ಮುಂದೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಲು ಅನುಕೂಲವಾಗುವ ಜೊತೆಗೆ ಪ್ರೇರಣೆ ನೀಡುತ್ತದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಒಂದು ಬೂತ್ ಅಥವಾ ವಾರ್ಡ್ ನಲ್ಲಿ ಈ ಯೋಜನೆಗಳನ್ನು ಅನುಷ್ಟಾನಗೊಳಿಸಿ ಮಾದರಿಯನ್ನಾಗಿ ರೂಪಿಸುವುದಕ್ಕೆ ಕಾರ್ಯಪ್ರವೃತ್ತರಾಗಬೇಕು” ಎಂದು ಸಲಹೆ ನೀಡಿದರು.

    ಇದೇ ವೇಳೆ ಶಾಸಕ ವೇದವ್ಯಾಸ್ ಕಾಮತ್ , ಪಾಲಿಕೆ ಸದಸ್ಯೆ ವನಿತಾ ಪ್ರಸಾದ್, ಇನರ್ಜಿಯ ಕಂಪನಿಯ ಅರವಿಂದ್, ಸೂರಜ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

    ಏನಿದು ಪಿಎಂ ಸೂರ್ಯ ಘರ್ ಯೋಜನೆ?
    ದೇಶದ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ಮೋದಿಯವರ ಕನಸಿನ ಯೋಜನೆ ಇದಾಗಿದೆ. ಈ ಯೋಜನೆಯಡಿಯಲ್ಲಿ, ಜನರಿಗೆ ತಮ್ಮ ಮನೆಯ ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲು 78,000 ರೂ. ಗಳವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ. ಇದರ ಫಲಾನುಭವಿಗಳು ಉತ್ಪತ್ತಿಯಾದ ವಿದ್ಯುತ್ ನ್ನು ಬಳಕೆ ಮಾಡಿಕೊಂಡು ಉಳಿದ ಯೂನಿಟ್ ಗಳನ್ನು ವಿತರಣಾ ಸಂಸ್ಥೆಗೆ ಮಾರಾಟ ಮಾಡುವ ಮೂಲಕ ಲಾಭ ಗಳಿಸಬಹುದಾಗಿದೆ.

    1 Comment

    1 Comment

    1. Muhammad Athaulla

      01/09/2024 at 10:32 AM

      ಕರ್ನಾಟಕ ದಲ್ಲಿ ಇರುವುದು ದುಡ್ಡು ಕೊಡದೆ ಇರುವ ಗ್ಯಾರಂಟಿ. ಸಂಸದ ಸುಳ್ಳು ಹೇಳಿದ್ದಾರೆ.
      ಸೂರ್ಯಗರ್ ಶ್ರೀಮಂತ ವ್ಯಕ್ತಿಗಳಿಗೆ ಮಾಡಿದ ವ್ಯವಹಾರ.
      ಮೊದಲು ಇನ್ವೆಸ್ಟ್ ಮಾಡಬೇಕು ನಂತರ ಅರ್ಧ ಹಣ ವಾಪಾಸ್ ಸಿಗುತ್ತದೆ.
      ಅದರಲ್ಲೂ ಪಾಲು ಕೇಳುವ ಜನರು ಇರಬಹುದು ಎನೋ?

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending